ಮೂಡುಬಿದಿರೆ: ಭೀಕರ ಅಪಘಾತ, ವಿದ್ಯಾರ್ಥಿನಿ ದಾರುಣ ಅಂತ್ಯ

ಮೂಡುಬಿದಿರೆ: ಸರ್ಕಾರಿ ಬಸ್ ಗೆ ಬೈಕೊಂದು ಢಿಕ್ಕಿ ಹೊಡೆದು ಸಹಸವಾರೆಯೊರ್ವಳು ಗಂಭೀರ ಗಾಯಗೊಂಡು ಮೃತಪಟ್ಟಿರುವ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ. ಇಂಜಿನಿಯರಿಂಗ್ ವಿದ್ಯಾರ್ಥಿನಿ, ಇಪ್ಪತ್ತು ವರ್ಷದ ನಿಕ್ಷಿತಾ ಸಾವನ್ನಪ್ಪಿದ ಯುವತಿ. ಈಕೆ ತನ್ನ ಗೆಳೆಯನೊಂದಿಗೆ ಬರುತ್ತಿದ್ದಾಗ ಈ ದುರಂತ ನಡೆದಿದೆ. ಬೆಳುವಾಯಿ ಮೂಲದ ಈಕೆ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು. ಸವಾರನ ನಿರ್ಲಕ್ಷ್ಯದಿಂದ ಈ ಅಪಘಾತ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗದೆ ಮೃತಪಟ್ಟಿದ್ದಾಳೆ. ಮೃತ ಯುವತಿಯ ಗೆಳೆಯ ಮಾರ್ನಾಡಿನ ರಂಜಿತ್ ವಿರುದ್ಧ…

Read More

ಬೆಳ್ತಂಗಡಿ: ಹಾಡಹಗಲೇ ಮನೆಯ ಬೀಗ ಮುರಿದು ಕಳ್ಳತನ..!!

ಬೆಳ್ತಂಗಡಿ: ಹಾಡಹಗಲೇ ಮನೆಯ ಬೀಗ ಮುರಿದು ಒಳನುಗ್ಗಿ ಸುಮಾರು ಹದಿಮೂರು ಲಕ್ಷ ಬೆಲೆಬಾಳುವ ಚಿನ್ನಾಭರಣ, ಹಣ ಕಳವು ಮಾಡಿ ಪರಾರಿಯಾದ ಘಟನೆ ಬೆಳ್ತಂಗಡಿಯ ಮಾಲಾಡಿ ಗ್ರಾಮದ ಕೊಲ್ಪೆದಬೈಲು ಎಂಬಲ್ಲಿ ನಡೆದಿದೆ. ಮನೆಯ ಯಜಮಾನಿ ವಸಂತಿ ಹೆಗ್ಡೆ ಮತ್ತು ಅವರ ಮಗ-ಸೊಸೆ ಮನೆಗೆ ಬೀಗ ಹಾಕಿ ಬೆಳ್ತಂಗಡಿಗೆ ತೆರಳಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡು ಖದೀಮರು ಬೀಗ ಮುರಿದು ಮನೆಗೆ ನುಗ್ಗಿದ್ದಾರೆ. ಮನೆಯ ಕೋಣೆಯ ಕಪಾಟಿನಲ್ಲಿಟ್ಟಿದ್ದ ಹದಿಮೂರು ಲಕ್ಷ, ಎಪ್ಪತ್ತು ಸಾವಿರ ಬೆಲೆಬಾಳುವ ಚಿನ್ನಾಭರಣ ಮತ್ತು ಮೂವತ್ತು ಸಾವಿರ ಹಣ…

Read More

ಇನ್ನು ಶಾಲೆಗಳಲ್ಲೂ ಹೆಣ್ಣು ಮಕ್ಕಳಿಗೆ ಶೇ. 50 ಸೀಟುಗಳು ಮೀಸಲು

ಬೆಂಗಳೂರು: ರಾಜ್ಯ ಸರಕಾರ ಮಹಿಳೆಯರ ಅಭಿವೃದ್ಧಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ರಾಜ್ಯದ ಹೆಣ್ಣು ಮಕ್ಕಳಿಗೆ (girl Students) ಶಿಕ್ಷಣ ಇಲಾಖೆ ಶುಭ ಸುದ್ದಿ ಕೊಟ್ಟಿದ್ದು, ಇನ್ಮುಂದೆ ಎಲ್ಲಾ ಶಾಲೆಗಳಲ್ಲೂ ಹೆಣ್ಣು ಮಕ್ಕಳಿಗೆ ಶೇಕಡಾ 50ರಷ್ಟು ಸೀಟುಗಳನ್ನು ಮೀಸಲಿಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದು ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳಿಗೂ ಕೂಡ ಅನ್ವಯವಾಗಲಿದೆ. CBSE, ICSE ಕೇಂದ್ರ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೂ ಅನ್ವಯವಾಗುವಂತೆ ಮೀಸಲಾತಿ ಜಾರಿಗೊಳಿಸಿ ಸರಕಾರ ಆದೇಶಿಸಿದೆ. ಪ್ರತೀ ತರಗತಿಯಲ್ಲಿ ಲಭ್ಯವಿರುವ…

Read More

ಪತ್ನಿಯಿಂದಲೇ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕನ ಭೀಕರ ಹತ್ಯೆ

ಬೆಂಗಳೂರು: ಪತ್ನಿಯೇ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ನಡೆದಿದೆ. ಮೊದಲು ಓಂ ಪ್ರಕಾಶ್ ಹತ್ಯೆ ಬಗ್ಗೆ ಅವರ ಪತ್ನಿ ಮಾಹಿತಿ ನೀಡಿದ್ದರು. ಆದರೆ ತದನಂತರ ಸ್ವತಹ ಓಂ ಪ್ರಕಾಶ್ ಪತ್ನಿಯೇ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು, ಕೊಡಲೇ ಅವರ ಪತ್ನಿ ಪೊಲೀಸರಿಗೆ ಮಾಹಿತಿ ನೀಡಿದ್ದರು. 1981ರ…

Read More

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಕಾರು…! ಚಾಲಕನಿಗೆ ಗಂಭೀರ ಗಾಯ

ಮಂಗಳೂರು: ವಿಮಾನ ನಿಲ್ದಾಣ ರಸ್ತೆಯಲ್ಲಿ ಕಾರೊಂದು ರಸ್ತೆಯ ಬದಿಗೆ ಉರುಳಿ ಬಿದ್ದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಪಘಾತ ನಡೆದ ತಕ್ಷಣ ಕಾರಿನಲ್ಲಿದ್ದವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನೆಯ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ರಸ್ತೆಯ ಬದಿಗೆ ಉರುಳಿದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳೀಯರೊಬ್ಬರ ಮಾಹಿತಿ ಪ್ರಕಾರ ಚಾಲಕನಿಗೆ ತೀವು ಸ್ವರೂಪದ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

Read More

ಮಂಗಳೂರು: ಜೋಡಿ ಕೊಲೆ ಪ್ರಕರಣ-ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ನಗರದ ಅತ್ತಾವರದಲ್ಲಿ 2014ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೇರಳ ಕಾಸರಗೋಡಿನ ಚೆರ್ಕಳ ಎಂಬಲ್ಲಿನ ಮುಹಜೀರ್ ಸನಾಫ್ (25), ಕಾಸರಗೋಡು ವಿದ್ಯಾನಗರದ ಇರ್ಷಾದ್ (24) ಹಾಗೂ ಸಫ್ವಾನ್ (24) ಶಿಕ್ಷೆಗೊಳಗಾದ ಆರೋಪಿಗಳು. ಇವರು ನಾಫೀರ್ ಮತ್ತು ಫಾಹಿಮ್ ಎಂಬವರನ್ನು ಕೊಲೆಗೈದಿದ್ದರು. ನಾಫೀರ್ ಮತ್ತು ಫಾಹಿಮ್ ಗೆಳೆಯರಾಗಿದ್ದರು. ನಾಫೀರ್ ವಿದೇಶದಿಂದ ಚಿನ್ನದ ಗಟ್ಟಿಗಳನ್ನು ತಂದಿದ್ದ. ಅವುಗಳನ್ನು ಮಾರಾಟ…

Read More

ಬಂಟ್ವಾಳ: ಅಂಗಡಿ ಬೀಗ ಮುರಿದು ಕಳ್ಳತನ- ಆರೋಪಿ ಅರೆಸ್ಟ್

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುದು ಗ್ರಾಮದ ಪರಂಗಿಪೇಟೆಯಲ್ಲಿರುವ ವಿಶ್ವಾಸ ಸಿಟಿ ಸೆಂಟರ್ ನ ವೈಟ್ ಲೈನ್ ಕಿಡ್ಸ್ ವರ್ಲ್ಡ್ ಬಟ್ಟೆ ಅಂಗಡಿಗೆ ದಿನಾಂಕ ಏ. 11ರಂದು ರಾತ್ರಿ ಕಳ್ಳರು ಅಂಗಡಿಯ ಶಟರ್ ಗೆ ಅಳವಡಿಸಿದ ಬೀಗವನ್ನು ಮುರಿದು ಒಳಪ್ರವೇಶಿಸಿ ಕ್ಯಾಶ್ ಕೌಂಟರ್ ನಲ್ಲಿದ್ದ ನಗದನ್ನು ಕಳವುಗೈದ ಘಟನೆ ನಡೆದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 42/2025 ಕಲಂ: 331(4) 305 ಬಿ.ಎನ್‌. ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ ತನಿಖೆ ನಡೆಸಲಾಗಿ ಆರೋಪಿಯಾದ…

Read More

SHOCKING : ರಾಜ್ಯದಲ್ಲಿ ಒಂದೇ ವರ್ಷ 958 ನಕಲಿ ವೈದ್ಯರು ಪತ್ತೆ.

ಬೆಂಗಳೂರು : ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಒಂದೇ ವರ್ಷದಲ್ಲೇ ಬರೋಬ್ಬರಿ 958 ಮಂದಿ ನಕಲಿ ವೈದ್ಯರನ್ನು ಪತ್ತೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆರೋಗ್ಯ ಇಲಾಖೆಯು ರಾಜ್ಯದಲ್ಲಿ ಒಂದು ವರ್ಷದಲ್ಲಿ 958 ಮಂದಿ ನಕಲಿ ವೈದ್ಯರು ಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದು, ನಕಲಿ ವೈದ್ಯರ ಕ್ಲಿನಿಕ್‌ಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಆರೋಗ್ಯ ಇಲಾಖೆ ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಅಲ್ಲದೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತ್ತು….

Read More

2000 ರೂಪಾಯಿಗಿಂತ ಮೇಲ್ಪಟ್ಟ UPI ಪಾವತಿಗಳಿಗೆ ಜಿಎಸ್‌ಟಿ ಹಾಕಲಾಗುತ್ತಾ? ಕೇಂದ್ರದ ಸ್ಪಷ್ಟನೆ ಹೀಗಿದೆ

ನವದೆಹಲಿ: ಯುಪಿಐ ಪಾವತಿ 2000 ರೂಪಾಯಿಗಿಂತ ಮೇಲ್ಪಟ್ಟ ವಹಿವಾಟಿಗೆ ಜಿಎಸ್‌ಟಿ ಶುಲ್ಕ ವಿಧಿಸಲಾಗುತ್ತದೆ ಎಂದು ಸಾಮಾಜಿಕ ಜಾಲತಾಣಗಳು ಸೇರಿದಂತೆ ವಿವಿಧ ವೆಬ್‌ಸೈಟ್‌ಗಳಲ್ಲಿ ಆಗುತ್ತಿರುವ ಪ್ರಚಾರ ಕುರಿತಂತೇ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.2000 ರೂಪಾಯಿಗಿಂತ ಮೇಲ್ಪಟ್ಟ ಯುಪಿಐ ಪಾವತಿಗೆ ಜಿಎಸ್‌ಟಿ ಶುಲ್ಕ ಕುರಿತು ಹರಿದಾಡುತ್ತಿರುವ ಸುದ್ದಿ ಕುರಿತಂತೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ ಇದೊಂದು ಸುಳ್ಳು ಸುದ್ದಿಯಾಗಿದ್ದು, ಯಾವುದೇ ಆಧಾರರಹಿತ ಮಾಹಿತಿಯನ್ನು ನಂಬಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು…

Read More

ಉಳ್ಳಾಲ: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಬಂಧಿತರು 4 ದಿನ ಪೊಲೀಸ್ ಕಸ್ಟಡಿಗೆ

ಉಳ್ಳಾಲ: ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಸಂತ್ರಸ್ತೆ ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಇಂದು ಯುವತಿಯ ಮೇಲೆ ಅತ್ಯಾಚಾರ ಎಸಗಲಾಗಿದೆಯಾ ಎಂಬ ವೈದ್ಯಕೀಯ ವರದಿ ಪೊಲೀಸರ ಕೈ ಸೇರಲಿದೆ. ಘಟನೆ ನಡೆದ 24 ಗಂಟೆಯೊಳಗೆ ಮೂಲ್ಕಿಯ ಆಟೋ ಚಾಲಕ ಪ್ರಭುರಾಜ್ (38), ಕುಂಪಲದ ಎಲೆಕ್ಟ್ರಿಷಿಯನ್ ಮಿಥುನ್ (30) ಮತ್ತು ಮಂಗಳೂರು ನಿವಾಸಿ ಮಣಿ (30)ಯನ್ನು ಪೊಲೀಸರು…

Read More