ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಮಸೂದೆ ರಾಷ್ಟ್ರಪತಿಗೆ ರವಾನಿಸಿದ ಗವರ್ನರ್ ಗೆಹ್ಲೋಟ್
ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಿದ್ದಾರೆ ಎಂದು ರಾಜಭವನದ ಮೂಲಗಳು ಬುಧವಾರ ತಿಳಿಸಿವೆ. ಮೂಲಗಳ ಪ್ರಕಾರ, ಗೆಹ್ಲೋಟ್ ಅವರು ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯ್ದಿರಿಸಿ ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗೆ ಕಳುಹಿಸಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಕೋಲಾಹಲ ಸೃಷ್ಟಿಸಿರುವ ಈ ಮಸೂದೆಯನ್ನು ಈಗ ರಾಜ್ಯ ಸರ್ಕಾರ, ಅನುಮೋದನೆ ಪಡೆಯಲು ರಾಷ್ಟ್ರಪತಿಗಳಿಗೆ ಫೈಲ್ ಅನ್ನು ಕಳುಹಿಸಲಿದೆ. ವಿರೋಧ ಪಕ್ಷ…

