ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವರ ಉತ್ಸವದ ವೇಳೆ ಮುರಿದುಬಿದ್ದ ರಥದ ಮೇಲ್ಭಾಗ

ಮುಲ್ಕಿ: ಇತಿಹಾಸ ಪ್ರಸಿದ್ದ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅತ್ಯಂತ ವಿಜೃಂಭಣೆಯಿಂದ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಿತು. ಇದರ ಅಂಗವಾಗಿ ನೆರವೇರಿದ್ದ ಬ್ರಹ್ಮರಥೋತ್ಸವದ ಸಂದರ್ಭ ದೇವರ ರಥ ಮುರಿದು ಬಿದ್ದಿರುವ ಘಟನೆ ನಡೆದಿದೆ. ಶನಿವಾರ ಬೆಳಗ್ಗಿನ ಜಾವ ಸುಮಾರು 1.40ರ ವೇಳೆಗೆ ಭಕ್ತರ ಸಮ್ಮುಖದಲ್ಲಿ ಬ್ರಹ್ಮರಥೋತ್ಸವ ಎಳೆಯುವ ವೇಳೆ ರಥದ ಚಕ್ರ ಹಾಗೂ ಮೇಲ್ಬಾಗ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಅರ್ಚಕರು ಹಾಗೂ ರಥವನ್ನು ಎಳೆಯುತ್ತಿದ್ದ ಭಕ್ತರು ಪವಾಡಸದೃಷವಾಗಿ ಬಚಾವಾಗಿದ್ದಾರೆ. ಘಟನೆಯ ಬಳಿಕ ದೇವರ ಉತ್ಸವ ಮೂರ್ತಿಯನ್ನು ಚಂದ್ರ…

Read More

ಕುಂದಾಪ್ರ ಕನ್ನಡ 5ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಂಘಟಕ ಡಾ.ಅಣ್ಣಯ್ಯ ಕುಲಾಲ್ ಉಳ್ತೂರು ಆಯ್ಕೆ

ಕುಂದಾಪುರ : ಕೋಟ ಕಾರಂತ ಥೀಂ ಪಾರ್ಕ್‌ನಲ್ಲಿ ಮೇ 4ರಂದು ನಡೆಯಲಿರುವ ಕುಂದಾಪ್ರ ಕನ್ನಡ 5ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಂಘಟಕ ಡಾ.ಅಣ್ಣಯ್ಯ ಕುಲಾಲ ಉಳ್ತೂರು ಆಯ್ಕೆಯಾಗಿದ್ದಾರೆ. ಶಿವರಾಮ ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯಿತಿ, ಕೋಟದ ಉಸಿರು, ಬ್ರಹ್ಮಾವರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮಣೂರು ಗೀತಾನಂದ ಫೌಂಡೇಷನ್, ಕೋಟತಟ್ಟು ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಸಮ್ಮೇಳನಕ್ಕೆ ಸಹಕಾರ ನೀಡಲಿವೆ ಎಂದು ಕಾರ್ಯಾಧ್ಯಕ್ಷ ಆನಂದ ಸಿ. ಕುಂದರ್, ಅಧ್ಯಕ್ಷ ಸತೀಶ ಬಾರಿಕೆರೆ,…

Read More

ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್!! ಆಸ್ಪತ್ರೆಗೆ ದಾಖಲು

ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವಂತಹ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ. ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್​ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ ಸೀಟ್​ನಲ್ಲಿದ್ದ ರಿಕ್ಕಿ…

Read More

ವಿಪರೀತ ಆನ್ಲೈನ್ ಗೇಮ್ ಚಟ: ಇಲಿ ಪಾಶಾಣ ಸೇವಿಸಿ ಯುವಕ ಸಾವು..!

ಭಟ್ಕಳ: ಆನ್ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡಿದ್ದ ಯುವಕನೋರ್ವ ಜಿಗುಪ್ಸೆಗೊಳಗಾಗಿ ಪಾನಿಪುರಿಯೊಳಗೆ ಇಲಿ ಪಾಶಾಣ ಸೇರಿಸಿ ತಿಂದು ಸಾವನ್ನಪ್ಪಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ಭಟ್ಕಳದ ನಿವಾಸಿ ಹತ್ತೊಂಭತ್ತು ವರ್ಷದ ಮಹಮ್ಮದ್ ನಿಹಾಲ್ ಮೃತ ದುರ್ದೈವಿ. ಈತ ಕಳೆದ ಮೂರು ವರ್ಷಗಳಿಂದ ವಿಪರೀತವಾಗಿ ಮೊಬೈಲ್ ಚಟ ಬೆಳೆಸಿಕೊಂಡಿದ್ದ. ನಾನಾ ರೀತಿಯ ಆನ್ಲೈನ್ ಗೇಮ್ ಆಡುವುದನ್ನು ಕೂಡಾ ರೂಢಿಸಿಕೊಂಡಿದ್ದ. ಹಣ ಹೂಡಿಕೆ ಮಾಡಿ ಆಡುತ್ತಿದ್ದ ಆಟದಲ್ಲಿ ಈತ ಹಣ ಕಳೆದುಕೊಂಡಿದ್ದ. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಆತ ಪಾನಿಪುರಿ ಜೊತೆಗೆ…

Read More

ಸಿದ್ದರಾಮಯ್ಯ ಸಿಎಂ ಆದ ಮೇಲೆ `ಲವ ಜಿಹಾದ್’ ಹೆಚ್ಚಾಗುತ್ತಿದೆ- ಬಿ.ವೈ. ವಿಜಯೇಂದ್ರ ವಾಗ್ದಾಳಿ

ಸಿದ್ದರಾಮಯ್ಯ ಸಿಎಂ ಆದ ಮೇಲೆ ಲವ್ ಜಿಹಾದ್ ಹೆಚ್ಚಾಗುತ್ತಿದೆ. ಆದರೂ ಸಿಎಂ ಮುಸ್ಲಿಂ ಮಹಿಳೆಯರ ರಕ್ಷಣೆಗೆ ಹಣ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸಾವಿರಾರು ಹಿಂದೂ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ. ಲವ್ ಜಿಹಾದ್ ಮೂಲಕ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ. ರಕ್ಷಣೆಗೆ ಮುಂದಾಗುವ ಬದಲು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಕಾಂಗ್ರೆಸ್ನ ಹಲ್ಕಟ್ ರಾಜಕಾರಣಕ್ಕೆ ಕಾರ್ಯಕರ್ತರು ಜೀವ ಬಿಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ. ಪಕ್ಷ,…

Read More

ಶಿರಾಡಿ ಘಾಟಿಯಲ್ಲಿ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ

ಬೆಂಗಳೂರು – ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ರಸ್ತೆ ಹಾಗೂ ರೈಲು ಮಾರ್ಗ ಅಭಿವೃದ್ದಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲು ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ದ.ಕ. ಬಾಕಿ ಉಳಿದಿರುವ ಮೂಲಸೌಕರ್ಯ ಅಭಿವೃದ್ದಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿ ಮಹತ್ವದ…

Read More

ಮಂಗಳೂರು: ವಕ್ಫ್ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ- ರಸ್ತೆ ಸಂಚಾರ ನಿರ್ಬಂಧಿಸದಂತೆ ಹೈಕೋರ್ಟ್‌ ಸೂಚನೆ

ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಶುಕ್ರವಾರ (ಏ. 18) ರಂದು ಮಂಗಳೂರಿನ ಅಡ್ಯಾರ್‌ ಕಣ್ಣೂರು ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲಿದ್ದು, ಈ ವೇಳೆ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದ ಮಂಗಳೂರು ಪೊಲೀಸ್ ಕಮಿಷನರ್ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದ್ದು, ರಸ್ತೆ ಸಂಚಾರಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ಮಂಗಳೂರಿನ ರಾಜೇಶ್ ಅರ್ಕುಳ ಎಂಬವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾ….

Read More

ಉಳ್ಳಾಲ‌ ಸಾಮೂಹಿಕ ಅತ್ಯಾಚಾರ ಪ್ರಕರಣ- ಮೂವರು ಆರೋಪಿಗಳು ವಶಕ್ಕೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರಾವಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಮೊನ್ನೆ ರಾತ್ರಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೊರ ರಾಜ್ಯದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ಕಮಿಷನರ್ ಅನುಪಮ್ ಅಗ್ರಾವಲ್ ಅವರು ಘಟನೆಯ ಕುರಿತು ವಿವರಿಸುತ್ತಾ, “ಮೊನ್ನೆ ಮಧ್ಯರಾತ್ರಿ ಸುಮಾರು 1.30ರ ವೇಳೆಗೆ 112ಗೆ ಕರೆ ಬಂದಿತ್ತು. ಕರೆ ಮಾಡಿದವರು ಹುಡುಗಿಯೊಬ್ಬಳು ಕೂಗಾಡುತ್ತಿದ್ದು, ಆಕೆಗೆ ಹಲ್ಲೆ…

Read More

ಉಳ್ಳಾಲ: ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ..!! ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕ ಯುವತಿ

ಉಳ್ಳಾಲ: ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಕುಟುಂಬದ ಇಪ್ಪತ್ತು ವರುಷ ಆಸುಪಾಸಿನ‌ ಯುವತಿಯೋರ್ವಳು ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಸ್ಥಳೀಯರಿಗೆ ಸಿಕ್ಕಿರುವ ಘಟನೆ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿ ನಿನ್ನೆ ರಾತ್ರಿ ನಡೆದಿದ್ದು, ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಬಗ್ಗೆ ಶಂಕಿಸಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಘಟನೆ ಕುರಿತು ತನಿಖೆ ಕೈಗೆತ್ತಿಕೊಂಡಿದ್ದಾರೆ. ನಿನ್ನೆ ಮಧ್ಯರಾತ್ರಿ ಯುವತಿ ರಾಣಿಪುರ ಎಂಬಲ್ಲಿ ಸ್ಥಳೀಯರಿಗೆ ಸಿಕ್ಕಿದ್ದಾಳೆ ಎನ್ನಲಾಗಿದೆ. ಮಧ್ಯರಾತ್ರಿ ಸುಮಾರು 1.30 ಗಂಟೆ…

Read More

ಬಂಟ್ವಾಳ: ಕುಡಿದ ಮತ್ತಿನಲ್ಲಿ ಬೈಕ್‌ ಗೆ ಢಿಕ್ಕಿ ಹೊಡೆದ KSRTC ಬಸ್ ಡ್ರೈವರ್‌..!

ಬಂಟ್ವಾಳ: ಅಮಲು ಪದಾರ್ಥ ಸೇವಿಸಿ ಬಸ್ ಚಲಾಯಿಸಿದ ಚಾಲಕನಿಂದ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ಮುಂಜಾನೆ ವೇಳೆ ‌ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕ ದಿಲೀಪ್ ನದಾಫ್ ಅಪಘಾತವೆಸಗಿದ ಆರೋಪಿಯಾಗಿದ್ದು, ಗಾಯಗೊಂಡ ಬೈಕ್ ಸವಾರರನ್ನು ಮಹಮ್ಮದ್ ‌ಸುನೈಫ್, ಮಹಮ್ಮದ್ ‌ನಿಜಾಮುದ್ದೀನ್ ಎಂದು ತಿಳಿಯಲಾಗಿದೆ. ವಿಪರೀತ ಅಮಲು ಪದಾರ್ಥ ಸೇವಿಸಿ, ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಚಾಲಕ ದಿಲೀಪ್ ನದಾಫ್ ಅವರು ತುಂಬೆಯಲ್ಲಿ ಮಂಗಳೂರು ಕಡೆಯಿಂದ ಬಿ.ಸಿರೋಡು…

Read More