75 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ : ಇಬ್ಬರು ವಿದೇಶಿ ಮಹಿಳೆಯರ ಬಂಧನ
ಮಂಗಳೂರು: ಬೆಂಗಳೂರಿನಲ್ಲಿ 75 ಕೋಟಿ ರೂ. ಮಾಲ್ಯದ ಎಂಡಿಎಂಎ ಡ್ರಗ್ಸ್ ಸಹಿತವಾಗಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಲ್ಪಟ್ಟಿರುವ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಜೆಗಳನ್ನು ನಗರದ ನ್ಯಾಯಾಲಯವು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದಕ್ಷಿಣ ಆಫ್ರಿಕಾದ ಪ್ರಜೆಗಳಾದ ಬಂಬಾ ಫಾಂಟಾ ಆಲಿಯಾಸ್ ಅಡೊನಿಸ್ ಜಬುಲೈಲ್ (31) ಮತ್ತು ಒಲಿಜೊ ಇವನ್ಸ್ ಆಲಿಯಾಸ್ ಅಬಿಗೈಲ್ ಅಡೊನಿಸ್ (30) ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.ಪೊಲೀಸರು ಈ ಇಬ್ಬರು ಆರೋಪಿಗಳನ್ನು ಮಾ.14ರಂದು ಬೆಂಗಳೂರಿನಲ್ಲಿ ಬಂಧಿಸಿ ಮಂಗಳೂರಿನಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ…

