ಬಂಟ್ವಾಳ: ಕಾರುಗಳ ನಡುವೆ ಅಪಘಾತ- ನಾಲ್ವರಿಗೆ ಗಾಯ..!

ಬಂಟ್ವಾಳ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ನಾಲ್ಕು ಜನರು ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಾವಲ್ ಕಟ್ಟೆ ಸಮೀಪ ಈ ಅಪಘಾತ ಸಂಭವಿಸಿದ್ದು, ಎಡಭಾಗದಲ್ಲಿ ಬರುತ್ತಿದ್ದ ಕಾರು ಬಲಕ್ಕೆ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಇನ್ನೋವಾ ಕಾರು ಡಿಕ್ಕಿ ಹೊಡೆದ ರಭಸಕ್ಕೆ ತಿರುವು ತೆಗೆದುಕೊಳ್ಳುತ್ತಿದ್ದ ಕಾರು ಪಲ್ಟಿ ಹೊಡೆದಿದ್ದು, ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರು ಅಪಘಾತದಲ್ಲಿ ನಾಲ್ಕು ಜನರಿಗೆ ಸಣ್ಣ ಪುಟ್ಟ…

Read More

ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಬಾಲಾಲಯ ಪ್ರತಿಷ್ಠೆ

ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದ ರಜತಮಹೋತ್ಸವದ ಪ್ರಯುಕ್ತ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಪುನಃಪ್ರತಿಷ್ಠೆ ಕಾರ್ಯಕ್ರಮಗಳಿಗೆ ಪೂರ್ವಭಾವಿಯಾಗಿ ಬಾಲಾಲಯ ಪ್ರತಿಷ್ಠೆಯು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾತಃಕಾಲ ಬ್ರಹ್ಮಶ್ರೀ ಕದ್ರಿ ಕೃಷ್ಣ ಅಡಿಗರ ನೇತೃತ್ವದಲ್ಲಿ ಗಣಪತಿ ಹೋಮ, ಮೃತ್ಯುಂಜಯ ಹೋಮ ನಡೆದು, ಸಾನಿಧ್ಯದಲ್ಲಿ ಸಂಕೋಚದ ವಿಧಿ ವಿಧಾನಗಳನ್ನು ನಡೆಸಿ ಶ್ರೀ ಕೃಷ್ಣದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ಶ್ರೀ ವಿಶ್ವಕರ್ಮ ಪ್ರಾರ್ಥನೆ ಹಾಗೂ ವೀಳ್ಯ ಮುಹೂರ್ತ ನೆರವೇರಿಸಲಾಯಿತು. ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಸುಂದರ್…

Read More

ಏನಿದು ‘ಧರ್ಮ ಸಂಸದ್’.? ಸನಾತನ ಧರ್ಮದಿಂದ ‘ರಾಹುಲ್ ಗಾಂಧಿ’ ಹೊರಹಾಕಲು ‘ಧಾರ್ಮಿಕ ಸಂಸತ್ತು’ ಪ್ರಸ್ತಾವ

ನವದೆಹಲಿ : ರಾಹುಲ್ ಗಾಂಧಿ ಅವರನ್ನು ಸನಾತನ ಧರ್ಮದಿಂದ ಹೊರಹಾಕಲು ಶಂಕರಾಚಾರ್ಯರು ಪ್ರಸ್ತಾಪಿಸಿದ ನಿರ್ಣಯವನ್ನ ಧರ್ಮ ಸಂಸದ್ (ಧಾರ್ಮಿಕ ಸಂಸತ್ತು) ಸರ್ವಾನುಮತದಿಂದ ಅಂಗೀಕರಿಸಿದೆ. ಪ್ರಾಚೀನ ಧಾರ್ಮಿಕ ಸಂಪ್ರದಾಯಕ್ಕೆ ಅವಮಾನ ಎಂದು ಭಾವಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಈ ನಿರ್ಧಾರ ಬಂದಿದೆ. ರಾಹುಲ್ ಗಾಂಧಿ ಹೇಳಿಕೆಗೆ ಖಂಡನೆ.!ರಾಹುಲ್ ಗಾಂಧಿ ಅವರ ಹೇಳಿಕೆಯನ್ನ ಬಲವಾಗಿ ಖಂಡಿಸಿರುವ ಧರ್ಮ ಸಂಸದ್, ಅವರ ಹೇಳಿಕೆಗಳು ಸನಾತನ ಧರ್ಮಕ್ಕೆ ಅಗೌರವ ತೋರಿದೆ ಎಂದು ಹೇಳಿದೆ. ಧಾರ್ಮಿಕ ಮುಖಂಡರ ಸಭೆ ಅಂತಹ ನಡವಳಿಕೆ ಸ್ವೀಕಾರಾರ್ಹವಲ್ಲ ಮತ್ತು ನಂಬಿಕೆ ಮತ್ತು…

Read More

ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ಚುನಾವಣೆ: 17 ಮಂದಿ ಅಭ್ಯರ್ಥಿಗಳು ಜಯಭೇರಿ

ಬಂಟ್ವಾಳ: ಇಲ್ಲಿನ ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ಭಾನುವಾರ ಚುನಾವಣೆ ನಡೆದಿದ್ದು, 17 ಮಂದಿ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತರಿಗೆ ಈ ಬಾರಿಯೂ ಸೋಲಾಗಿದೆ. ಸಾಮಾನ್ಯ ಕ್ಷೇತ್ರದಿಂದ ಅರುಣ್, ಅರುಣ್ ಕುಮಾರ್ ಕೆ., ಕಿರಣ್ ಕುಮಾರ್ ಎ., ಪ್ರೇಮನಾಥ ಬಂಟ್ವಾಳ, ಭೋಜ ಸಾಲಿಯಾನ್, ರಮೇಶ್ ಸಾಲಿಯಾನ್, ಸತೀಶ್,ರಮೇಶ್ ಸಾಲಿಯಾನ್, ಸುರೇಶ್ ಕುಲಾಲ್, ಸುರೇಶ್ ಕುಲಾಲ್ ಎನ್., ಹರೀಶ್, ಮಹಿಳಾ ಕ್ಷೇತ್ರದಿಂದ ಮಾಲತಿ ಮಚ್ಚೇಂದ್ರ, ವಿದ್ಯಾ,…

Read More

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ರಾಷ್ಟ್ರಪತಿ ಮುರ್ಮು 

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಸ್ನಾನ ಮಾಡಿದ ನಂತರ ಅವರು ಪ್ರಾರ್ಥನೆ ಸಲ್ಲಿಸಿದರು. ಇದಕ್ಕೂ ಮುನ್ನ ಪ್ರಯಾಗ್ ರಾಜ್ ಗೆ ಆಗಮಿಸಿದ ಅವರನ್ನು ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುವ ಮೊದಲು ರಾಷ್ಟ್ರಪತಿ ಮುರ್ಮು ಈ…

Read More

ಬಾಲಿವುಡ್ ನಟ ಸಂಜಯ್ ದತ್ ಗೆ 72 ಕೋಟಿ ರೂಪಾಯಿಯ ಆಸ್ತಿ ಉಯಿಲು ಮಾಡಿ ಹೋದ ಮಹಿಳಾ ಅಭಿಮಾನಿ..!

ಹೊಸದಿಲ್ಲಿ: ಬಾಲಿವುಡ್ ನಟ ಸಂಜಯ್ ದತ್ ಅವರ ಮಹಿಳಾ ಅಭಿಮಾನಿಯೊಬ್ಬರು ತಮ್ಮ ನಿಧನಕ್ಕೂ ಮುನ್ನ 72 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಜಯ್ ದತ್ ಹೆಸರಿಗೆ ಉಯಿಲು ಮಾಡಿ ಹೋಗಿರುವುದು ಅಚ್ಚರಿ ಮೂಡಿಸಿದೆ. ‘ರಾಕಿ’ ಚಿತ್ರದ ಮೂಲಕ ಬಾಲಿವುಡ್ ಗೆ ಪದಾರ್ಪಣೆ ಮಾಡಿದ ಸಂಜಯ್ ದತ್ 135ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಆರಂಭದ ದಿನಗಳ ವರ್ಚಸ್ಸು ಹಲವಾರು ಹೃದಯಗಳನ್ನು ಗೆದ್ದಿತ್ತು. ಈ ಪೈಕಿ ಓರ್ವ ಮಹಿಳಾ ಅಭಿಮಾನಿಯು ತಾವು ನಿಧನರಾಗುವುದಕ್ಕೂ ಮುನ್ನ ಹಲವಾರು ಕೋಟಿ ಮೌಲ್ಯದ…

Read More

1 ವರ್ಷದ ಹಿಂದೆ ನಡೆದ ಕೊಲೆ ಪ್ರಕರಣ – ಮೂವರು ಆರೋಪಿಗಳ ಬಂಧನ…!

ಉಡುಪಿ: ನಗರದ ಸಮೀಪದ ಕರಾವಳಿ ಜಕ್ಷಂನ್ ನಲ್ಲಿ 1 ವರ್ಷದ 4 ತಿಂಗಳ ಹಿಂದೆ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕನಕಪ್ಪ ಹನುಮಂತ ರೋಡಿ(46),  ಯಮನೂರ ತಿಪ್ಪಣ್ಣ ಮಾರಣ ಬಸರಿ(24), ಯಮನೂರಪ್ಪ ಜೇಡಿ,@ ರೊಡ್ಡ ಯಮನೂರಪ್ಪ (26) ಎಂದು ಗುರುತಿಸಲಾಗಿದೆ. ಘಟನೆ ವಿವರ: ಫಿರ್ಯಾದುದಾರರಾದ ಸುರೇಶ್‌ ಕುಮಾರ್‌(57), ತಂದೆ: ದಿ|| ತಿಮ್ಮಯ್ಯ, ಕೆಳಾರ್ಕಳಬೆಟ್ಟು, ಉಡುಪಿರವರು ಸಿ.ಎಸ್‌.ಕೆ ಸೆಕ್ಯೂರಿಟಿ ಸರ್ವೀಸ್‌ ನಡೆಸಿಕೊಂಡಿದ್ದು, ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಕರಾವಳಿ ಜಂಕ್ಷನ್‌ ಬಳಿ…

Read More

ಛತ್ತೀಸ್‌ಗಢದಲ್ಲಿ 31 ನಕ್ಸಲರ ಹತ್ಯೆ

ಬಿಜಾಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖಾಮುಖಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸಹ ಹುತಾತ್ಮರಾಗಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ವಿವಿಧ ಭದ್ರತಾ ಪಡೆಗಳ ಸಿಬ್ಬಂದಿಯ ಜಂಟಿ ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಬೆಳಿಗ್ಗೆ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ…

Read More

ನಾಳೆಯಿಂದ 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಆರಂಭ

ಬೆಂಗಳೂರು: ನಾಳೆಯಿಂದ 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಆರಂಭವಾಗಲಿದೆ. ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ಶೋ ಕಾರ್ಯಕ್ರಮವು ಯಲಹಂಕದ ವಾಯು ನೆಲೆಯಲ್ಲಿ ಜರುಗಲಿದೆ. ರನ್ ಟು ಎ ಬಿಲಿಯನ್ ಆಪರ್ಚುನಿಟೀಸ್ ಎಂಬ ವಿಶಾಲ ಧ್ಯೇಯದೊಂದಿಗೆ 5 ದಿನಗಳ ಕಾಲ ಏರೋ ಇಂಡಿಯಾ ಶೋ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಯಲಹಂಕ ವಾಯುನೆಲೆ ಸಿದ್ಧವಾಗಿದೆ. ಫೆಬ್ರವರಿ 10 ರಿಂದ 14ರವರೆಗೆ ಏರ್ ಶೋ ನಡೆಯಲಿದ್ದು, ಕಾರ್ಯಕ್ರಮಕ್ಕೆ ದೇಶ, ವಿದೇಶದ ಗಣ್ಯರು ಆಗಮಿಸಲಿದ್ದಾರೆ. ಜೊತೆಗೆ ದೇಶ, ವಿದೇಶದ ವಾಯುಪಡೆಯ ವಿಮಾನಗಳು ಜನರ…

Read More

ಮೂಲ್ಕಿ: ಸ್ಕೂಟರ್ ಗೆ ಟೆಂಪೋ ರಿಕ್ಷಾ ಡಿಕ್ಕಿ- ಸ್ಕೂಟರ್ ಸವಾರೆ ಮಮತಾ ಬಂಗೇರ ಕೊನೆಯುಸಿರು

ಮೂಲ್ಕಿ: ಟೆಂಪೋ ರಿಕ್ಷಾವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರೆ ಮಮತಾ ಬಂಗೇರ (42) ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಿನ್ನಿಗೋಳಿ ಸಮೀಪ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಗ್ರಾಮ ಪಂಚಾಯತ್ ಬಳಿಯ ಕೆ.ಎಸ್. ರಾವ್ ನಗರ ತಿರುವಿನ ರಸ್ತೆಯಲ್ಲಿ ಗುರುವಾರ ಟೆಂಪೋ ರಿಕ್ಷಾವೊಂದು ಹಿಂಬದಿಯಿಂದ ಬಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಮತಾ ಬಂಗೇರ ಅವರನ್ನು ಆಸ್ಪತ್ರೆಗೆ ದಾಖಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.ಮುಂಬಯಿಯಲ್ಲಿ…

Read More