8 ತಿಂಗಳ ತುಂಬು ಗರ್ಭಿಣಿ ಪತ್ನಿಯನ್ನು ಕೊಂದ ಪಾಪಿ ಪತಿ!
ಆಂದ್ರಪ್ರದೇಶ: ಪ್ರಿತಿಸಿ ಮದುವೆಯಾಗಿದ್ದು, ಸಣ್ಣ ವಿಚಾರಕ್ಕೆ ನಡೆದ ಜಗಳಕ್ಕೆ ತನ್ನ 8 ತಿಂಗಳ ಗರ್ಭಿಣಿ ಪತ್ನಿಯನ್ನು ಗಂಡ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಸೋಮವಾರ ನಡೆದಿದೆ. ಅನುಷಾ (27) ಮೃತ ಪತ್ನಿ. ಪತಿ ಜ್ಞಾನೇಶ್ವರ್ ಹಾಗೂ ಪತ್ನಿ ಅನುಷಾ ಸೋಮವಾರ ಬೆಳಗ್ಗೆ ಜಗಳವಾಡಿದ್ದು, ಈ ಜಗಳ ತಾರಕಕ್ಕೇರಿ ಜ್ಞಾನೇಶ್ವರ್ ತನ್ನ ಪತ್ನಿಯ ಕತ್ತು ಹಿಸುಕಿದ್ದಾನೆ. ಈ ಸಂದರ್ಭ ಅನುಷಾ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಪತಿ, ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆದರೆ ಅಷ್ಟರಲ್ಲಾಗಲೇ…

