ಬೆಳ್ತಂಗಡಿ: ಮನನೊಂದು ವಿಚ್ಛೇದ ಮಹಿಳೆ ಜಲಜಾಕ್ಷಿ ಆತ್ಮಹತ್ಯೆ

ಬೆಳ್ತಂಗಡಿ: ಶಿಶಿಲ ಮೀನಗಂಡಿ ನಿವಾಸಿ ವಿಚ್ಛೇದ ಮಹಿಳೆ ಜಲಜಾಕ್ಷಿ(28)ಮನನೊಂದು ಫೆ. 14ರಂದು ಸ್ವಗೃಹದ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ತಾಯಿ, ತಮ್ಮ ಇದ್ದಾರೆ. ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

Read More

ಮೂಡುಬಿದಿರೆ: ಬ್ರಹ್ಮಕಲಶಕ್ಕೆ ಶುಭಕೋರಿದ ಬ್ಯಾನರ್ ಹರಿದ ಕಿಡಿಗೇಡಿಗಳು ಅರೆಸ್ಟ್..!

ಮೂಡುಬಿದಿರೆ: ಲಾಡಿ ಶ್ರೀಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಅಳವಡಿಸಿರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾನಿಗೈದ ಪ್ರಕರಣಕ್ಕೆ ಸಂಬಂಧಿದಂತೆ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಹೊಟೇಲ್ ಕಾರ್ಮಿಕರಾದ ಮಹಮ್ಮದ್ ಕಾಮ್ದು ಝಮಾನ್ ಮತ್ತು ಜಾರ್ಖಾಂಡ್‌ನ ಮಹಮ್ಮದ್ ಸಿರಾಜ್ ಅನ್ಸಾರಿ ಬಂಧಿತ ಆರೋಪಿಗಳು. ಮೂಡುಬಿದಿರೆ ಪುರಸಭಾ ಸದಸ್ಯ ಇಟ್ಬಾಲ್ ಕರೀಂ ಲಾಡಿ ಶ್ರೀಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಹಾಕಿರುವ ಬ್ಯಾನರ್ ಅನ್ನು ಹರಿದು ಹಾನಿಗೊಳಿಸಲಾಗಿತ್ತು. ಈ ಬಗ್ಗೆ ಮೂಡುಬಿದಿರೆ ಪೊಲೀಸ್‌ ಠಾಣೆಗೆ ಕರೀಂ…

Read More

ಮಂಗಳೂರು: ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿ ಸರಣಿ ಅಪಘಾತ…!

ಮಂಗಳೂರು: ನಗರದ ಸಮೀಪ ಸುರತ್ಕಲ್‌ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ಸರಣಿ ಅಪಘಾತ ಗುರುವಾರ ರಾತ್ರಿ ಹೊನ್ನಕಟ್ಟೆ ಜಂಕ್ಷನ್‌ ನಲ್ಲಿ ಸಂಭವಿಸಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್‌ ನಿಲ್ಲಿಸಿ ಅದರ ಚಾಲಕ ಹೊಟೇಲ್ ಗೆ ತೆರಳಿದ್ದರು. ಈ ವೇಳೆ ಲಾರಿ ಏಕಾಏಕಿ ಇಳಿಜಾರಾಗಿರುವ ರಸ್ತೆಯಾಗಿ ರಾಷ್ಟೀಯ ಹೆದ್ದಾರಿ 66ನ್ನು ದಾಟಿಕೊಂಡು ಹೊಟೇಲಗೆ ಢಿಕ್ಕಿ ಹೊಡೆದಿದೆ. ಅಲ್ಲದೆ, ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೊ ರಿಕ್ಷಾ ಹಾಗೂ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎಂದು…

Read More

ಪ್ರಯಾಗ್ ರಾಜ್ ನಲ್ಲಿ ಮಹಾಕುಂಭ ಕಾಲ್ತುಳಿತದಲ್ಲಿ ಮೃತಪಟ್ಟ ವ್ಯಕ್ತಿ ಜೀವಂತ ವಾಪಸ್

ಮಹಾಕುಂಭ ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ ಎಂದು ಭಾವಿಸಲಾದ ಪ್ರಯಾಗ್ರಾಜ್ನ ವ್ಯಕ್ತಿ ಮಂಗಳವಾರ ಮನೆಗೆ ಮರಳಿದರು, ಆದರೆ ವ್ಯಕ್ತಿಯ ಸಾವಿನ 13 ನೇ ದಿನದಂದು ನಡೆದ ಅವರ ತೆಹ್ರ್ವಿ ಆಚರಣೆಗಾಗಿ ನೆರೆಹೊರೆಯವರು ಜಮಾಯಿಸಿದ್ದರು ಘಟನೆಗಳ ವಿಲಕ್ಷಣ ತಿರುವು ಸಮುದಾಯವನ್ನು ಆಘಾತಕ್ಕೀಡು ಮಾಡಿತು ಮತ್ತು ಶೀಘ್ರದಲ್ಲೇ ಅನಿರೀಕ್ಷಿತ ಆಚರಣೆಯಾಗಿ ಮಾರ್ಪಟ್ಟಿತು . ಪ್ರಯಾಗ್ರಾಜ್ನ ಝೀರೋ ರೋಡ್ ಪ್ರದೇಶದ ಚಾಹ್ಚಂದ್ ಗಲ್ಲಿ ನಿವಾಸಿ ಖುಂಟಿ ಗುರು ಜನವರಿ 29 ರಂದು ಕುಂಭಮೇಳದಲ್ಲಿ ಕಾಲ್ತುಳಿತದ ನಂತರ ಮೃತಪಟ್ಟಿದ್ದಾರೆ ಎಂದು ಭಾವಿಸಲಾಗಿತ್ತು. ಆದಾಗ್ಯೂ, ಕೆಲವು ಸಾಧುಗಳೊಂದಿಗೆ…

Read More

ಭಾರತೀಯ ಅಂಚೆ ಇಲಾಖೆಯಲ್ಲಿ 21,413 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂಡಿಯಾ ಪೋಸ್ಟ್‌ನಲ್ಲಿ ಬೃಹತ್ ಉದ್ಯೋಗ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ದೇಶಾದ್ಯಂತ 21,413 ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳನ್ನು ಭರ್ತಿ ಮಾಡಲಾಗುವುದು. 10ನೇ ತರಗತಿ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವವರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸೈಕಲ್ ಅಥವಾ ಸ್ಕೂಟರ್ ಓಡಿಸುವ ಸಾಮರ್ಥ್ಯ ಹೊಂದಿರಬೇಕು. 10 ನೇ ತರಗತಿ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು…

Read More

ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ: ಆರೋಪಿ ಆಸ್ಪತ್ರೆಯಿಂದ ಜೈಲಿಗೆ ಶಿಫ್ಟ್

ಮಂಗಳೂರು: ರಾಜ್ಯಾದ್ಯಂತ ಹೊಸ ಸಂಚಲನ ಮೂಡಿಸಿದ್ದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ಇದೀಗ ಆಸ್ಪತ್ರೆಯಿಂದ ನೇರವಾಗಿ ಜೈಲಿಗೆ ಶಿಫ್ಟ್ ಆಗಿದ್ದಾನೆ. ಆರೋಪಿ ಮುರುಗನ್ ಡಿ ಜೈಲಿಗೆ ಸೇರಿರುವ ವ್ಯಕ್ತಿ. ಪೊಲೀಸರ ವಶದಲ್ಲಿದ್ದ ವೇಳೆ ಸ್ಥಳ ಮಹಜರು ಮಾಡುತ್ತಿದ್ದಾಗ ಅಧಿಕಪ್ರಸಂಗ ಮಾಡಲು ಹೋಗಿ ಪೊಲೀಸರಿಂದ ಗುಂಡೇಟು ತಿಂದಿದ್ದ. ಕರ್ನಾಟಕ-ಕೇರಳ ಗಡಿ ಭಾಗದ ಅಜ್ಜಿನಡ್ಕ ಎಂಬಲ್ಲಿ ಈತ ಎಸ್ಕೇಪ್ ಆಗಲು ಯತ್ನಿಸಿದ್ದ. ಈ ಸಂದರ್ಭ ಉಳ್ಳಾಲ ಠಾಣಾಧಿಕಾರಿ ಆತನ ಕಾಲಿಗೆ ಗುಂಡು ಹಾರಿಸಿದ್ದರು. ನಂತರ ಆಸ್ಪತ್ರೆಗೆ ದಾಖಲಾಗಿ…

Read More

ಮಂಗಳೂರು : ಮೂರು ಅಡಿಕೆ ಸುಪಾರಿ ಕಂಪನಿ ಮಾಲೀಕರ ಕಚೇರಿ, ಮನೆಗಳಿಗೆ ಐಟಿ ದಾಳಿ – ಕೋಟ್ಯಂತರ ಮೌಲ್ಯದ ಚಿನ್ನ, ನಗದು ಪತ್ತೆ

ಮಂಗಳೂರು: ನಗರದ ಕಾರ್‌ಸ್ಟ್ರೀಟ್‌ನಲ್ಲಿರುವ ಮೂರು ಅಡಿಕೆ ಸುಪಾರಿ ಕಂಪನಿಗಳ ಮೇಲೆ ಐಟಿ ದಾಳಿ ನಡೆದಿದ್ದು, ಕೋಟ್ಯಂತರ ಮೌಲ್ಯದ ನಗದು ಮತ್ತು ಚಿನ್ನಾಭರಣಗಳು ಪತ್ತೆಯಾಗಿದೆ. ನಗರದ ಕಾರ್‌ಸ್ಟ್ರೀಟ್ ಬಳಿ ಕಾರ್ಯಾಚರಿಸುತ್ತಿರುವ ಸ್ವಸ್ತಿಕ್ ಟ್ರೇಡಿಂಗ್ ಕಂಪನಿ, ನರೇಶ್ ಆ್ಯಂಡ್ ಕಂಪನಿ, ಶಿವ್‌ ಪ್ರೇಮ್ ಟ್ರೇಡರ್ಸ್, ಪರಮೇಶ್ವರ್ ಟ್ರೇಡಿಂಗ್ ಕಂಪನಿಯ ಶಾಪ್‌ಗಳಿಗೆ ಐಟಿ ದಾಳಿ ನಡೆದಿದೆ. ಈ ಕಂಪನಿಯು ಅಡಿಕೆ ಸುಪಾರಿ, ಗುಟ್ಕಾ ಪಾನ್ ಮಸಾಲ ಉತ್ಪನ್ನಗಳನ್ನು ದೊಡ್ಡ ಪ್ರಮಾಣದಲ್ಲಿ ಉತ್ತರ ಭಾರತಕ್ಕೆ ಪೂರೈಕೆ ಮಾಡುತ್ತಿತ್ತು. ಬಿಹಾರ, ಉತ್ತರಪ್ರದೇಶ, ದೆಹಲಿ ಸೇರಿದಂತೆ…

Read More

ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಢಿಕ್ಕಿ-ಸವಾರ ಸಾವು

ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾತ್ರಿ ಗುರುವಾಯನಕೆರೆ-ವೇಣೂರು ರಸ್ತೆಯ ದ್ವಾರದ ಸಮೀಪ ನಡೆದಿದೆ. ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್‌ ಪೂಜಾರಿ (30) ಮೃತಪಟ್ಟವರು. ಗುರುವಾಯನಕೆರೆಯಿಂದ ವೇಣೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ…

Read More

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇನ್ನಿಲ್ಲ !

ಕಾರವಾರ : ಹಾಲಕ್ಕಿ ಬುಡಕಟ್ಟು ಸಮುದಾಯದ ಹೋರಾಟಗಾರ್ತಿ, ಹಿರಿಯ ಜಾನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುಕ್ರಿ ಬೊಮ್ಮ ಗೌಡ (88) ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ…

Read More

ಮಂಗಳೂರು: ವರ್ಷಾಂತ್ಯದೊಳಗೆ 43 ಸ್ವಯಂಚಾಲಿತ ಡ್ರೈವಿಂಗ್‌ ಟೆಸ್ಟ್‌ ಟ್ರ್ಯಾಕ್‌, 11 ಸ್ವಯಂಚಾಲಿತ ಟೆಸ್ಟಿಂಗ್‌ ಕೇಂದ್ರ ಸ್ಥಾಪನೆ

ಮಂಗಳೂರು: 43 ನೂತನ ಸ್ವಯಂಚಾಲಿತ ಡ್ರೈವಿಂಗ್‌ ಟೆಸ್ಟ್‌ ಟ್ರ್ಯಾಕ್‌ಗಳು ಹಾಗೂ 11 ಸ್ವಯಂಚಾಲಿತ ಟೆಸ್ಟಿಂಗ್‌ ಕೇಂದ್ರಗಳನ್ನು ಈ ವರ್ಷದೊಳಗೆ ರಾಜ್ಯದ ವಿವಿಧೆಡೆ ಸ್ಥಾಪಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಂಗಳೂರು ಆರ್‌ಟಿಒ ಕಚೇರಿಗೆ ಭೇಟಿ ನೀಡಿದ ಅವರು ಮಾತನಾಡಿ, ಸ್ವಯಂಚಾಲಿತ ಡ್ರೈವಿಂಗ್‌ ಟೆಸ್ಟ್‌ ಟ್ರಾಕ್‌ಗಳನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆರಂಭಿಸುತ್ತಿರುವುದು ದೇಶದಲ್ಲೇ ಮೊದಲು. ಏಳೆಂಟು ಜಿಲ್ಲೆಗಳಲ್ಲಿ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಉಳಿದೆಡೆ ಕೆಲಸ ಪ್ರಗತಿಯಲ್ಲಿದೆ. ಇದು ಕಾರ್ಯಾರಂಭವಾದರೆ ಡ್ರೈವಿಂಗ್‌ ಲೈಸನ್ಸ್‌ ಪರೀಕ್ಷಾ ಪ್ರಕ್ರಿಯೆಯು ಸೆನ್ಸಾರ್‌ ಮೂಲಕ…

Read More