ಮಹಿಳಾ ಪ್ರಧಾನ “ಮೀರಾ” ತುಳು ಸಿನಿಮಾ ಬಿಡುಗಡೆ

ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ತುಳು ಚಲನಚಿತ್ರ ಮಂಗಳೂರಿನ ಭಾರತ್ ಮಾಲ್ ನ‌ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಮಾಜಿ ಮೇಯರ್ ಮನೋಜ್ ಕುಮಾರ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಬಿಡುಗಡೆ ಗೊಳಿಸಿದರು. ತುಳುವಿನಲ್ಲಿ ಬಿಡುಗಡೆ ಗೊಂಡಿರುವ ಮೀರಾ ಸಿನಿಮಾದಲ್ಲಿ ನಮ್ಮ ಮನೆಯ ಸುತ್ತಮುತ್ತಲಿನ ಕತೆ ಇದೆ. ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸ ಬೇಕು ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ…

Read More

ಉಡುಪಿ: ಜ್ವರದಿಂದ ಬಳಲುತ್ತಿದ್ದ ಎರಡು ತಿಂಗಳ ಮಗು ಸಾವು..!

ಉಡುಪಿ: ತೀವ್ರ ಜ್ವರದ ಕಾರಣ ಎರಡು ತಿಂಗಳ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಉಪ್ಪುಂದ ಗ್ರಾಮ ಬೈಂದೂರು ತಾಲೂಕು ಉಡುಪಿ ಇಲ್ಲಿನ ಹೆಣ್ಣು ಮಗುವಾದ ಪ್ರನ್ವಿತಾಳಿಗೆ (ಎರಡುವರೆ ತಿಂಗಳು) ದಿನಾಂಕ 09/04/2025 ರಂದು ಜ್ವರ ಬಂದಿದ್ದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿದ್ದು ಜ್ವರ ಕಡಿಮೆಯಾಗಿದೆ. ಮಾರ್ಚ್ 10 ರಂದು ಮಗುವಿಗೆ ಮತ್ತೆ ಜ್ವರ ಕಾಣಿಸಿಕೊಂಡಿದ್ದು ಮಗುವನ್ನು ಉಪ್ಪುಂದದ ಆರಾಧ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದು ಅದರಂತೆ ಬೈಂದೂರು…

Read More

ನಾಪತ್ತೆಯಾಗಿದ್ದ ಮೂಲ್ಕಿ ಆಟೋ ಚಾಲಕನ ಮೃತದೇಹ ಕುಂಜತ್ತೂರು ಬಾವಿಯಲ್ಲಿ ಪತ್ತೆ

ಮುಲ್ಕಿ : ಬುಧವಾರದಿಂದ ನಾಪತ್ತೆಯಾಗಿದ್ದ ಆಟೋ ಚಾಲಕ ಮೂಲ್ಕಿ ಕೊಳ್ನಾಡಿನ ಮುಹಮ್ಮದ್ ಶರೀಫ್ ಅವರ ಮೃತದೇಹ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿದೆ. ಬುಧವಾರ ಬೆಳಗ್ಗೆ ಎಂದಿನಂತೆ ರಿಕ್ಷಾ ಸಹಿತ ಮನೆಯಿಂದ ತೆರಳಿದ್ದ ಇವರು ಅಂದು ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಪತ್ನಿ ಕರೆ ಮಾಡಿದಾಗ ಮೊಬೈಲ್ ಸಂಪರ್ಕಕ ಕ್ಕೆ ಸಿಗದ ಕಾರಣ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಯುತ್ತಿದ್ದಂತೆ ಗುರುವಾರ ರಾತ್ರಿ ಕೇರಳ- ಕರ್ನಾಟಕ ಗಡಿ ಭಾಗದ ಕುಂಜತ್ತೂರು ಪದವು ಎಂಬಲ್ಲಿ ನ ಬಾವಿಯಲ್ಲಿ…

Read More

ಉಪ್ಪಿನಂಗಡಿ : ATMಗೆ ನುಗ್ಗಿ ಕಳ್ಳತನಕ್ಕೆ ಯತ್ನ..!!

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೇಂದ್ರವೊಂದಕ್ಕೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಸೊತ್ತುಗಳನ್ನು ಹಾನಿಗೊಳಿಸಿದ ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.ಕಲ್ಲೇರಿಯಲ್ಲಿನ ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡದಲ್ಲಿ ಇಂಡಿಯಾ ವನ್ ಎಂಬ ಹೆಸರಿನ ಖಾಸಗಿ ಸಂಸ್ಥೆಯ ಎಟಿಎಂ ಕೇಂದ್ರವಿದ್ದು, ಇಲ್ಲಿಗೆ ನುಗ್ಗಿದ ಕಳ್ಳರು ಅಲ್ಲಿನ ಸಿಸಿ ಕೆಮರಾವನ್ನು ಕಿತ್ತೆಸೆಯಲು ಪ್ರಯತ್ನಿಸಿದ್ದಾರೆ. ಎಟಿಎಂ ಮೆಷಿನ್ ಅನ್ನು ತೆರೆಯಲು ಯತ್ನಿಸಿದ್ದಾರೆ. ಈ ಬಗ್ಗೆ ಇಂಡಿಯಾ ವನ್ ಕಾಲ್…

Read More

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಆಶೇಲ್ ಅಮೆ ಡಿಸಿಲ್ವಾ ರವರಿಗೆ 95.5% ಅಂಕ

ಮಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸೇಂಟ್ ಅಲೋಷಿಯಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಶೇಲ್ ಅಮೆ ಡಿಸಿಲ್ವಾಅವರು ವಿಜ್ಞಾನ (PCMB) ವಿಭಾಗದಲ್ಲಿ 95.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಂತೋಷ್ ಅನಿಲ್ ಡಿಸಿಲ್ವಾ ಮತ್ತು ರೇಷ್ಮಾ ಡಿಸಿಲ್ವಾ ದಂಪತಿಯ ಸುಪುತ್ರಿ.

Read More

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ತಲವಾರು ಪ್ರದರ್ಶನ- ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಯುಧವಾದ ತಲವಾರು ಹಿಡಿದುಕೊಂಡು ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ಧ ಸುಮೊಟೋ ಕೇಸ್ ದಾಖಲಿಸಿ ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನುಪುತ್ತೂರು ಕುರಿಯ ಗ್ರಾಮದ ನಿವಾಸಿ ಸುಜಿತ್‌ (36) ಹಾಗೂ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿ ಪುಟ್ಟಣ್ಣ (32) ಎಂದು ಗುರುತಿಸಲಾಗಿದೆ. ಆರೋಪಿಗಳು ತಲವಾರು ಹಿಡಿದಿರುವ ಫೋಟೋ ಹಾಕಿ ಸಮಯ ಎಂದು ಶೀರ್ಷಿಕೆ ಬರೆದು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದರು ಆರೋಪಿಗಳು ತಲವಾರು ಹಿಡಿದು ಫೋಟೋ…

Read More

ಇನ್ಮುಂದೆ ಉಡುಪಿಯಲ್ಲಿ ಪ್ರಿ ವೆಡ್ಡಿಂಗ್ ಪೋಸ್ಟ್ ವೆಡ್ಡಿಂಗ್ ಶೂಟ್ ಮಾಡುವಂತಿಲ್ಲ ..!

ಉಡುಪಿ : ಇತ್ತೀಚಿನ ದಿನಗಳಲ್ಲಿ ಮದುವೆಗೂ ಮುನ್ನ ಪ್ರಿ ವೆಡ್ಡಿಂಗ್ ಶೂಟ್‌ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೇವಸ್ಥಾನದ ಸೈಡ್‌ನಲ್ಲಿ ಫೋಟೋಶೂಟ್‌ ಮಾಡುವುದು ಹೆಚ್ಚಾಗುತ್ತಿದ್ದು, ಪ್ರಿ ವೆಡ್ಡಿಂಗ್ ಶೂಟ್ ಮಾಡುವುದಕ್ಕೆ ಕೆಲವೊಂದು ಧಾರ್ಮಿಕ ಕ್ಷೇತ್ರಗಳಲ್ಲಿ ವಿರೋಧ ಕೇಳಿ ಬರುತ್ತಿದೆ. ಇದೀಗ ಅಂತೆಯೇ ಉಡುಪಿಯ ಕೃಷ್ಣ ಮಠ ರಥ ಬೀದಿಯಲ್ಲಿ ಫೋಟೋಶೂಟ್ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ. ಉಡುಪಿಯ ಕೃಷ್ಣ ಮಠವು ಒಂದು ಕಡೆ ಧಾರ್ಮಿಕತೆ ಆಚರಣೆ ನಡೆಯುವ ಸ್ಥಳವಾಗಿ ಗುರುತಿಸಿಕೊಂಡಿದೆ. ಆದರೆ ಅದೇ ಊರಿನ ಮತ್ತೊಂದೆಡೆ ವಿವಿಧ ಊರುಗಳಿಂದ ಬರುವ…

Read More

ಉಡುಪಿ : ಕಳವಾಗಿದ್ದ 27 ಮೊಬೈಲ್‌ಗಳು ವಾರೀಸುದಾರರಿಗೆ ಹಸ್ತಾಂತರ

ಉಡುಪಿ: ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಮೂರು ತಿಂಗಳ ಅಂತರದಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಲಾದ ಒಟ್ಟು 27 ಮೊಬೈಲ್‌ಗಳನ್ನು ವಾರೀಸುದಾರರಿಗೆ ಹಸ್ತಾಂತರಿಸಲಾಯಿತು. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೆಎಸ್‌ಪಿ ಆ್ಯಪ್ ಮೂಲಕ ಮೊಬೈಲ್ ಕಾಣೆಯಾದ ದೂರುಗಳನ್ನು ಸ್ವೀಕರಿಸಿದ್ದು, ನಂತರ ಆ ಮೊಬೈಲ್ ಗಳನ್ನು ಸಿಇಐಆರ್ ಪೋರ್ಟಲ್ ಅಪ್ಲಿಕೇಷನ್ ಅಡಿಯಲ್ಲಿ ಬ್ಲಾಕ್ ಮಾಡಲಾಗಿತ್ತು. 2025ನೇ ಸಾಲಿನಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಒಟ್ಟು 32 ಮೊಬೈಲ್‌ಗಳನ್ನು ಪತ್ತೆಹಚ್ಚಲಾಗಿದೆ. ಈ ಮೊಬೈಲ್‌ಗಳ ಒಟ್ಟು ಮೌಲ್ಯ 4.5ಲಕ್ಷ ರೂ. ಎಂದು…

Read More

ಚೆಕ್‌ಬೌನ್ಸ್‌ ಪ್ರಕರಣ; ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ವಿಧಿಸಿದ ಕೋರ್ಟ್

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಕೇಸ್​ನ ಆರೋಪಿ, ಮಾಜಿ ಸಚಿವ ಬಿ.ನಾಗೇಂದ್ರಗೆ ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ. ಚೆಕ್​​ಬೌನ್ಸ್​ ಪ್ರಕರಣದಲ್ಲಿ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು 1 ಕೋಟಿ 25 ಲಕ್ಷ ರೂ. ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ ಒಂದು ವರ್ಷ ಸೆರೆವಾಸ ಅನುಭವಿಸಬೇಕೆಂದು 42ನೇ ಎಸಿಜೆಎಂ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದೂರುದಾರ ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್ ಹಾಗೂ ಮಾಜಿ…

Read More

ಶಬರಿಮಲೆಯಲ್ಲಿ ಬಂಟ್ವಾಳದ ಶಿಕ್ಷಕ ಕುಸಿದು ಬಿದ್ದು ಸಾವು..!

ಬಂಟ್ವಾಳ: ಅಯ್ಯಪ್ಪ ವೃತಧಾರಿಯಾಗಿ ಶಬರಿಮಲೆ ಯಾತ್ರೆಗೆಂದು ತನ್ನ ಸ್ನೇಹಿತರ ಜತೆ ತೆರಳಿದ್ದ ಬಂಟ್ವಾಳ ತಾಲೂಕಿನ ಸರಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಮುಂಜಾನೆ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಸರಕಾರಿ ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಉಮರಗಿ ಶರಣಪ್ಪ(57) ಮೃತಪಟ್ಟವರಾಗಿದ್ದಾರೆ. ಬಂಟ್ವಾಳ ತಾಲೂಕಿನ ವಿವಿಧೆಡೆಯ ಸುಮಾರು 24 ಜನ ಮಂಗಳವಾರ ಮಧ್ಯಾಹ್ನದ ರೈಲಿನಲ್ಲಿ ಶಬರಿಮಲೆ ಯಾತ್ರೆಗೆ ತೆರಳಿದ್ದು, ಬುಧವಾರ ಮುಂಜಾನೆ ದೇವರ ದರ್ಶನಕ್ಕೆ ತೆರಳಲು ಹೋಗುತ್ತಿದ್ದಾಗ ಪಂಬ ಸನ್ನಿಧಿಯಲ್ಲಿ…

Read More