ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್‌ ಉಪ್ಪಿನಂಗಡಿ ಬಳಿ ಪಲ್ಟಿ..! ಓರ್ವ ಸಾವು

ಪುತ್ತೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಸಮೀಪ, ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್ 4 ರಂದು ಬೆಳಿಗ್ಗೆ 5 ಗಂಟೆಗೆ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರು ಗ್ರಾಮಾಂತರದ ಯಡಿಯೂರು ನಿವಾಸಿ ಹರ್ಷ (24) ಎಂದು ಗುರುತಿಸಲಾಗಿದೆ. ಅವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮಂಗಳೂರು ಹೊರವಲಯದ ಮುಲ್ಕಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡ 12 ಮಂದಿಯಲ್ಲಿ 11 ಜನರು ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಗೆ…

Read More

ಉಡುಪಿ: ಟೈಮಿಂಗ್‌ ವಿಚಾರಕ್ಕೆ ಕಂಡಕ್ಟರ್ ಹಾಗೂ ಡ್ರೈವರ್ ಬಸ್‌ ನಿಲ್ದಾಣದಲ್ಲಿ ರಾಡ್ ಹಿಡಿದು ಹೊಡೆದಾಟ..! ವಿಡಿಯೋ ವೈರಲ್‌

ಉಡುಪಿ: ಟೈಮಿಂಗ್‌ ವಿಚಾರಕ್ಕೆ ಕಂಡಕ್ಟರ್ ಹಾಗೂ ಡ್ರೈವರ್ ಬಸ್‌ ನಿಲ್ದಾಣದಲ್ಲಿ ರಾಡ್ ಹಿಡಿದು ಹೊಡೆದಾಟ..! ವಿಡಿಯೋ ವೈರಲ್‌ ನಗರದ ಟೈಗರ್‌ ಸರ್ಕಲ್‌ ಖಾಸಗಿ ಬಸ್‌ ನಿಲ್ದಾಣದ ಬಳಿ ಟೈಮಿಂಗ್‌ ವಿಚಾರಕ್ಕೆ ಗಲಾಟೆ ನಡೆದು ಕಂಡಕ್ಟರ್ ಹಾಗೂ ಡ್ರೈವರ್ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಎ.2ರಂದು ಸಂಜೆ 4:30 ಗಂಟೆ ಸುಮಾರಿಗೆ ಮಣಿಪಾಲದ ಟೈಗರ್‌ ಸರ್ಕಲ್‌ ಬಳಿ ಇರುವ ಖಾಸಗಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವ ಟೈಮಿಂಗ್‌ ವಿಚಾರದಲ್ಲಿ ಆನಂದ್‌ ಬಸ್‌ ನ ಕಂಡಕ್ಟರ್‌ ವಿಜಯ…

Read More

ಬೆಳ್ತಂಗಡಿ: ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ- ಮಗುವಿನ ಹೆತ್ತವರನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು..!

ಬೆಳ್ತಂಗಡಿ : ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ಕೊಟ್ಟು ರಸ್ತೆಯಲ್ಲಿ ಮಾ.22 ರಂದು ಬೆಳಗ್ಗೆ ಒಂದುವರೇ ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ಪ್ರಕರಣಕ್ಕೆ ರೋಚಕ ತಿರುವು ಲಭಿಸಿದ್ದು, ಮಗು ಬೆಳಾಲು ನಿವಾಸಿಯದ್ದು ಎಂಬುವುದು ಬಹಿರಂಗಗೊಂಡಿದೆ. ಇದೀಗ ಧರ್ಮಸ್ಥಳ ಪೊಲೀಸರು ಮಗುವಿನ ತಂದೆಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯ ನಿವಾಸಿ ತಿಮ್ಮಪ್ಪ ಗೌಡರ ಮಗ ಧರ್ಮಸ್ಥಳದಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ರಂಜಿತ್ ಗೌಡ (27) ಮತ್ತು ಧರ್ಮಸ್ಥಳ ಗ್ರಾಮದ ಕೊಲಂಗಾಜೆಯ…

Read More

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ ಇವರಿಗೆ ಈ ಭಾರಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು, ಎಪ್ರಿಲ್ 2 ರಂದು ಕರ್ನಾಟಕ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮೂರುಗೋಳಿ ನಿವಾಸಿ ಅಣ್ಣು ದೇವಾಡಿಗ ಮತ್ತು ಬೇಬಿ ದೇವಾಡಿಗರ ಪ್ರಥಮ ಪುತ್ರ…

Read More

ಕಿಸ್ ಗೆ 50 ಸಾವಿರ: ಹನಿಟ್ರ್ಯಾಪ್ ಮಾಡುತ್ತಿದ್ದ ಶಿಕ್ಷಕಿ & ಗ್ಯಾಂಗ್ ಅಂದರ್..!

ಬೆಂಗಳೂರಿನಲ್ಲಿ ಪೋಷಕರಿಗೆ ಹನಿಟ್ರ್ಯಾಪ್ ಮಾಡುತ್ತಿದ್ದ ಶಿಕ್ಷಕಿಯೋರ್ವಳು ಸಿಸಿಬಿ ಪೊಲೀಸರ ಅತಿಥಿಯಾಗಿದ್ದಾಳೆ. ಬಂಧಿತಳನ್ನು ಶಿಕ್ಷಕಿ ಶ್ರೀದೇವಿ ಎಂದು ಗುರುತಿಸಲಾಗಿದೆ. ಶ್ರೀದೇವಿ ಜೊತೆ ಇಬ್ಬರು ಆರೋಪಿಗಳನ್ನು ಕೂಡ ಬಂಧಿಸಲಾಗಿದೆ. ಪೋಷಕರಿಗೆ ಹನಿಟ್ರ್ಯಾಪ್ ಗಾಳ ಹಾಕಿದ ಶಿಕ್ಷಕಿ.!ಬಂಧಿತಳನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂದು ಗುರುತಿಸಲಾಗಿದೆ. ಆರೋಪಿ ಶ್ರೀದೇವಿ ರುಡಿಗಿಗೆ 2023 ರಲ್ಲಿ ರಾಕೇಶ್ ಎಂಬ ಪೋಷಕನ ಪರಿಚಯವಾಗಿತ್ತು. ರಾಕೇಶ್ನಿಂದ ಶಾಲೆ ನಿರ್ವಹಣೆ, ತಂದೆಯ ಚಿಕಿತ್ಸೆಗಂತ ಶ್ರೀದೇವಿ 4 ಲಕ್ಷ ರೂ. ಹಣವನ್ನು ಸಾಲವಾಗಿ ಪಡೆದಿದ್ದಳು….

Read More

ಲೋಕಸಭೆಯಲ್ಲಿ `ವಕ್ಫ್ ಮಸೂದೆ’ ಅಂಗೀಕಾರ : ಇಂದೇ ರಾಜ್ಯಸಭೆಯಲ್ಲೂ ಮಂಡನೆ

ನವದೆಹಲಿ : ಸರ್ಕಾರ ಮತ್ತು ವಿರೋಧ ಪಕ್ಷದ ನಡುವಿನ ಬಿಸಿ ಚರ್ಚೆಯ ನಂತರ ಬುಧವಾರ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕರಿಸಲಾಯಿತು. ಮಸೂದೆಯ ಪರವಾಗಿ 288 ಮತಗಳು ಮತ್ತು ವಿರುದ್ಧವಾಗಿ 232 ಮತಗಳು ಚಲಾವಣೆಯಾದವು. ಮಸೂದೆಯನ್ನು ಅಂಗೀಕರಿಸಲು ಸದನವು ಮಧ್ಯರಾತ್ರಿಯ ನಂತರವೂ ಮುಂದುವರಿಯಿತು. ಮಸೂದೆಯು ಸಂವಿಧಾನದ ಮೂಲ ರಚನೆಗೆ ವಿರುದ್ಧವಾಗಿದೆ ಎಂದು ವಿರೋಧ ಪಕ್ಷಗಳು ಎತ್ತಿದ ಆಕ್ಷೇಪಣೆಗಳು ಸೇರಿದಂತೆ ಪ್ರತಿಯೊಂದು ಆಕ್ಷೇಪಣೆಗೂ ಸರ್ಕಾರ ಪ್ರತಿಕ್ರಿಯಿಸಿತು ಮತ್ತು ಆತಂಕಗಳನ್ನು ನಿವಾರಿಸಿತು. ಈ ಮಸೂದೆಯನ್ನು ಮುಸ್ಲಿಮರ ಮಸೀದಿಗಳು ಮತ್ತು ದರ್ಗಾಗಳನ್ನು…

Read More

ಐಸ್ ಕ್ರೀಮ್ ತಯಾರಿಸಲು `ಡಿಟರ್ಜೆಂಟ್ ಪೌಡರ್’ ಬಳಕೆ.!

ಬೆಂಗಳೂರು: ಬೆಂಗಳೂರಿನಲ್ಲಿ ಐಸ್ ಕ್ರೀಂ ಮತ್ತು ತಂಪು ಪಾನೀಯಗಳ ತಯಾರಿಕೆಯಲ್ಲಿ ಅಪಾಯಕಾರಿ ಉಲ್ಲಂಘನೆಗಳು ನಡೆದಿವೆ ಎಂದು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (Karnataka’s Food Safety and Drug Administration Department -FDA) ನಡೆಸಿದ ಆಹಾರ ಸುರಕ್ಷತಾ ತನಿಖೆಯಿಂದ ತಿಳಿದುಬಂದಿದೆ. ಹಲವಾರು ಉತ್ಪನ್ನಗಳಲ್ಲಿ ಡಿಟರ್ಜೆಂಟ್ ಪೌಡರ್ ಮತ್ತು ಫಾಸ್ಪರಿಕ್ ಆಮ್ಲದಂತಹ ಅಪಾಯಕಾರಿ ಪದಾರ್ಥಗಳು ಇರುವುದು ಗಂಭೀರ ಆರೋಗ್ಯ ಕಳವಳವನ್ನುಂಟುಮಾಡಿದೆ ಎಂದು ಅಧಿಕಾರಿಗಳು ಕಂಡುಕೊಂಡಿದ್ದಾರೆ. ಎಫ್‌ಡಿಎ ತಪಾಸಣೆಯಿಂದ ಪತ್ತೆ 220 ಚಿಲ್ಲರೆ ಮಾರಾಟ ಮಳಿಗೆಗಳ…

Read More

ಪ್ರತಿಪಕ್ಷಗಳ ಸಂಘರ್ಷದ ನಡುವೆಯೇ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ:ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು 1995 ರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಮಂಡಿಸಿದರು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಎರಡೂ ತಮ್ಮ ಸಂಸದರ ಉಪಸ್ಥಿತಿಯನ್ನು ಮತದಾನಕ್ಕೆ ಖಚಿತಪಡಿಸಿಕೊಳ್ಳಲು ವಿಪ್ಗಳನ್ನು ಹೊರಡಿಸಿದವು, ಇದು ಶಾಸನದ ಮಹತ್ವವನ್ನು ಸೂಚಿಸುತ್ತದೆ ಆಡಳಿತಾರೂಢ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಮತ್ತು ಪ್ರತಿಪಕ್ಷ ಬಿಜೆಪಿ ಬಣದ ನಡುವಿನ ಮುಖಾಮುಖಿಯ ಮಧ್ಯೆ,…

Read More

ಉಡುಪಿ: ಯುವತಿಯನ್ನು ಅಪಹರಿಸಿ ಬಲವಂತವಾಗಿ ಮದುವೆಯಾಗಲು ಯತ್ನಿಸಿರುವ ಮುಹಮ್ಮದ್ ಅಕ್ರಮ್ಗೆ ಪಿಎಫ್ಐ ನಂಟು – ಎನ್.ಐ.ಎ ತನಿಖೆಗೆ VHP ಆಗ್ರಹ

ಉಡುಪಿಯ ಜಿನಾ ಎಂಬ ಯುವತಿಯನ್ನು ಅಪಹರಿಸಿ ಬಲವಂತವಾಗಿ ಮದುವೆಯಾಗಲು ಯತ್ನಿಸಿರುವ ಮುಹಮ್ಮದ್ ಅಕ್ರಮ್ಗೆ ಪಿಎಫ್ಐ ನಂಟಿದ್ದು, ಈ ಕುರಿತು ಕೇಂದ್ರ ಸರಕಾರ ಎನ್ಐಎ ತನಿಖೆ ನಡೆಸಬೇಕೆಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಗೋರಕ್ಷ ಪ್ರಮುಖ್ ಸುನೀಲ್ ಕೆ.ಆರ್ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವತಿಯು 9ನೇ ತರಗತಿಯಲ್ಲಿ ಇದ್ದಾಗಲೇ ಅಕ್ರಮ್ ಸಾಮಾಜಿಕ ಜಾಲತಾಣದಲ್ಲಿ ಪರಿಚಯಿಸಿಕೊಂಡು ಲವ್ ಜಿಹಾದ್ ಬಲೆಗೆ ಬೀಳಿಸಿ ಕೊಂಡು, ಆಶ್ಲೀಲ ಪೋಟೊಗಳನ್ನು ಚಿತ್ರಿಸಿ ಬೆದರಿಸಿದ್ದನು. ಆಗ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದಾದ…

Read More

ಬೆಳ್ತಂಗಡಿ: ಕಾಡಿನಲ್ಲಿ ಶಿಶು ಪತ್ತೆ ಪ್ರಕರಣ- ಮಗುವಿನ ಪೋಷಕರ ಪತ್ತೆಗೆ ಮನವಿ

ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ಪೋಷಕರು ಇನ್ನೂ ಪತ್ತೆಯಾಗಿಲ್ಲ. ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದೀಗ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಶಿಶುವನ್ನು ಪುತ್ತೂರಿನ ನೆಲ್ಲಿಕಟ್ಟೆಯ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ಮಕ್ಕಳ ದತ್ತು ಕೇಂದ್ರಕ್ಕೆ ಆರೈಕೆಗಾಗಿ ದಾಖಲಿಸಲಾಗಿದೆ. ಮಗುವಿನ ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ…

Read More