ಮಂಗಳೂರು : ಚೂರಿಯಿಂದ ಇರಿದು ಕೊಲೆಗೈದ ಪ್ರಕರಣ – ಮೂವರು ಆರೋಪಿಗಳಿಗೆ ಶಿಕ್ಷೆ

ಮಂಗಳೂರು: ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡಿದ ಚಿನ್ನದ ಗಟ್ಟಿ ಮಾರಾಟದಲ್ಲಿ ತಕರಾರು ನಡೆದು ಇಬ್ಬರನ್ನು ಉಪಾಯದಿಂದ ಕರೆಸಿ ಮಲಗಿದಲ್ಲಿಗೆ ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದಲ್ಲಿ ಮೂವರ ವಿರುದ್ಧದ ಆರೋಪ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಕಾಸರಗೋಡು ತಾಲೂಕು ಚೆರ್ಕಳ ಮುಹಮ್ಮದ್ ಮುಹಜೀರ್ ಸನಾಫ್ (34), ಕಾಸರಗೋಡು ಆಣಂಗೂರು ಟಿ.ವಿ.ಸ್ಟೇಷನ್ ರಸ್ತೆ ನಿವಾಸಿ ಎ.ಮುಹಮ್ಮದ್ ಇರ್ಷಾದ್ (35), ಎ.ಮುಹಮ್ಮದ್ ಸಫ್ವಾನ್ (35) ಶಿಕ್ಷೆಗೊಳಗಾದ ಅಪರಾಧಿಗಳು. ನಾಫೀರ್ ಹಾಗೂ ಪಹೀಮ್…

Read More

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ ಕುಮಾರಿ ಜಾನ್ವಿ ರಾಜೇಶ್ ಕುಲಾಲ್ ರವರಿಗೆ 87% ಅಂಕ

ಮಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ನಂತೂರಿನ ಡಾ. ಎನ್ ಎಸ್ ಎ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಜಾನ್ವಿ ರಾಜೇಶ್ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 87% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಇವರು ಅಳಪೆ ನಿವಾಸಿ.ಕುಲಶೇಕರ ಶ್ರೀ ವೀರನಾರಾಯಣ ದೇವಸ್ಥಾನದ ವಿಸ್ವಸ್ಥರಾದ ರಾಜೇಶ್ ಕುಲಾಲ್ ಮತ್ತು ಸುನೀತ ಆರ್ ಕುಲಾಲ್ದಂಪತಿಯ ಸುಪುತ್ರಿ.

Read More

ಯಾಸಿನ್‌ ಭಟ್ಕಳ್‌ ಸಹಿತ ಐವರು ಉಗ್ರರ ಗಲ್ಲುಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌

ಹೈದರಾಬಾದ್‌: ಹೈದರಾಬಾದ್‌ನಲ್ಲಿ 2013ರಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಂಡಿಯನ್‌ ಮುಜಾಹಿದಿನ್‌ ಉಗ್ರ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಈ ಐವರು ಭಯೋತ್ಪಾದಕರು 2013ರಲ್ಲಿ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿ, 131 ಜನರು ಗಾಯಗೊಂಡಿದ್ದರು. ನ್ಯಾಯಮೂರ್ತಿಗಳಾದ ಲಕ್ಷ್ಮಣ್ ಮತ್ತು ಪಿ. ಶ್ರೀಸುಧಾ ಅವರ ಪೀಠ ಭಯೋತ್ಪಾದಕರು ಗಲ್ಲು ಶಿಕ್ಷೆಯ ವಿರುದ್ಧ ಸಲ್ಲಿಸಿದ್ದ…

Read More

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ: ಕುಮಾರಿ ಶ್ರೇಯಾ ಪಿ ಕುಲಾಲ್ ರವರಿಗೆ 90% ಅಂಕ

ಮಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸಿ.ಎಫ್ಎ. ಎಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಶ್ರೇಯ ಪ್ರೇಮಾನಂದ ಕುಲಾಲ್ ಕೊಡಿಕಲ್ ಅವರು ವಿಜ್ಞಾನ ವಿಭಾಗದಲ್ಲಿ 90% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೋಡಿಕಲ್ ನಿವಾಸಿ. ಶ್ರೀ ವೀರನಾರಾಯಣ ಸೇವಾ ಟ್ರಸ್ಟಿನ ಅಧ್ಯಕ್ಷ ಪ್ರೇಮಾನಂದ ಕುಲಾಲ್ ಮತ್ತು ಸ್ರವಂತಿ ಪಿ ಕುಲಾಲ್ ದಂಪತಿಯ ಸುಪುತ್ರಿ.

Read More

ಮೂಡುಬಿದಿರೆ: ಸರಕಳ್ಳತನ ಪ್ರಕರಣ- ಆರೋಪಿಯ ಬಂಧನ

ಮಂಗಳೂರು: ಮೂಡುಬಿದಿರೆಯ ಬೆಳುವಾಯಿಯಲ್ಲಿ ಮಾ.31ರಂದು ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣ ಸರ ಕಳವುಗೈದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕಾಂತಾವರದ ಕಂದಿಲ ನಿವಾಸಿ ಆರೋಪಿ ಪ್ರಶಾಂತ್ ಸಾಲಿಯನ್ ಯಾನೆ ಪಚ್ಚು (34) ಬಂಧಿತ ಆರೋಪಿ. ಆರೋಪಿ ಕೈಯಿಂದ ಚಿನ್ನದ ಮಾಂಗಲ್ಯ ಕರಿಮಣಿ ಸರ ಹಾಗೂ ಚಿನ್ನದ ಸರದ ಒಂದು ತುಂಡು ಸ್ವಾಧೀನಪಡಿಸಿಕೊಂಡಿದ್ದು ಹಾಗೂ ಆರೋಪಿಯು ಕೃತ್ಯಕ್ಕೆ ಬಳಸಿದ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕೈಯಿಂದ ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ ಸುಮಾರು 3,30,000 ರೂ. ಆಗಬಹುದು…

Read More

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಕು. ಕೃತಿಕಾ ಕುಲಾಲ್ ರವರಿಗೆ 87% ಅಂಕ

ಮಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕಟೀಲು S.D.P.T ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಕೃತಿಕಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 87% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಂಗಳೂರಿನ ಸುರತ್ಕಲ್ ಸಮೀಪದ ಚೇಳಾರ್ ಖಂಡಿಗೆಯ ವಾಸಿ ಯಶವಂತ ಕುಲಾಲ್ ಮತ್ತು ತುಳಸಿಯವರ ಪುತ್ರಿಯಾಗಿದ್ದಾರೆ.

Read More

ಬಾಟಲಿ ನೀರು ಅಪಾಯಕಾರಿ, ಆಹಾರ ಇಲಾಖೆ ಶಾಕಿಂಗ್ ಮಾಹಿತಿ..!

ವಾಟರ್ ಬಾಟಲ್ ನಲ್ಲಿರುವ ನೀರು ಆರೋಗ್ಯಕ್ಕೆ ಹಾನಿಕಾರಕ ಎಂದು ಆಹಾರ ಇಲಾಖೆ ತಿಳಿಸಿದೆ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಸಮರ ಸಾರಿದ್ದ ಆಹಾರ ಇಲಾಖೆ ಇದೀಗ ವಾಟರ್ ಬಾಟಲ್ ಬಗ್ಗೆಯೂ ಎಚ್ಚರಿಕೆ ನೀಡಿದೆ. ಕೆಲ ಕಂಪನಿಗಳ ವಾಟರ್ ಬಾಟಲ್ ನಲ್ಲಿರುವ ನೀರು ಕೂಡ ಕಡಿಮೆ ಗುಣಮಟ್ಟದಿಂದ ಕೂಡಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ತಿಳಿಸಿದೆ. ವಾಟರ್ ಬಾಟಲ್ ಗಳಿಂದ ಪೂರೈಕೆಯಾಗುವ ನೀರು ಶೇ.50ರಷ್ಟು ಕಳಪೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬಾಟಲ್ ನೀರಿನಲ್ಲಿ ಮಿನರಲ್ ಕೂಡ…

Read More

ಮಂಗಳೂರು: ರಸ್ತೆ ಅಪಘಾತದಲ್ಲಿ ಇಬ್ಬರು ಕೇರಳ ಮೂಲದ ಯುವಕರು ಮೃತ್ಯು

ಮಂಗಳೂರು: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಎಸ್ ಕೆ ಎಸ್ ಜಂಕ್ಷನ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ಕೇರಳ ಮೂಲದ ಸಂಕೀರ್ತ್ (ಚಾಲಕ) ಹಾಗೂ ಧನುರ್ವೇದ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸಿಬಿ ಸ್ಯಾಮ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ಪ್ರಕಾರ, ಇಂದು ಬೆಳಗಿನ ಜಾವ ಸಂಕೀರ್ತ್ ಅವರು ಮೋಟಾರ್ ಸೈಕಲ್‌ನಲ್ಲಿ ಧನುರ್ವೇದ್ ಮತ್ತು ಸಿಬಿ ಸ್ಯಾಮ್ ಅವರೊಂದಿಗೆ ಪಂಪ್ವೆಲ್…

Read More

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಕುಮಾರಿ ವಿನಿಹ ದಾಸ್ ರವರಿಗೆ 86% ಅಂಕ

ಮಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸೇಂಟ್ ಅಲೋಷಿಯಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ವಿನಿಹ ದಾಸ್. ಕಾಪಿಕಾಡ್ ಅವರು ವಿಜ್ಞಾನ ವಿಭಾಗದಲ್ಲಿ 86% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಳ್ಳಾಲ ಕಾಪಿಕಾಡ್ ಅಂಬಿಕಾ ರೋಡ್ ನಿವಾಸಿ ಅನಿಲ್ ದಾಸ್ ಮತ್ತು ಆಶಾ ಲತಾ ದಾಸ್ ದಂಪತಿಯ ಸುಪುತ್ರಿ.

Read More

ಮಂಗಳೂರು: ವಿದ್ಯಾರ್ಥಿ ನಾಪತ್ತೆ..! ಪತ್ತೆಗಾಗಿ ಮನವಿ

ಮಂಗಳೂರು: ನಗರದಲ್ಲಿ ನೀಟ್ ಕೋಚಿಂಗ್ ಪಡೆಯುತ್ತಿದ್ದ ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಬಗ್ಗೆ ಕಾವೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿಯನ್ನು ಸಂಜಯ್ ಬೇರಾ (21) ಎಂದು ಗುರುತಿಸಲಾಗಿದೆ. ಮಾರ್ಚ್ 21 ರಂದು ತಂದೆ ತಾಯಿಯಲ್ಲಿ ಓದಲು ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ಕಾಣೆಯಾಗಿದ್ದಾರೆ. ಕಾಣೆಯಾದವರ ಚಹರೆ : ಎತ್ತರ 5.8 ಅಡಿ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿರುತ್ತಾರೆ. ಕಾಣೆಯಾದ ದಿನ ಕಪ್ಪು ಜೀನ್ಸ್ ಪ್ಯಾಂಟ್, ಟೀ ಶರ್ಟ್, ಕಪ್ಪು ಬಣ್ಣದ ಜೀನ್ಸ್ ಬ್ಯಾಗ್ ಧರಿಸಿದ್ದರು….

Read More