ಮಂಗಳೂರು – ಬೆಂಗಳೂರು ರೈಲಿನಿಂದ ಬಿದ್ದ ಯುವಕ- 15 ಗಂಟೆ ಬಳಿಕ ಸವಣೂರಿನಲ್ಲಿ ಪತ್ತೆ..!
ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು, 15 ಗಂಟೆ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ. ಮಾ 25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್ ರಾತ್ರಿ 11 ಗಂಟೆ ವೇಳೆಗೆ ಸವಣೂರು ಸಮೀಪದ ಸುಣ್ಣಾಜೆ ಬಳಿ ರೈಲಿನಿಂದ ಬಿದ್ದಿದ್ದಾರೆ. ರಾತ್ರಿ ವೇಳೆ ಯುವಕ ರೈಲಿನಿಂದ ಬೀಳುವುದನ್ನು ಸಹ ಪ್ರಯಾಣಿಕರು ಗಮನಿಸಿದ್ದು ನೆಟ್ಟಣ ತಲುಪಿದ ವೇಳೆ ರೈಲ್ವೆ ಮಾಸ್ಟರ್ ಗಮನಕ್ಕೆ ತಂದಿದ್ದರು. ಆದರೆ ಯುವಕ ಬಿದ್ದ ಜಾಗ ಯಾವುದು ಎನ್ನುವುದು…

