ಬಸ್- ಕಾರು ನಡುವೆ ಭೀಕರ ಅಪಘಾತ – ಐವರು ದುರ್ಮರಣ

ತಿರುಚ್ಚಿ : ಬಸ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನಪ್ಪಿದ ಘಟನೆ ತಿರುಚ್ಚಿ-ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತಲೈ ಬಳಿ ಮುಂಜಾನೆ 2:15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತರು ಪ್ರಯಾಣಿಸುತ್ತಿದ್ದ ಕಾರು ಕರೂರ್-ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತ್ತಲೈ ಬಳಿ ತಿರುಪುರ ಕಡೆಗೆ ಬರುತ್ತಿದ್ದ ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಸ್‌ನ ಕೆಳಭಾಗಕ್ಕೆ ನುಗ್ಗಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಅವಶೇಷಗಳಡಿ ಸಿಲುಕಿ…

Read More

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್: 21,413 ಅಂಚೆ ಇಲಾಖೆ ಹುದ್ದೆಗೆ ಅರ್ಜಿ ಆಹ್ವಾನ

ಉದ್ಯೋಗಿ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದ್ದು, 21 ಸಾವಿರಕ್ಕೂ ಅಧಿಕ ಉದ್ಯೋಗಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಇಲಾಖೆ ಅರ್ಜಿಯನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಕೂಡಲೇ ಆನ್ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮಾರ್ಚ್‌ 3 2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, 23 ಕ್ಷೇತ್ರಗಳಲ್ಲಿ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಉದ್ಯೋಗವನ್ನು ತುಂಬಲಾಗುತ್ತದೆ. ಅರ್ಜಿ ಸಲ್ಲಿಸಲು https://indiapostgdsonline.gov.in/ ಇಲ್ಲಿ ಕ್ಲಿಕ್‌ ಮಾಡಿ

Read More

SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ ವೇಳೆ KSRTC ಬಸ್ ಪ್ರಯಾಣ ಉಚಿತ

ಬೆಂಗಳೂರು: SSLC (10ನೇ ತರಗತಿ) ಮತ್ತು ದ್ವಿತೀಯ ಪಿಯುಸಿ (12ನೇ ತರಗತಿ) ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ಸಮಯದಲ್ಲಿ ಉಚಿತ ಬಸ್ ಪ್ರಯಾಣವನ್ನು ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಘೋಷಿಸಿದೆ. ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, KSRTC ತನ್ನ ಬಸ್‌ಗಳಲ್ಲಿ (ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್) ತಮ್ಮ ನಿವಾಸದಿಂದ ಅವರಿಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ನಿರ್ಧರಿಸಿದೆ ಎಂದು KSRTC ಪ್ರಕಟಣೆಯಲ್ಲಿ ತಿಳಿಸಿದೆ….

Read More

ಒಮನ್‌ ದೇಶದ ಬೋಟ್ ಪತ್ತೆ, ಮೂವರು ಮೀನುಗಾರರು ಅರೆಸ್ಟ್

ಉಡುಪಿ: ಮಲ್ಪೆ ಕರಾವಳಿಯಿಂದ ಸುಮಾರು ಎಂಟು ನಾಟಿಕಲ್ ಮೈಲು ದೂರದಲ್ಲಿರುವ ಸೇಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಬೋಟನ್ನು ಕರಾವಳಿ ಕಾವಲು ಪೊಲೀಸ್ ಹಾಗೂ ಮಂಗಳೂರು ಕೋಸ್ಟ್ ಗಾರ್ಡ್ ವಶಕ್ಕೆ ಪಡೆದುಕೊಂಡಿದ್ದು, ಅದರಲ್ಲಿದ್ದ ಮೂವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಒಮನ್ ದೇಶದ ಮೀನುಗಾರಿಕೆ ದೋಣಿ ಎಂದು ಗುರುತಿಸಲಾದ ಈ ಬೋಟನ್ನು ಮೊದಲಿಗೆ ಸ್ಥಳೀಯ ಮೀನುಗಾರರು ಗಮನಿಸಿದ್ದು, ಬಳಿಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಂಧಿತರನ್ನು ತಮಿಳುನಾಡಿನ ರಾಮನಾಥಪುರಂನ ಜೇಮ್ಸ್ ಫ್ರಾಂಕ್ಲಿನ್ ಮೋಸೆಸ್ (50) ತಿರುನಲ್ವೇಲಿಯ ರಾಬಿನ್‌ಸ್ಟನ್ (50)…

Read More

ಉಡುಪಿ: 14ನೇ ಮಹಡಿಯಿಂದ ಬಿದ್ದು ಯುವಕ ಸಾವು

ಉಡುಪಿ: ಕಟ್ಟಡವೊಂದರ 14ನೇ ಮಹಡಿಯಿಂದ ಬಿದ್ದು 29 ವರ್ಷದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಬ್ರಹ್ಮಗಿರಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಲೇಖಿರಾಜ್ (29) ಎಂದು ಗುರುತಿಸಲಾಗಿದೆ.ಪ್ರಾಥಮಿಕ ವರದಿಗಳ ಪ್ರಕಾರ, ಲೇಖಿರಾಜ್ ಅವರು ಆಯತಪ್ಪಿ ಕಟ್ಟಡದ ೧೪ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.ಯುವಕನ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Read More

ಭೀಕರ ಅಪಘಾತ: ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಮೇಲಕ್ಕೆ ಹಾರಿಬಿದ್ದು ಸ್ಥಳದಲ್ಲೇ ಸಾವು

ಚಿತ್ರದುರ್ಗ : ಚಿತ್ರದುರ್ಗದ ಎಕ್ಸ್‌ಪ್ರೆಸ್‌ವೇ ನಲ್ಲಿ ರಸ್ತೆ ದಾಟುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಮಹಿಳೆ 10 ಅಡಿಗೂ ಹೆಚ್ಚು ಎತ್ತರಕ್ಕೆ ಹಾರಿ ಬಿದ್ದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. 30 ಸೆಕೆಂಡುಗಳ ಸಿಸಿಟಿವಿ ಕ್ಲಿಪ್‌ನಲ್ಲಿ ಚಿತ್ರದುರ್ಗದ ಎಕ್ಸ್‌ಪ್ರೆಸ್‌ವೇ ನಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ರಸ್ತೆ ದಾಟಲು ಪ್ರಯತ್ನಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಆಕೆಗೆ ಢಿಕ್ಕಿಯಾಗಿದ್ದು, ಕಾರು ಢಿಕ್ಕಿಯಾದ ರಭಸಕ್ಕೆ ಮಹಿಳೆ…

Read More

ಜಾಗ್ವಾರ್ ವಿಮಾನಕ್ಕೆ ಮಂಗಳೂರಿನ ತನುಷ್ಕಾ ಪೈಲಟ್

ಮಂಗಳೂರು: ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಪಡೆದಿದ್ದಾರೆ. ಮಂಗಳೂರು ಮೂಲದ ಪ್ಲೆಯಿಂಗ್ ಆಫೀಸ‌ರ್ ತನುಷ್ಕಾ ಸಿಂಗ್ ಅವರಿಗೆ ಈ ಸದಾವಕಾಸ ದೊರಕಿದ್ದು, ಆಕೆ ಯುದ್ಧ ವಿಮಾನ ಸ್ಕ್ಯಾಡ್ರನ್‌ನಲ್ಲಿ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ.ಜಾಗ್ವಾರ್ ಯುದ್ಧ ವಿಮಾನವನ್ನು ಇದುವರೆಗೆ ಮಹಿಳಾ ಪೈಲಟ್‌ಗಳು ಶಾಶ್ವತ ನೆಲೆಯಲ್ಲಿ ಮುನ್ನಡೆಸಿಲ್ಲ. ತನುಷ್ಕಾ ಮಿಲಿಟರಿ ಹಿನ್ನೆಲೆಯ ಕುಟುಂಬದವರು. ಅವರ ತಂದೆ, ಅಜ್ಜ ಎಲ್ಲರೂ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಮೂಲತಃ…

Read More

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಮೂವರು ಮಹಿಳೆಯರ ಜೀವದಹನ

ಧರ್ಮಪುರಿ: ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಕಂಬನಲ್ಲೂರಿನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳಾ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.ಇದು ಸ್ಥಳೀಯ ಪಟಾಕಿ ಉದ್ಯಮದಲ್ಲಿನ ಸುರಕ್ಷತಾ ನಿಯಮಗಳ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಮೃತರೆಲ್ಲರೂ ಹತ್ತಿರದ ಹಳ್ಳಿಯ ನಿವಾಸಿಗಳು. ಸ್ಫೋಟ ಸಂಭವಿಸಿದಾಗ ಅವರು ಚಿನ್ನದುರೈ ಒಡೆತನದ ಪರವಾನಗಿ ಪಡೆದ ಸಂಗ್ರಹಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೀಕರ ಸ್ಫೋಟದ ತೀವ್ರತೆಗೆ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದರು. ಸ್ಫೋಟದ…

Read More

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ: ಆಕ್ಟಿವಾ ಸವಾರ ಮೃತ್ಯು

ಕಬಕ: ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಪುತ್ತೂರಿನ ಕಬಕದಲ್ಲಿ ನಡೆದಿದೆ. ಮೃತರನ್ನು ಇಡ್ಕಿದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಂಡಡ್ಕ ನಿವಾಸಿ ಜನಾರ್ಧನ ಪೂಜಾರಿ (40.) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Read More

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ

ಬೆಂಗಳೂರು: ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ರಿಲೀಫ್ ನೀಡಿದೆ. ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೊಮ್ಮೆ ಗಡುವು ವಿಸ್ತರಿಸಲಾಗಿದ್ದು, ಮಾರ್ಚ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸತತ 8ನೇ ಬಾರಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಿದಂತಾಗಿದೆ.ಈ ಹಿಂದೆ ಜನವರಿ 31ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಸಾರಿಗೆ ಇಲಾಖೆ ಮತ್ತೆ ಮಾರ್ಚ್ 31ರವರೆಗೆ ಗಡುವು…

Read More