ಖಾಸಗಿ ಆಸ್ಪತ್ರೆಯ ಎಡವಟ್ಟು: ಸಿಸೇರಿಯನ್ ಬಳಿಕ ಬಾಣಂತಿ ಹೊಟ್ಟೆಯಲ್ಲೇ ಉಳಿದ ಬಟ್ಟೆ- ಪತಿ ಆರೋಪ, ದೂರು

ಪುತ್ತೂರು: ಹೆರಿಗೆಯ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ ಬಯಲಾಗಿದ್ದು, ಖಾಸಗಿ ಆಸ್ಪತ್ರೆಯ ವಿರುದ್ಧ ಬಾಣಂತಿಯ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದೆ. ಹೌದು 2024ರ ನವೆಂಬರ್ 27ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ, ಪುತ್ತೂರು ತಾಲೂಕಿನ…

Read More

ಮಹಾಕುಂಭಮೇಳಕ್ಕೆ ಹೆಂಡತಿಯನ್ನು ಕರೆದೊಯ್ದು ಕತ್ತು ಸೀಳಿ ಕೊಲೆ!

ನವದೆಹಲಿ : ಮಹಾಕುಂಭಮೇಳಕ್ಕೆ ಹೆಂಡತಿಯನ್ನು ಕರೆದೊಯ್ದು, ಮಹಾಕುಂಭಮೇಳವೆಲ್ಲಾ ತಿರುಗಾಡಿ ಪೋಟೋ ವಿಡಿಯೋ ತೆಗೆದು ಕೊನೆಗೆ ಹೆಂಡತಿಯನ್ನು ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಮೀನಾಕ್ಷಿ ಎಂದು ಗುರುತಿಸಲಾಗಿದೆ. ತ್ರಿಲೋಕಪುರಿ ನಿವಾಸಿಯಾದೆ ಈಕೆ ಫೆಬ್ರವರಿ 18 ರಂದು ತನ್ನ ಪತಿ ಅಶೋಕ್ ಕುಮಾರ್ ಜೊತೆಗೆ ಪ್ರಯಾಗ್ ರಾಜ್ ಗೆ ತೆರಳಿದ್ದರು. ಪ್ರಯಾಗರಾಜ್ ಕಮಿಷನರೇಟ್ ವ್ಯಾಪ್ತಿಯ ಜುನ್ಸಿ ಪ್ರದೇಶದಲ್ಲಿ ಫೆಬ್ರವರಿ 18 ರ ರಾತ್ರಿ ಈ ಬರ್ಬರ ಹತ್ಯೆ ನಡೆದಿತ್ತು. ಆದರೆ, ಘಟನೆ ನಡೆದ 48…

Read More

ಬೈಕಂಪಾಡಿ ಯಲ್ಲಿ ಕಾರು ಅಫಘಾತ: ಕಾರು ಚಾಲಕ ಇಂಜಿನಿಯರ್ ವಿಜಯ ಮಯ್ಯ ಪವಾಡ ಸದೃಶ ಪಾರು

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕೋಲ್ನಾಡು ಕಿರುಸೇತುವೆ ಬಳಿ ಹೆದ್ದಾರಿ ಸೂಚನಾ ಫಲಕಕ್ಕೆ ಓಮ್ನಿ ಡಿಕ್ಕಿಯಾಗಿ ಪಲ್ಟಿಯಾಗಿದ್ದು ಓಮ್ನಿಯಲ್ಲಿದ್ದ ಕಾರು ಚಾಲಕ ಇಂಜಿನಿಯರ್ ವಿಜಯ ಮಯ್ಯ ಹಾಗೂ ಬಂಟ್ವಾಳ ಸಜಿಪ ಮೂಲದ ನಾಲ್ವರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಉಡುಪಿ ಜಿಲ್ಲೆಯ ಕಟಪಾಡಿಯಿಂದ ಕಂಬಳ ಮುಗಿಸಿ ವಾಪಸಾಗುತ್ತಿದ್ದ ವೇಳೆ ಮುಲ್ಕಿ ಸಮೀಪದ ಕೋಲ್ನಾಡು ಕಿರುಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ, ಹೆದ್ದಾರಿಯ ಕಬ್ಬಿಣದ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಿಂದ ನಾಲ್ವರಿಗೆ ಸಣ್ಣಪುಟ್ಟ…

Read More

ದೆಹಲಿ ವಿಧಾನಸಭೆ: ವಿರೋಧ ಪಕ್ಷದ ನಾಯಕಿಯಾಗಿ ಮಾಜಿ ಸಿಎಂ ಆತಿಶಿ ಆಯ್ಕೆ

ನವದೆಹಲಿ: ದೆಹಲಿ ವಿಧಾನಸಭೆಗೆ ಮಾಜಿ ಸಿಎಂ ಆತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಎಎಪಿಯ ಶಾಸಕರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಸೇರಿದಂತೆ ಪಕ್ಷದ 22 ಶಾಸಕರು ಇಂದು ನಡೆದ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಅವರನ್ನು ಆರಿಸಲಾಗಿದೆ. ಫೆ.24ರಿಂದ ದೆಹಲಿ ವಿಧಾನಸಭೆ ಅಧಿವೇಶನ ಪ್ರಾರಂಭವಾಗಲಿದೆ. ಈ 3 ದಿನಗಳ ಅಧಿವೇಶನದಲ್ಲಿ, ಆಡಳಿತರೂಢ ಬಿಜೆಪಿಯು ಹಿಂದಿನ ಎಎಪಿ ಸರ್ಕಾರದ…

Read More

ಕಂದಕಕ್ಕೆ ಉರುಳಿ ಬಿದ್ದ ಬಸ್ ‌- ಚಾಲಕ ಸಾವು, 17 ಯಾತ್ರಿಕರಿಗೆ ಗಾಯ

ಜಮ್ಮು: ಮಾತಾ ವೈಷ್ಣೋದೇವಿ ದೇಗುಲದಿಂದ ಹಿಂತಿರುಗುತ್ತಿದ್ದ ಬಸ್ ಶನಿವಾರ ಸಂಜೆ ಜಮ್ಮು ಬಳಿ 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಅಪಘಾತದಲ್ಲಿ ಚಾಲಕ ಸಾವನ್ನಪ್ಪಿದ್ದು, 17 ಯಾತ್ರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯುಕೆ-07ಪಿಎ-5640 ನೋಂದಣಿ ಸಂಖ್ಯೆಯನ್ನು ಹೊಂದಿರುವ ಬಸ್ ದೆಹಲಿಗೆ ತೆರಳುತ್ತಿದ್ದಾಗ ಜಮ್ಮು ಬಸ್ ನಿಲ್ದಾಣದಿಂದ ಸುಮಾರು ಎಂಟು ಕಿಲೋಮೀಟರ್ ದೂರದಲ್ಲಿರುವ ಮಂದಾ ಬಳಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿರುವು ಪಡೆಯುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್…

Read More

ಬೆಂಗಳೂರು: ತಡರಾತ್ರಿ ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ

ಬೆಂಗಳೂರು: ಅಶೋಕನಗರದ ಗರುಡ ಮಾಲ್ ಹತ್ತಿರ ಶನಿವಾರ ತಡರಾತ್ರಿ, ಕಾಂಗ್ರೆಸ್ ಮುಖಂಡ ಶೇಖ್ ಹೈದರ್ ಅಲಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಲೈವ್ ಬ್ಯಾಂಡ್ ಪ್ರದರ್ಶನವನ್ನು ನೋಡಿ ಹೊರಬಂದ ನಂತರ, ಶೇಖ್ ಹೈದರ್ ಅಲಿ ಮತ್ತು ಅವರ ಸ್ನೇಹಿತ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಆರೋಪಿಗಳು ಬೈಕ್ ಅನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದ ಹೈದರ್ ಅಲಿಯನ್ನು ಪೊಲೀಸರು ತಕ್ಷಣ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅಲ್ಲಿಯೇ ಅವರು ಸಾವನ್ನಪ್ಪಿದರು. ಘಟನೆ ಬಳಿಕ, ಬೌರಿಂಗ್ ಆಸ್ಪತ್ರೆ ಬಳಿ…

Read More

ICC Champions Trophy 2025: ನಾಳೆ ಭಾರತ- ಪಾಕ್‌ ನಡುವೆ ಹಣಾಹಣಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿ ಯಲ್ಲಿ ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಣ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಾಳೆ (ಫೆ.23, ಭಾನುವಾರ) ಮಧ್ಯಾಹ್ನ 2.30ಕ್ಕೆ (ಭಾರತೀಯ ಕಾಲಮಾನ) ಸರಿಯಾಗಿ ಪಂದ್ಯ ಆರಂಭವಾಗಲಿದೆ. ಈ ಹಿಂದೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಟ್ಟು ಐದು ಬಾರಿ ಮುಖಾಮುಖಿಯಾಗಿವೆ. ಆದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಎರಡು ಬಾರಿಯ ಚಾಂಪಿಯನ್ (2002, 2013) ಭಾರತದ ವಿರುದ್ಧ ಪಾಕಿಸ್ತಾನ…

Read More

ವಿಧ್ವಂಸಕ ಕೃತ್ಯಕ್ಕೆ ಸಂಚು; ರೈಲು ಹಳಿಯ ಮೇಲೆ ಟೆಲಿಫೋನ್ ಕಂಬ ಇಟ್ಟ ದುಷ್ಕರ್ಮಿಗಳು

ಕೇರಳ : ರೈಲು ಅಪಘಾತಗಳು ನಡೆಸಲು ಹಲವು ವಿಧ್ವಂಸಕ ಕೃತ್ಯಗಳು ನಡೆದಿರುವ ಘಟನೆ ದೇಶದಲ್ಲಿ ಸಾಕಷ್ಟು ಕಡೆಯಲ್ಲಿ ಬೆಳಕಿಗೆ ಬಂದಿದೆ. ಇಂತಹುದೇ ಒಂದು ಘಟನೆ ಫೆ.22ರ ಶನಿವಾರ ನಸುಕಿನ ಜಾವ 3.30 ರ ಸುಮಾರಿಗೆ ಕೇರಳದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಕೇರಳದ ಕೊಲ್ಲಂನ ಕುಂದರಾದಲ್ಲಿ ದುಷ್ಕರ್ಮಿಗಳು ರೈಲ್ವೇ ಹಳಿಗೆ ಅಡ್ಡಲಾಗಿ ಟೆಲಿಫೋನ್ ಕಂಬ ಹಾಕಿ ರೈಲು ಹಳಿ ತಪ್ಪಿಸುವ ಯತ್ನ ಮಾಡಿದ್ದಾರೆ. ಕೊಲ್ಲಂನ ಕುಂದರಾದ ಆರುಮುರಿಕಡ(arumurikkada) ಎಂಬಲ್ಲಿ ಹಳೆಯ ಅಗ್ನಿಶಾಮಕ ದಳದ ಸ್ಟೇಷನ್ ಸಮೀಪ ಈ ಘಟನೆ…

Read More

ಕಾಪು: ಕಿಡಿಗೇಡಿಗಳಿಂದ ಕ್ರೈಸ್ತ ಶಿಲುಬೆ ಧ್ವಂಸ- ದೂರು ದಾಖಲು

ಕಾಪು: ಕಾಪು ತಾಲೂಕು ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಎಂಬಲ್ಲಿ ಖಾಸಗಿ ಸ್ಥಳದಲ್ಲಿದ್ದ ಶಿಲುಬೆಯೊಂದನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ 19 ರಂದು ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಬೆಟ್ಟದಲ್ಲಿದ್ದ ಪವಿತ್ರ ಶಿಲುಬೆಯನ್ನು ಯಾರೋ ದುಷ್ಕರ್ಮಿಗಳು ಕೆಡವಿ ಧ್ವಂಸ ಮಾಡಿರುವುದು ಗಮನಕ್ಕೆ ಬಂದಿದೆ. ಈ ಪವಿತ್ರ ಶಿಲುಬೆಯು ಕ್ರೈಸ್ತ ಸಮುದಾಯದ ಹಾಗೂ ಕುಟುಂಬದ ಪೂಜಾ ಸ್ಥಳವಾಗಿದೆ. ಈ ಕೃತ್ಯದಿಂದ ತಮಗೆ ಅಘಾತವಾಗಿದ್ದು ಕ್ರೈಸ್ತ ಧರ್ಮಕ್ಕೆ ಅಪಮಾನವಾಗಿದೆ. ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಈ ವಿಷಯವನ್ನು…

Read More

SBI ನಲ್ಲಿದೆ ಭರ್ಜರಿ ಉದ್ಯೋಗಾವಕಾಶ: ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಉದ್ಯೋಗಾಕಾಂಕ್ಷಿಗಳಿಗೆ ಇದು ಗೋಲ್ಡನ್ ಚಾನ್ಸ್​ ಎನ್ನಬಹುದು. ಮೂರು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇನ್ನು ಅರ್ಹತೆ, ಆಯ್ಕೆ, ಅರ್ಜಿ ಶುಲ್ಕ, ಆಯ್ಕೆಯ ಮಾಡನದಂಡಗಳು, ಪ್ರಮುಖ ದಿನಾಂಕ ಮತ್ತು ಅರ್ಜಿ ಪ್ರಕ್ರಿಯೆಯ ಸಂಪೂರ್ಣ ವಿವರ ಇಲ್ಲಿ ನೀಡಲಾಗಿದೆ. ಉದ್ಯೋಗದ ಹೆಸರು– ಸಮಕಾಲೀನ ಲೆಕ್ಕ ಪರಿಶೋಧಕ (Concurrent Auditor) ಒಟ್ಟು ಉದ್ಯೋಗಗಳು- 1194 ಸ್ಯಾಲರಿ ಹೇಗಿದೆ- 45,000 ದಿಂದ 80,000 ರೂಪಾಯಿಗಳು ಕೆಲಸ ಮಾಡುವ ಸ್ಥಳ- ಭಾರತದ್ಯಾಂತ ವಯಸ್ಸಿನ ಮಿತಿ- 63 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಹತೆ- ಎಸ್‌ಬಿಐ…

Read More