ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದು, ಘಟನೆಯಲ್ಲಿ ಭಾಗಿಯಾದ ಇಬ್ಬರು ಭಯೋತ್ಪಾದಕರ ರೇಖಾಚಿತ್ರಗಳನ್ನು ಭದ್ರತಾ ಸಂಸ್ಥೆಗಳು ಬಿಡುಗಡೆ ಮಾಡಿವೆ. ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಸರ್ವ ಪ್ರಯತ್ನಗಳನ್ನು ಮಾಡುತ್ತಿವೆ. ಭಯೋತ್ಪಾದಕ ದಾಳಿಯ ಕೆಲವೇ ಗಂಟೆಗಳಲ್ಲಿ, ಶಂಕಿತ ಭಯೋತ್ಪಾದಕನ ಮೊದಲ ಫೋಟೋ ಬಹಿರಂಗಗೊಂಡಿದೆ ಎಂದು ವರದಿಯಾಗಿದೆ. ವೀಡಿಯೊವೊಂದರಲ್ಲಿ ತೆಗೆದ ಸ್ಕ್ರೀನ್‌ಶಾಟ್‌ನಲ್ಲಿ, ಭಯೋತ್ಪಾದಕನೆಂದು ಶಂಕಿಸಲಾದ ವ್ಯಕ್ತಿಯೊಬ್ಬ ಕುರ್ತಾದಲ್ಲಿ ಎಕೆ…

