ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಲು ಕುಮ್ಮಕ್ಕು ನೀಡಿದ್ದ ಮೌಲ್ವಿ ಕೊನೆಗೂ ಬಂಧನ..!

ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು ಗುರುವಾರ ಮೌಲ್ವಿ ಮುಫ್ತಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ, ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಿದಂತಾಗಿದೆ.ಮೌಲ್ವಿಯನ್ನು ಬಂಧಿಸುವ ವಿಚಾರದಲ್ಲಿ ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡ ಹೆಚ್ಚಾಗಿತ್ತು. ಇದೀಗ ಕೊನೆಗೂ ಆತನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಲ್ಲು ತೂರಾಟ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸದೆ ಇರುವ…

Read More

ದೆಹಲಿಯ 4ನೇ ಮಹಿಳಾ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ

 ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಘೋಷಿಸಿದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 27 ವರ್ಷಗಳ ಬಳಿಕ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದ್ದು, ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದೆ. ರೇಖಾ ಗುಪ್ತಾ ಶಾಲಿಮಾರ್ ಬಾಗ್ ಶಾಸಕಿಯಾಗಿದ್ದು, ಬಿಜೆಪಿಯ ಮಹಿಳಾ ವಿಭಾಗದ ಉಪಾಧ್ಯಕ್ಷೆಯೂ ಆಗಿದ್ದಾರೆ. ಈ ಮೂಲಕ ದೆಹಲಿಯ 4ನೇ ಮಹಿಳಾ ಸಿಎಂ ಆಗಿ ರೇಖಾ ಗುಪ್ತಾ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರೇಖಾ ಗುಪ್ತಾ…

Read More

ಮಂಗಳೂರು: ಸರ್ಕಾರಿ ಬಸ್ ಚಾಲಕನ ಎರ್ರಾಬಿರಿ ಚಾಲನೆ-ಪ್ರಯಾಣಿಕರ ಆಕ್ರೋಶ

ಮಂಗಳೂರು : ಖಾಸಗಿ ಬಸ್‌ಗೆ ಪೈಪೋಟಿ ನೀಡುವ ಸಲುವಾಗಿ ಸರ್ಕಾರಿ ಬಸ್ ಚಾಲಕನೊಬ್ಬ ಎರ್ರಾಬಿರಿ ಬಸ್ ಚಾಲನೆ ಮಾಡುವ ಮೂಲಕ ಚಾಲಕನ ನಿರ್ಲಕ್ಷ್ಯದ ಚಾಲನೆ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾದ ಇಂದು ಮುಂಜಾನೆ ಮಂಗಳೂರು-ಮೂಡಬಿದ್ರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ವಮಂಜೂರು ಸಮೀಪ ಸಂಭವಿಸಿದೆ. ಮಂಗಳೂರು ಮೂಡಬಿದ್ರೆ ಮಾರ್ಗವಾಗಿ ಕಾರ್ಕಳಕ್ಕೆ ಇತ್ತೀಚೆಗಷ್ಟೇ ಸರ್ಕಾರಿ ಬಸ್ ಸೇವೆಯನ್ನು ಆರಂಭ ಮಾಡಲಾಗಿದೆ. ಇದು ಮಹಿಳೆಯರಿಗೆ ಮತ್ತು ವಿದ್ಯಾರ್ಥಿಗಳಿಗಂತೂ ಇದು ಸಾಕಷ್ಟು ಅನುಕೂಲವಾಗಿದ್ದು, ಸಾಕಷ್ಟು ಜನ ಈ ಬಸ್ ಪ್ರೋಯೋಜನ ಪಡೆಯುತ್ತಿದ್ದಾರೆ. ಖಾಸಗಿ ಬಸ್ ಗಳೇ…

Read More

ಮುಡಾಕೇಸ್ ನಲ್ಲಿ ಸಿಎಂ ಗೆ ಕ್ಲೀನ್ ಚಿಟ್: ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸಿಯೇ ತೀರುತ್ತೇನೆ- ಶಪಥಗೈದ ದೂರುದಾರ ಸ್ನೇಹಮಯಿ ಕೃಷ್ಣ

ಮೈಸೂರು : ಮುಡಾ ಕೇಸ್ ಗೆ ಸಂಬಂಧಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಕ್ಲೀನ್ ಚಿಟ್ ನೀಡಿದ್ದು, ಬಿ ರಿಪೋರ್ಟ್ ಸಲ್ಲಿಸುವುದಾಗಿ ಮಾಹಿತಿ ಬಂದಿದೆ. ಈ ವಿಚಾರವಾಗಿ ದೂರುದಾರ ಸ್ನೇಹಮಯಿ ಕೃಷ್ಟ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸದಿದ್ದರೆ ನಾನು ಸ್ನೇಹಮಯಿ ಕೃಷ್ಣನೇ ಅಲ್ಲ ಎಂದು ಶಪಥ ಮಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಶಿಕ್ಷೆ ಕೊಡಿಸದೆ ಇದ್ದರೆ ನಾನು ಸ್ನೇಹಮಯಿ ಕೃಷ್ಣನೇ ಅಲ್ಲ ಎಂದು ದೂರುದಾರ…

Read More

ಉಪ್ಪಿನಂಗಡಿ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ..!

ಉಪ್ಪಿನಂಗಡಿ: 7 ನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲಾ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ತಣ್ಣೀರುವಂತ ಗ್ರಾಮದ ನಿವಾಸಿ ಶ್ರವಣ್ (13) ಮೃತ ವಿದ್ಯಾರ್ಥಿ. ನಿನ್ನೆ ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ಇನ್ನಷ್ಟೇ ತಿಳಿಯಬೇಕಿದೆ.

Read More

ಪದವು ಫ್ರೆಂಡ್ಸ್ ಕ್ಲಬ್ ನ 49ನೇ ವರ್ಷದ ವಾರ್ಷಿಕೋತ್ಸವ ಆಚರಣೆ

ಮಂಗಳೂರು : ಶಕ್ತಿನಗರದ ಪದವು ಫ್ರೆಂಡ್ಸ್ ಕ್ಲಬ್ ನ 49ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಶನಿವಾರ ನಡೆಯಿತು. ಪದವು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್ .ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹಿರಿಯ ರಂಗಕರ್ಮಿ ಜಿ.ಎಸ್.ಆಚಾರ್ ರವರಿಗೆ ಹಾಸ್ಯ ಚಕ್ರವರ್ತಿ ಬಿರುದಾಂಕಿತ ದಿ| ಮಾಧವ ಕೆ. ಶಕ್ತಿನಗರ ಸ್ಮಾರಕ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಶಾಲಾ ನಾಯಕತ್ವ ಸಮಾವೇಶಕ್ಕೆ ಆಯ್ಕೆಯಾದ ಕರ್ನಾಟಕದ ಏಕೈಕ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ದಾಕ್ಷಾಯಿನಿ ವೀರೇಶ್, ಪದವಿಪೂರ್ವ ಕಾಲೇಜಿಗೆ…

Read More

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ- ಸವಾರ ಮೃತ್ಯು,ಸಹಸವಾರ ಗಂಭೀರ

ಸಾಲಿಗ್ರಾಮ: ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ ಹೊಡೆದು ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಾಲಿಗ್ರಾಮ ಸಮೀಪ ಚೇಂಪಿಯ ವಿಶ್ವಕರ್ಮ ಸಭಾ ಭವನ ಬಳಿ ಸಂಭವಿಸಿದೆ. ಮೃತಪಟ್ಟ ಸ್ಕೂಟರ್ ಸವಾರ ಗುಂಡ್ಮಿ ಅನಂತ ಹೆಗ್ಡೆ(40) ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ಸಹಸವಾರ ಚೇಂಪಿ ದೇವಸ್ಥಾನದ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವಿಶ್ವನಾಥ್ ನಾಯಕ್ ಅವರನ್ನು ಬ್ರಹ್ಮಾವರ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಗೂಡ್ಸ್…

Read More

ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್

ನವದೆಹಲಿ: ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರೋಧದ ನಡುವೆ ಹೊಸದಾಗಿ ನೇಮಕಗೊಂಡ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬುಧವಾರ ಅಧಿಕಾರ ವಹಿಸಿಕೊಂಡರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಕುಮಾರ್ ಅವರನ್ನು ನೇಮಕ ಮಾಡಿದೆ. ಈ ಸಮಿತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸದಸ್ಯರಾಗಿದ್ದಾರೆ. ಹೊಸ ಕಾನೂನಿನ ಅಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಕುಮಾರ್ ಆಗಿದ್ದು, ಅವರ ಅಧಿಕಾರಾವಧಿ 2029 ರ ಜನವರಿ 26…

Read More

ಕಾನೂನು ಪದವಿ ಪ್ರಶ್ನೆಪತ್ರಿಕೆ ಸೋರಿಕೆ- ಮೂವರು ಉಪಪ್ರಾಂಶುಪಾಲಕರು ಅರೆಸ್ಟ್​

ಬೆಂಗಳೂರು: ಕಾನೂನು ಪದವಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೋಲಾರದ ಬಸವ ಶ್ರೀ ಕಾನೂನು ವಿಶ್ವವಿದ್ಯಾಲಯದ ಉಪಪ್ರಾಂಶುಪಾಲ ಡಾ. ನಾಗರಾಜ್, ವರೂಣ್ ಮತ್ತು ಜಗದೀಶ್ ಬಂಧಿತ ಆರೋಪಿಗಳು. ಜನವರಿ 22ರಂದು ನಡೆಯಬೇಕಿದ್ದ ಕಾನೂನು ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಸೋರಿಕೆಯಾದ ಪ್ರಶ್ನೆಪತ್ರಿಕೆ ಹಲವಾರು ಜನರ ವಾಟ್ಸಾಪ್​ ಮತ್ತು ಟೆಲಿಗ್ರಾಂನಲ್ಲಿ ಹರಿದಾಡಿತ್ತು. ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಸಿಸಿಬಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಿಸಿಕೊಂಡು ತನಿಖೆ…

Read More

ಶಾಲಾ ರಂಗೋತ್ಸವದಲ್ಲಿ ಭೂತಾರಾಧನೆ- ರಾಜ್ಯ ಸರಕಾರದ ವಿರುದ್ದ ಶಾಸಕ ವೇದವ್ಯಾಸ ಕಾಮತ್ ಗರಂ

ಮಂಗಳೂರು : ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಶಾಲಾ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ ಅನುಷ್ಠಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಬೊಂಬೆಯಾಟ, ಕೋಲಾಟ ಮುಂತಾದ ಮನೋರಂಜನಾ ಕಲೆಗಳ ಸಾಲಿಗೆ ಭೂತಾರಾಧನೆ ಸೇರಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ದೈವರಾಧನೆ ಎನ್ನುವುದು ಸಾವಿರಾರು ವರ್ಷಗಳಿಂದಲೂ ತುಳುನಾಡಿನ ಶ್ರದ್ಧಾ ಭಕ್ತಿಯ ಇತಿಹಾಸ ಹೊಂದಿರುವ ಧಾರ್ಮಿಕ ಆಚರಣೆಯಾಗಿದೆ ಹೊರತು ಅದು ಯಾವುದೇ ಮನೋರಂಜನೆಯ ಕಲೆಯಲ್ಲ. ಮಕ್ಕಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು…

Read More