ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರ ಸಂಬಳಕ್ಕೆ ಶೇ.100 ಹೆಚ್ಚಳ – ತಿದ್ದುಪಡಿಗೆ ಗ್ರೀನ್ ಸಿಗ್ನಲ್!
ರಾಜ್ಯದ ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರ ವೇತನ ಹಾಗೂ ಭತ್ಯೆಗಳಲ್ಲಿ ಹೆಚ್ಚಳ ಮಾಡಲಾಗಿದ್ದು, ಇದಕ್ಕೆ ಸಂಬಂಧಿಸಿದ ‘ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ತಿದ್ದುಪಡಿ ವಿಧೇಯಕ-2025’ ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸಲಾಗಿದೆ. ರಾಜ್ಯಪಾಲರ ಅನುಮೋದನೆ ದೊರಕಿದ ಕೂಡಲೇ ಈ ತಿದ್ದುಪಡಿ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ. ಸಂವಿಧಾನೀಕ ಪ್ರಕ್ರಿಯೆಯಂತೆ, ಸದನದಲ್ಲಿ ಈ ವಿಧೇಯಕ ಮಂಡನೆಯಾಗುವುದಕ್ಕೂ ಮುನ್ನ ರಾಜ್ಯಪಾಲರ ಅನುಮೋದನೆ ಅಗತ್ಯವಿದೆ. ಈಗ ರಾಜ್ಯಪಾಲರಿಂದ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ, ಈ ಮಸೂದೆ ಶೀಘ್ರವೇ ವಿಧಾನಸಭೆಯಲ್ಲಿ ಚರ್ಚೆಗೆ ಬರಲಿರುವ ನಿರೀಕ್ಷೆಯಿದೆ. ಈ ತಿದ್ದುಪಡಿಯ…

