ವಿಟ್ಲ: ಬೀಡಿ ಮಾಲೀಕರ ಮನೆ ದರೋಡೆ ಪ್ರಕರಣ- ಕೇರಳದ ಪೊಲೀಸ್ ಅಧಿಕಾರಿ ಅರೆಸ್ಟ್
ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶದಲ್ಲಿ ಉದ್ಯಮಿಯೊಬ್ಬರ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ರೂಪಾಯಿ ನಗದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಎಎಸ್ಐ ಸೇರಿದಂತೆ ಮತ್ತೆ ನಾಲ್ವರು ದರೋಡೆಕೋರರನ್ನು ಬಂಧಿಸಿದ್ದಾರೆ. ಕೇರಳದ ಕೊಡಂಗಲ್ಲೂರು ಪೊಲೀಸ್ ಠಾಣೆಯ ಎಎಸ್ಐ ಶಫೀರ್ ಬಾಬು (48), ಬಂಟ್ವಾಳ ಪರ್ಲಿಯಾ ನಿವಾಸಿ ಮೊಹಮ್ಮದ್ ಇಕ್ಬಾಲ್(38), ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್ ಅನ್ಸಾರ್ (27), ಬಂಟ್ವಾಳ ನಾರ್ಶ ನಿವಾಸಿ ಸಿರಾಜುದ್ದೀನ್ (37) ಬಂಧಿತ ಆರೋಪಿಗಳು. ಪ್ರಕರಣದಲ್ಲಿ ತನಿಖಾ ತಂಡವು…

