ಬೆಳ್ತಂಗಡಿ: ಸರಕಾರಿ ಶಾಲೆ ಮಕ್ಕಳ ಮೇಲೆ ಹೆಜ್ಜೇನು ದಾಳಿ
ಬೆಳ್ತಂಗಡಿ: ಹೆಜ್ಜೇನು ದಾಳಿ ನಡೆಸಿದ ಪರಿಣಾಮ 10ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾದ ಘಟನೆ ಬೆಳ್ತಂಗಡಿಯ ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿದ್ದು, ಈ ವೇಳೆ ಕೆಲವು ಮಕ್ಕಳಿಗೆ ಹೆಜ್ಜೇನು ಕಚ್ಚಿದೆ. ಮಕ್ಕಳ ಕೂಗು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ. ಹಜ್ಜೇನು ಕಚ್ಚಿದ್ದರಿಂದ ಅಸ್ವಸ್ಥಗೊಂಡಿದ್ದ 10 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಶಾಲೆಯ ಸುತ್ತ ಹೆಜ್ಜೇನುಗಳು ಇನ್ನೂ…

