ಮೂಡುಬಿಡಿರೆ : ಬಾಲಕಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ-ಆರೋಪಿಯ ಬಂಧನ

ಮೂಡುಬಿದಿರೆ: ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪ್ರಾಂತ್ಯ ಗ್ರಾಮದ ಲಾಡಿ ಸಮೀಪದ ಅಜಂಕಲ್ಲುವಿನ ನಿವಾಸಿ ಪ್ರಕಾಶ್‌ (57) ಎಂಬಾತನನ್ನು ಪೊಲೀಸರು ಬಂಧಿಸಿ ಪೋಕ್ಸೋ ಕೇಸು ದಾಖಲಿಸಲಾಗಿದೆ. ಆರೋಪಿಯು ತನ್ನ ಮನೆಯ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಾಲಕಿಯ ಮನೆಗೆ ಯಾರೂ ಇಲ್ಲದಾಗ ಕಳೆದ ಒಂದು ವರ್ಷದಿಂದ ಬರುತ್ತಿದ್ದು, ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿರುತ್ತಾನೆ ಎಂದು ಸಂತ್ರಸ್ತೆಯ ಹೆತ್ತವರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.    

Read More

ಮೂಡಬಿದ್ರಿ ಭಜರಂಗ ದಳದ ಸಂಯೋಜಕರ ವಿಜೇಶ್ ನಿಧನ

ಮೂಡಬಿದ್ರಿ: ಭಜರಂಗ ದಳದ ನಗರ ಸಂಯೋಜಕರಾಗಿದ್ದ ವಿಜೇಶ್ ನಿಧನರಾಗಿದ್ದಾರೆ. ಅವರಿಗೆ 30 ವರ್ಷ ವಯಸ್ಸು ಆಗಿತ್ತು. ಭಜರಂಗದಳದಲ್ಲಿ ಸಕ್ರಿಯರಾಗಿದ್ದ ಇವರು ಸಂಘಟನೆಯ ಹಲವಾರು ಹೋರಾಟಗಳಲ್ಲಿ ಭಾಗವಹಿಸಿದ್ದರು.  ಪುತ್ತಿಗೆ ಶ್ರೀ ಸೋಮನಾಥೇಶ್ವರನ ಬ್ರಹ್ಮಕಲಶೋತ್ಸವದಲ್ಲಿ ಅಹರ್ನಿಶಿ ಸೇವೆ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತಕ್ಕೆ ಒಳಪಟ್ಟು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು ತಡ ರಾತ್ರಿ ಕೊನೆಯುಸಿರೆಳೆದಿದ್ದಾರೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ನಗರ ಸಂಯೋಜಕ ಸಮಾಜಮುಖಿ ಚಿಂತನೆಯುಳ್ಳ ಸಕ್ರಿಯ ಕಾರ್ಯಕರ್ತ ವಿಜೇಶ್ ಅವರ ನಿಧನಕ್ಕೆ ಹಲವಾರು ಗಣ್ಯರು, ಭಜರಂಗದಳದ…

Read More

ಮೂಡುಬಿದಿರೆ: ಅಪ್ರಾಪ್ತೆಯ‌ ಮಾನಭಂಗಕ್ಕೆ ಯತ್ನ- ಆರೋಪಿ ಬಂಧನ

ಮೂಡುಬಿದಿರೆ: ಪಾಲಡ್ಕ ಗ್ರಾಪಂ ವ್ಯಾಪ್ತಿಯಲ್ಲಿ ಬಿಟಿ ರೋಡ್ ವಿದ್ಯಾಗಿರಿ ಶಾಲೆಯ ಪಕ್ಕ ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ಸಾಯಂಕಾಲ ಬಂಧಿಸಿದ್ದಾರೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯ ನಿವಾಸಿ ರಾಜು ಅವರ ಪುತ್ರ, ಪವನ್ ಕುಮಾರ್ ಬಂಧಿತ ಆರೋಪಿ. ಈತ ಮಾ.8ರಂದು ಸಾಯಂಕಾಲ ಪಾಲಡ್ಕ ಗ್ರಾಪಂ ವ್ಯಾಪ್ತಿಯ ಕಡಂದಲೆ ವಿದ್ಯಾಗಿರಿ ಬಳಿ, ಜನತಾ ನಗರದಲ್ಲಿ ಟ್ಯೂಶನ್ ಮುಗಿಸಿ ಸೈಕಲ್ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಹೋಗಿದ್ದಾನೆ. ನಿರ್ಜನ…

Read More

ಮಾ.11ರಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುವ ಮುನ್ಸೂಚನೆ

 ಬೆಂಗಳೂರು: ಮಾ.11 ರಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿಸಿಲ ಬೇಗೆಯಿಂದ ಕಂಗೆಟ್ಟಿದ ರಾಜ್ಯದ ಜನತೆಗೆ ಗುಡ್‌ನ್ಯೂಸ್ ಸಿಕ್ಕಿದೆ. ಕಳೆದೊಂದು ತಿಂಗಳಿನಿಂದ ನಾಡಿನ ಜನರು ಬಿಸಿಲ ಹೊಡೆತಕ್ಕೆ ಕಂಗಾಲಾಗಿದ್ದರು. ತಾಪಮಾನ ಏರಿಕೆ ಹಿನ್ನೆಲೆ ಮಳೆ ಮಾರುತಗಳು ಸಕ್ರಿಯವಾಗಿದ್ದು, ಮಾ.11ರಿಂದ 14ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ. ಮುಂದಿನ ಮೂರು ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು…

Read More

ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ..!!

ಪೊಲೀಸ್ ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ ಸ್ಪಷ್ಟ ಸೂಚನೆ ನೀಡಿದ್ದಾರೆ.ಶ್ರವಣ ಬೆಳಗೊಳದ ಶಾಸಕ ಬಾಲಕೃಷ್ಣ ಸಿಎನ್ ಅವರ ಪ್ರಶ್ನೆಗೆ ಸಚಿವ ಡಾ. ಜಿ ಪರಮೇಶ್ವರ್​ ಉತ್ತರ ನೀಡಿದ್ದಾರೆ.ರಾಜ್ಯದ ಪೊಲೀಸ್​ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ? ಎಂದು ಪ್ರಶ್ನಿಸಿದ್ದಾರೆ….

Read More

ಕೋರ್ಟ್ ಆದೇಶವನ್ನು ಪಾಲಿಸದೆ ಮಠದ ಜಾಗ ತೆರವು: ವಕ್ಫ್ ಅಧಿಕಾರಿ ಅಮಾನತು

ಚಿಕ್ಕಮಗಳೂರು: ಜಿಲ್ಲಾ ವಕ್ಫ್ ಅಧಿಕಾರಿ ಸೈಯದ್ ಸತ್ತಾರ್ ಷಾ ಹುಸೇನ್ ಅವರನ್ನು ಅಮಾನತುಗೊಳಿಸಲಾಗಿದೆ. ಇದಕ್ಕೆ ಕಾರಣ, ಕೋರ್ಟ್ ಆದೇಶವನ್ನು ಸ್ಥಳೀಯ ಆಡಳಿತಕ್ಕೆ ತಿಳಿಸದೆ ಮಠದ ಜಾಗವನ್ನು ಮಸೀದಿ ಸದಸ್ಯರು ತೆರವುಗೊಳಿಸಿದ ಪ್ರಕರಣ. ಈ ಘಟನೆಗೆ ಸಂಬಂಧಿಸಿದಂತೆ ವಕ್ಫ್ ಅಧಿಕಾರಿ ಸೇರಿದಂತೆ 14 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ರಾಜ್ಯ ವಕ್ಫ್ ಬೋರ್ಡ್ ಸಿಇಓ ಜೀಲಾನಿ ಮೊಕಾಶಿ ಅವರು ಚಿಕ್ಕಮಗಳೂರು ಜಿಲ್ಲಾ ವಕ್ಫ್ ಅಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಘಟನೆಯ ನೆಪದಲ್ಲಿ, ಮುಸ್ಲಿಂ ಸಮುದಾಯದವರು ಮೇ 5ರಂದು ಚಿಕ್ಕಮಗಳೂರು…

Read More

ನೆಲ್ಲಿದಡಿ ಗುತ್ತಿನ ವಿವಾದ ಸುಖಾಂತ್ಯ…! ಮಧ್ಯ ಪ್ರವೇಶಿಸಿ ಸಂಸದ ಚೌಟ

ಮಂಗಳೂರು: ಕಳೆದ ಕೆಲವು ದಿನಗಳಿಂದ ನೆಲ್ಲಿದಡಿ ಗುತ್ತು ವಿವಾದ ದ.ಕ ಜಿಲ್ಲೆಯಲ್ಲಿ ಹೊಸ ಸಂಚಲನವನ್ನು ಸೃಷ್ಟಿಸುತ್ತಿದೆ. ಈ ಜಾಗದ ಕಾಂತೇರಿ ಜುಮಾದಿ ದೈವಕ್ಕೆ ಸಂಕ್ರಾಂತಿ ಪೂಜೆ ಸಲ್ಲಿಸಲು ಎಮ್‌ಎಸ್‌ಇಝಡ್ ಅವಕಾಶ ನೀಡುತ್ತಿಲ್ಲ ಎಂಬ ವಿಚಾರ ತುಳುನಾಡಿನ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ತುಳುವರ ನಂಬಿಕೆ, ಆಚಾರ ವಿಚಾರಗಳಿಗೆ ಎಮ್‌ಎಸ್‌ಇಝಡ್ ಅಧಿಕಾರಿಗಳು ಧಕ್ಕೆ ತರುತ್ತಿದ್ದಾರೆ ಎಂಬುದಾಗಿ ಆಕ್ರೋಶ ಕೇಳಿ ಬಂದಿತ್ತು. ಇದೀಗ ಈ ವಿವಾದ ಸುಖಾಂತ್ಯ ಕಂಡಿದೆ. ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಸಭೆ ನಡೆದಿದ್ದು, ಗುತ್ತಿನ…

Read More

ಮಂಗಳೂರು: ಸೈಬರ್ ಅಪರಾಧದ ಪ್ರಮುಖ ಆರೋಪಿಗಳ ಪತ್ತೆ..!

ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಅಪರಾಧ ಪೊಲೀಸು ಠಾಣಾ ಅ.ಕ್ರ. 11-2025, U/S 66(C ) 66(D) IT Act and 308, 318 (4),319(2)BNS.ಪ್ರಕರಣದಲ್ಲಿ ಆರೋಪಿ ಪತ್ತೆ ಬಗ್ಗೆ ಮಾನ್ಯ ಪೊಲೀಸ್ ಅಧೀಕ್ಷಕರು ದಕ್ಷಿಣ ಕನ್ನಡ ಜಿಲ್ಲೆ, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ದಕ್ಷಿಣ ಕನ್ನಡ ಜಿಲ್ಲೆ ಇವರುಗಳ ನಿರ್ದೇಶನದಂತೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಮಂಜುನಾಥ ಆರ್.ಜಿ ರವರ ನೇತೃತ್ವದಲ್ಲಿ ಪಿಎಸ್‌ಐ ಯೂನುಸ್ ಆರ್ ಗಡ್ಡೆಕಾರ್ ಪಿಸಿ 2489 ನಾಗಪ್ಪ ಬೆನಕಟ್ಟಿ,…

Read More

ಬಂಟ್ವಾಳ: ದಿಗಂತ್ ಪತ್ತೆಗಾಗಿ ಪ್ರತಿಭಟನೆ ನಡೆಸಿದ್ದ ಹಿಂದೂ ಮುಖಂಡ ಭರತ್ ಕುಮ್ಡೇಲ್​ ಗೆ ಜಾಲತಾಣದಲ್ಲಿ ಜೀವ ಬೇದರಿಕೆ

ಬಂಟ್ವಾಳ: ನಾಪತ್ತೆಯಾಗಿದ್ದ ಪಿಯುಸಿ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಪ್ರತಿಭಟನೆ ನಡೆಸಿದ್ದ ಹಿಂದೂ ಮುಖಂಡರಿಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಜೀವ ಬೇದರಿಕೆ ಬರಲಾರಂಭಿಸಿದೆ. ಭಜರಂಗದಳ ಮುಖಂಡ ಭರತ್ ಕುಮ್ಡೇಲ್​ ಅವರಿಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. BEARY_ROYAL_NAWAB, ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್​ಗಳ ಮುಖಾಂತರ ಕೊಲೆ ಬೆದರಿಕೆ ಹಾಕಲಾಗಿದೆ. ದಿಗಂತ್ ಪತ್ತೆಗಾಗಿ ಮಾರ್ಚ್​ 1ರಂದು ಭಜರಂಗದಳ ಮುಖಂಡ ಭರತ್ ನೇತೃತ್ವದಲ್ಲಿ ಫರಂಗೀಪೇಟೆ ಬಂದ್ ನಡೆಸಲಾಗಿತ್ತು. ದಿಗಂತ್ ನಾಪತ್ತೆ ಹಿಂದೆ ಅನ್ಯಮತೀಯರ ಹಾಗೂ…

Read More

10Th ಪಾಸಾದವರಿಂದ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ..!

South East Central Railway ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ (10th Passed) ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಆಗ್ನೇಯ ಸೆಂಟ್ರಲ್ ರೈಲ್ವೆ/South East Central Railway. ಹುದ್ದೆಗಳ ಸಂಖ್ಯೆ : 835. ಹುದ್ದೆಗಳ ಹೆಸರು : ಅಪ್ರೆಂಟಿಸ್/Apprentice. ಉದ್ಯೋಗ ಸ್ಥಳ : ಬಿಲಾಸ್ಪುರ್ (ಛತ್ತೀಸ್‌ಗಢ). ಅಪ್ಲಿಕೇಶನ್ ಮೋಡ್ : ಆನ್‌ಲೈನ್‌ (Online) ಮೋಡ್. ಹುದ್ದೆಗಳ ವಿವರ : • ಬಡಗಿ :…

Read More