Headlines

ಮಲ್ಪೆ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಪ್ರಕರಣ : ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರ ಬಂಧನ

ಉಡುಪಿ ಜಿಲ್ಲೆಯ ಮಲ್ಲೆ ಬಂದರಿನಲ್ಲಿ ವಿಜಯನಗರ ಜಿಲ್ಲೆ ಮೂಲದ ದಲಿತ ಮಹಿಳೆಯನ್ನು ಮೀನು ಕದ್ದ ಆರೋಪದಲ್ಲಿ ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಪೊಲೀಸರು ಬಂಧಿಸಿದವರು ಸ್ಥಳೀಯರಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಹಾಗೂ ಇನ್ನೋರ್ವ ಎಂದು ಗುರುತಿಸಲಾಗಿದೆ. ಮಾ.18ರಂದು ವಿಜಯನಗರ ಜಿಲ್ಲೆ ಮೂಲದ ಮಹಿಳೆಗೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಮಲ್ಪೆ…

Read More

ಉಡುಪಿ: ಮೀನು ಕಳ್ಳತನ ಆರೋಪ- ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಥಳಿತ!

ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ ನಡೆದಿದೆ ಎನ್ನಲಾದ ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಲ್ಲೆ ನಡೆಸಿದವರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಹಿಳೆ ಒಂದು ಬುಟ್ಟಿ ಮೀನು ಕದ್ದಿರುವುದಾಗಿ ಆರೋಪಿಸಲಾಗಿದೆ. ಬಳಿಕ ಆಕೆಯನ್ನು ಹಿಡಿದು ಮಹಿಳೆಯೊಬ್ಬರು ಕಪಾಳಕ್ಕೆ ಹೊಡೆಯುವ ದೃಶ್ಯಗಳು ವಿಡಿಯೋದಲ್ಲಿ ಕಂಡು ಬಂದಿವೆ. ಬಳಿಕ ಆಕೆಯನ್ನು…

Read More

ರಾಜ್ಯ ಸರ್ಕಾರ ಕ್ಕೆ ಭಾರೀ ಹಿನ್ನಡೆ: ‘ರಾಮನಗರ ಜಿಲ್ಲೆ’ ಹೆಸರು ಬದಲಾವಣೆಗೆ ‘ಕೇಂದ್ರ ಸರ್ಕಾರ ನಕಾರ’

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ, ಹಿನ್ನಲೆ ಎನ್ನುವಂತೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಹೆಸರು ಬದಲಾವಣೆಯ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ನಕಾರ ವ್ಯಕ್ತ ಪಡಿಸಿದೆ. ರಾಜ್ಯ ಸರ್ಕಾರದಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂಬುದಾಗಿ ಹೆಸರು ಬದಲಾವಣೆಗೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿತ್ತು. ಆದರೇ ರಾಮನಗರ ಜಿಲ್ಲೆಗೆ ಹೊಸ ಹೆಸರು ನಾಮಕರಣ ಮಾಡುವ ಮಹತ್ವಾಕಾಂಕ್ಷೆಯ ಪ್ರಸ್ತಾವನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡೋದಾಗಿಯೂ ಘೋಷಣೆ…

Read More

ಮಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ-ಇಬ್ಬರು ಯುವಕರು ಸಾವು

ಮಂಗಳೂರು: ನಗರದ ಸಮೀಪ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ಮುಲ್ಕಿ ತಾಲೂಕಿನ ಕಿನ್ನಿಗೋಳಿಯಲ್ಲಿ ಸಂಭವಿಸಿದೆ. ಸಾವನ್ನಪ್ಪಿದವರು ಮೂಲತಃ ಧಾರವಾಡ ಜಿಲ್ಲೆ ಸವದತ್ತಿ ಕಲ್ಲೂರು ನಿವಾಸಿಗಳಾದ ಆತ್ಮಾನಂದ (27), ನವೀನ್ ಹೂಗಾರ (26) ಎಂದು ತಿಳಿಯಲಾಗಿದೆ. ವೇಗವಾಗಿ ಬಂದ ಬೈಕ್‌ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ…

Read More

ಅನರ್ಹರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್: ಬರೋಬ್ಬರಿ 21,980 ಪಡಿತರ ಕಾರ್ಡ್ ರದ್ದು

ಬೆಂಗಳೂರು : ನಕಲಿ ದಾಖಲೆ ನೀಡಿ ಪಡಿತರ ಚೀಟಿ ಪಡೆದುಕೊಂಡ ಅನರ್ಹರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಬರೋಬ್ಬರಿ 21,980 ಪಡಿತರ ಕಾರ್ಡ್ ಗಳನ್ನು ರದ್ದು ಪಡಿಸಿದೆ. ಹೌದು, ಆದಾಯ ತೆರಿಗೆ ಕಟ್ಟುವ ಹಾಗೂ ಸರ್ಕಾರಿ ನೌಕರಿ ಹೊಂದಿರುವ ಕುಟುಂಬದವರು ಬಿಪಿಎಲ್‌ ಕಾರ್ಡನ್ನು ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿರುವ ಕಾರ್ಡಗಳನ್ನು ಪತ್ತೆ ಹಚ್ಚುವ ಮೂಲಕ ಆಹಾರ ಇಲಾಖೆ 2024-20250 21.980 ಪಡಿತರ ಚೀಟಿಗಳನ್ನು ರದ್ದುಪಡಿಸಿದೆ. ಬೆಳಗಾವಿಯಲ್ಲಿ 1482, ಬೀದರ 814, ಹಾಸನ 1030, ಬಾಗಲಕೋಟೆಯಲ್ಲಿ 995,…

Read More

9 ತಿಂಗಳ ಅಂತರಿಕ್ಷ ವಾಸದ ಬಳಿಕ ಭೂಮಿ ತಾಯಿಯ ಮಡಿಲಿಗೆ ಸುನಿತಾ ವಿಲ್ಲಿಯಮ್ಸ್‌

ಫ್ಲೋರಿಡಾ: ಭಾರತೀಯ ಸಂಜಾತೆ ಗಗನಯಾತ್ರಿ ಸುನಿತಾ ವಿಲ್ಲಿಯಮ್ಸ್‌ ಬರೋಬ್ಬರಿ 9 ತಿಂಗಳ ಕಾಲ ಅಂತರಿಕ್ಷ ವಾಸ ಮುಗಿಸಿ ಇಂದು ಮುಂಜಾನೆ ವೇಳೆ ಭೂಸ್ಪರ್ಶ ಮಾಡಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 286 ದಿನ ಬಾಕಿಯಾಗಿದ್ದ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್‌ ಅವರನ್ನು ಭೂಮಿಗೆ ಕರೆತರುವ ಮಿಷನ್‌ ಯಶಸ್ವಿಯಾಗಿದೆ ಎಂದು ನಾಸಾ ಘೋಷಿಸಿದೆ. ಇಬ್ಬರನ್ನು ಸುರಕ್ಷಿತರವಾಗಿ ಭೂಮಿಗೆ ಕರೆತರಲಾಗಿದೆ. ಸುನೀತಾ ವಿಲಿಯಮ್ಸ್, ಬುಚ್‌ವಿಲ್ಮೋರ್ ಸೇರಿ ನಾಲ್ವರು ಗಗನಯಾತ್ರಿಗಳನ್ನು ಹೊತ್ತಿದ್ದ ಸ್ಪೇಸ್ ಎಕ್ಸ್‌ ಕ್ರೂ ಡ್ರ್ಯಾಗನ್…

Read More

ಪುತ್ತೂರು: ಹೋಟೆಲ್ ಒಂದರಲ್ಲಿ ಅನ್ಯಕೋಮಿನ ಜೋಡಿ ಪತ್ತೆ..! ಪೋಲಿಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಪುತ್ತೂರು: ಬಸ್ ನಿಲ್ದಾಣದ ಬಳಿಯ ಹೋಟೆಲ್ ಒಂದರಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದು ಯುವತಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದ ಸಂದರ್ಭ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಇಬ್ಬರು ಶಿವಮೊಗ್ಗ ಮೂಲದವರು ಎಂದು ತಿಳಿದು ಬಂದಿದ್ದು, ಯುವತಿ ನಗರದಲ್ಲಿ ಪಿಜಿ ಯಿಂದ ಕಾಲೇಜಿಗೆ ತೆರಳುತ್ತಿದ್ದಳು ಎನ್ನಲಾಗಿದೆ. ಠಾಣೆಗೆ ಪುತ್ತೂರು ಬಿಜೆಪಿ ನಿಯೋಗ ಬೇಟಿ ನೀಡಿದರು. ಆದರೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಸದ್ಯ ಪೊಲೀಸರು ಇಬ್ಬರ ಮನೆಯವರಿಗೆ ಮಾಹಿತಿ ನೀಡಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡಿದ್ದ ಯುವ ವಕೀಲ ಸಾವು..!

ಮಂಗಳೂರು : ಬಿ.ಸಿ.ರೋಡ್ ಮುಖ್ಯ ವೃತ್ತದ ಬಳಿ ಕಳೆದ ವಾರ ಅಪಘಾತವೊಂದು ಸಂಭವಿಸಿದ ಪರಿಣಾಮ ಕೈಕುಂಜೆ ನಿವಾಸಿ  ಯುವ ವಕೀಲ ಪ್ರಥಮ್ ಬಂಗೇರ (27) ನಿನ್ನೆ (ಮಾ.17) ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆದು ಬಿ.ಸಿ.ರೋಡಿನ ವಕೀಲ ಕೆ. ವೆಂಕಟ್ರಮಣ ಶೆಣೈಯವರ ಬಳಿ ವಕೀಲ ವೃತ್ತಿಯನ್ನು ಅಭ್ಯಾಸ ಮಾಡುತ್ತಿದ್ದ ಪ್ರಥಮ್ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಚುರುಕಾಗಿದ್ದು, ಒಳ್ಳೆಯ ನೃತ್ಯಪಟುವಾಗಿದ್ದರು. ಕಳೆದ ನವೆಂಬರ್ ತಿಂಗಳಿನಲ್ಲಿ ಇವರ ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು….

Read More

ಭೂಮಿಯತ್ತ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ -ಬಾಹ್ಯಾಕಾಶ ನಿಲ್ದಾಣದಿಂದ ನಿರ್ಗಮಿಸಿದ ಸ್ಪೇಸ್​ಎಕ್ಸ್​ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆ

ನಾಸಾದ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಮಂಗಳವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ISS) ಭೂಮಿಗೆ ಮರಳಲಿದ್ದಾರೆ. ಸ್ಪೇಸ್​ಎಕ್ಸ್ನ ಬಾಹ್ಯಾಕಾಶ ನೌಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಹೊರಟಿದೆ. ಇಬ್ಬರೂ ಗಗನಯಾತ್ರಿಗಳು ಹಿಂದಿರುಗಿದ ನಂತರ, ಒಂಬತ್ತು ತಿಂಗಳ ಬಾಹ್ಯಾಕಾಶ ಪ್ರಯಾಣವು ಕೊನೆಗೊಳ್ಳುತ್ತದೆ. ಸುನಿತಾ ವಿಲಿಯಮ್ಸ್, ವಿಲ್ಮೋರ್ ಮತ್ತು ಇತರ ಇಬ್ಬರು ಕ್ರೂ-9 ಸದಸ್ಯರೊಂದಿಗೆ, ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಭೂಮಿಗೆ ಮರಳುತ್ತಿದ್ದಾರೆ. ಸುನಿತಾ ವಿಲಿಯಮ್ಸ್ ಮತ್ತು ವಿಲ್ಮೋರ್ ಜೂನ್ 5, 2024 ರಂದು ಭೂಮಿಯನ್ನು ಬಿಟ್ಟು ಅಂತಾರಾಷ್ಟ್ರೀಯ…

Read More

75 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ : ಇಬ್ಬರು ವಿದೇಶಿ ಮಹಿಳೆಯರ ಬಂಧನ

ಮಂಗಳೂರು: ಬೆಂಗಳೂರಿನಲ್ಲಿ 75 ಕೋಟಿ ರೂ. ಮಾಲ್ಯದ ಎಂಡಿಎಂಎ ಡ್ರಗ್ಸ್ ಸಹಿತವಾಗಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಲ್ಪಟ್ಟಿರುವ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಜೆಗಳನ್ನು ನಗರದ ನ್ಯಾಯಾಲಯವು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದಕ್ಷಿಣ ಆಫ್ರಿಕಾದ ಪ್ರಜೆಗಳಾದ ಬಂಬಾ ಫಾಂಟಾ ಆಲಿಯಾಸ್ ಅಡೊನಿಸ್ ಜಬುಲೈಲ್ (31) ಮತ್ತು ಒಲಿಜೊ ಇವನ್ಸ್ ಆಲಿಯಾಸ್ ಅಬಿಗೈಲ್ ಅಡೊನಿಸ್ (30) ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.ಪೊಲೀಸರು ಈ ಇಬ್ಬರು ಆರೋಪಿಗಳನ್ನು ಮಾ.14ರಂದು ಬೆಂಗಳೂರಿನಲ್ಲಿ ಬಂಧಿಸಿ ಮಂಗಳೂರಿನಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ…

Read More