Headlines

ಮಂಗಳೂರು: ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್..!!

ಮಂಗಳೂರು: ಅರ್ಚಕರೊಬ್ಬರನ್ನು ಎಫ್‌ಬಿಯಲ್ಲಿ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನೇ ಮುಂದಿಟ್ಟುಕೊಂಡು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯಕ್ಷಗಾನ ಕಲಾವಿದನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಕೊಳಂಬೆ ನಿವಾಸಿ ಅಶ್ವಥ್ ಆಚಾರ್ಯ (33) ಬಂಧಿತ ವ್ಯಕ್ತಿ. ಅಶ್ವತ್ಥ್ ಆಚಾರ್ಯ ಫೇಸ್ ಬುಕ್‌ನಲ್ಲಿ ಕಾಸರಗೋಡು ಮೂಲದ ಅರ್ಚಕರೊಬ್ಬರೊಂದಿಗೆ ತಾನು ಯಕ್ಷಗಾನ ಕಲಾವಿದ ಎಂದು ಪರಿಚಯಿಸಿಕೊಂಡು ಫ್ರೆಂಡ್ ಆಗಿದ್ದ. ಬಳಿಕ ಇಬ್ಬರೂ ಆನ್‌ಲೈನ್‌ನಲ್ಲಿ ಸಂಪರ್ಕದಲ್ಲಿದ್ದು, ಲೈಂಗಿಕವಾಗಿ ಆಕರ್ಷಿಸಿ ಸೆಕ್ಸ್ ಸಂಬಂಧಿಸಿ…

Read More

ಮಂಗಳೂರು: ಬಾಲಕಿಗೆ ಸ್ನ್ಯಾಪ್‌ ಚಾಟ್‌ನಲ್ಲಿ ಅಶ್ಲೀಲ ವೀಡಿಯೋ ಕಳಿಸಿ ಬೆದರಿಕೆ- ಪ್ರಕರಣ ದಾಖಲು

ಮಂಗಳೂರು: ಸ್ನ್ಯಾಪ್‌ಚಾಟ್‌ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೋ ಫೈಲ್‌ ಕಳುಹಿಸಿ ಬೆದರಿಕೆ ಹಾಕಿದ್ದಾನೆ. ಬಾಲಕಿಯ ದೂರಿನ ಮೇರೆಗೆ ಬೆದರಿಕೆ ಹಾಕಿದವನ ವಿರುದ್ಧ ಮಂಗಳೂರಿನ ಸೆನ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನ್ನ ಸ್ನ್ಯಾಪ್‌ಚಾಟ್‌ ಖಾತೆಗೆ ಓರ್ವ ವ್ಯಕ್ತಿ ಆತನ ಸ್ನ್ಯಾಪ್‌ಚಾಟ್‌ ಖಾತೆಯಿಂದ ಅಶ್ಲೀಲತೆಯ ವೀಡಿಯೋ ಕಾಲ್‌ನ ಸ್ಕ್ರೀನ್‌ ರೆಕಾರ್ಡ್‌ ಮಾಡಿರುವ ವೀಡಿಯೋ ಫೈಲ್‌ ಅನ್ನು ಕಳುಹಿಸಿ ಬೆದರಿಕೆ ಹಾಕಿದ್ದಾನೆ ಎಂದು ಅಪ್ರಾಪ್ತ ವಯಸ್ಸಿನ ಬಾಲಕಿ ನ್ಯಾಷನಲ್‌ ಸೈಬರ್‌ ಕ್ರೈಂ ರಿಪೋರ್ಟಿಂಗ್‌ ಪೋರ್ಟಲ್‌ಗೆ (ಎನ್‌ಸಿಸಿಆರ್‌ಪಿ) ದೂರು ನೀಡಿದ್ದಳು.ಅದರಂತೆ ಪೊಲೀಸರು…

Read More

ವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್

ಮಂಗಳೂರು: ರಾಜ್ಯಸಭಾ ಸಂಸದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ಹೆಗಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೀಡಿದ್ದ 7.59 ಎಕರೆ ಕೃಷಿ ಭೂಮಿಯ ಅನುದಾನವನ್ನು ರದ್ದುಗೊಳಿಸಿ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯ ಆದೇಶ ಹೊರಡಿಸಿದೆ. ಮೈಸೂರು ಭೂ ಮಂಜೂರಾತಿ ನಿಯಮಗಳು, 1969 ರ ಅಡಿಯಲ್ಲಿ 1972 ರಲ್ಲಿ ಹರ್ಷೇಂದ್ರ ಅವರಿಗೆ ಭೂಮಿಯನ್ನು ನೀಡಲಾಗಿತ್ತು. ಆಗ ಸಲ್ಲಿಸಿದ ಅಫಿಡವಿಟ್‌ನಲ್ಲಿ, ವಾರ್ಷಿಕ 1,200 ರೂ. ಆದಾಯವಿರುವ ‘ಭೂರಹಿತ’ ಎಂದು ಗುರುತಿಸಿಕೊಂಡಿದ್ದ ಹರ್ಷೇಂದ್ರ,…

Read More

ವೀಳ್ಯದೆಲೆಯ ಆರೋಗ್ಯ ಗುಣಗಳು

ಭಾರತೀಯ ಸಂಪ್ರದಾಯದಲ್ಲಿ ವಿಶೇಷ ಸ್ಥಾನ ಪಡೆದಿರುವ ವೀಳ್ಯದೆಲೆ ಆರೋಗ್ಯವನ್ನೂ ವೃದ್ಧಿಸುತ್ತದೆ. ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇಲ್ಲಿದೆ. ಗಾಯದ ನೋವು ನಿವಾರಣೆ: ವೀಳ್ಯದೆಲೆಯ ರಸವನ್ನು ಗಾಯವಾದಲ್ಲಿ ಹಚ್ಚಿದರೆ ಕೀವಾಗದಂತೆ ತಡೆಯುತ್ತದೆ. ಜತೆಗೆ ನೋವನ್ನೂ ಬೇಗನೆ ಕಡಿಮೆ ಮಾಡುತ್ತದೆ. ದೇಹದ ತೂಕ ಇಳಿಸಿಕೊಳ್ಳಲು ವೀಳ್ಯದೆಲೆ ಅತ್ಯತ್ತಮ ಪದಾರ್ಥವಾಗಿದೆ. ವೀಳ್ಯೆದಲೆಯ ಕಷಾಯವನ್ನು ಮಾಡಿ ಸೇವಿದರೆ ದೇಹದಲ್ಲಿನ ಕೊಬ್ಬು ನಿವಾರಣೆಯಾಗುತ್ತದೆ ಎನ್ನುತ್ತಾರೆ ಬಲ್ಲವರು. ಊಟದ ಬಳಿಕ ಹೊಟ್ಟೆಯಲ್ಲಿ ಉಂಟಾಗುವ ಗ್ಯಾಸ್ಟ್ರಿಕ್​ ಸಮಸ್ಯೆಯನ್ನು ನಿವಾರಿಸಲು ವೀಳ್ಯದೆಲೆ ನೆರವಾಗುತ್ತದೆ. ಅದಕ್ಕೆ…

Read More

ಬೆಳ್ತಂಗಡಿ: ಕತ್ತಲಾದರೆ ಸಾಕು ಈ ಮನೆಯಲ್ಲಿ ಶುರುವಾಗುತ್ತಂತೆ ಪ್ರೇತದ ಕಾಟ..! ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ ವಿಚಿತ್ರ ಮುಖ

ಬೆಳ್ತಂಗಡಿ: ಮಾಲಾಡಿ ಗ್ರಾಮ ರಾಜ್ಯಾದ್ಯಂತ ಭಾರೀ ಸುದ್ದಿಯಾಗುತ್ತಿದೆ. ಕಾರಣ, ಅಲ್ಲಿರುವ ಮನೆ ಒಂದರಲ್ಲಿ ಪ್ರೇತದ ಕಾಟ ಜೋರಾಗಿದೆ. ಇದರಿಂದ ಇಡೀ ಊರು ಕಂಗಾಲಾಗಿದ್ದು, ಮನೆಯಲ್ಲಿ ನಡೆಯುವ ಆತ್ಮಗಳ ಕಾಟವನ್ನು ಕಣ್ಣಾರೆ ನೋಡಲು ಸುತ್ತಮುತ್ತಲಿನ ಊರಿನ ಜನ ಬರುತ್ತಿದ್ದಾರೆ. ರಾತ್ರಿ ಮನೆಯಲ್ಲಿನ ಪಾತ್ರೆ ಎಸೆದು ರಂಪಾಟ ಮಾಡುತ್ತಂತೆ ಪ್ರೇತ. ಪ್ರೇತಾತ್ಮದ ಕಾಟಕ್ಕೆ ಮಾಲಾಡಿಯ ಜನರು ಬೇಸತ್ತಿದ್ದಾರೆ. ನಮಗೆ ಮಾತ್ರ ತೊಂದರೆ ಆಗುತ್ತಿದೆ, ಯಾರೋ ನಮಗೆ ಮಾಟ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ ಮಾಲಾಡಿಯ ಉಮೇಶ್ ಶೆಟ್ಟಿ ಕುಟುಂಬ ಪ್ರೇತದ ಕಾಟ…

Read More

ಮಂಗಳೂರು : ವಾಟ್ಸ್‌ಆ್ಯಪ್‌ ಸಂದೇಶವನ್ನು ನಂಬಿ ಲಕ್ಷಾಂತರ ರೂಪಾಯಿ ಕಳೆದುಕೊಂಡರು

ಮಂಗಳೂರು: ಸ್ಟಾಕ್‌ ಕಮ್ಯೂನಿಟಿಗೆ ಸಂಬಂಧಿಸಿದಂತೆ ವಾಟ್ಸ್‌ಆ್ಯಪ್‌ ಮೂಲಕ ಬಂದ ಸಂದೇಶವನ್ನು ನಂಬಿ 13,09,245 ರೂ. ಕಳೆದುಕೊಂಡಿರುವ ಕುರಿತಂತೆ ಉರ್ವ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರಿಗೆ ವಿಐಪಿ3 ಗ್ಲೋಬಲ್‌ ಸೆಕ್ಯುರಿಟೀಸ್‌ ಅಫೀಶಿಯಲ್‌ ಸ್ಟಾಕ್‌ ಕಮ್ಯೂನಿಟಿ ಎನ್ನುವ ಹೆಸರಿನಲ್ಲಿ ಡಿ. 14ರಂದು ವಾಟ್ಸ್‌ಆ್ಯಪ್‌ ಸಂದೇಶ ಬಂದಿದ್ದು, ಅವರು ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಸೇರ್ಪಡೆಯಾದರು. ಗುಂಪಿನಲ್ಲಿ ಬಂದ ಸಂದೇಶಗಳನ್ನು ನಂಬಿ ಐಪಿಒ ಸ್ಟಾಕ್‌ಗಳಿಗೆ ನೋಂದಾಯಿಸಿ ವಿವಿಧ ಐಪಿಒ ಮೊತ್ತದ ಸ್ಟಾಕ್‌ಗಳನ್ನು ಖರೀದಿಸಿ ಲಕ್ಷಾಂತರ ರೂ. ಮೊತ್ತವನ್ನು ಜಮೆ ಮಾಡಿದ್ದರು. ಅಂತಿಮವಾಗಿ ಇದು…

Read More

ದಿಲ್ಲಿ : ಆಪ್‌ ಹ್ಯಾಟ್ರಿಕ್‌ ಕನಸು ಭಗ್ನ..? ಸಮೀಕ್ಷೆಗಳೆಲ್ಲ ಬಿಜೆಪಿ ಪರ

ಹೊಸದಿಲ್ಲಿ : ದಿಲ್ಲಿಯಲ್ಲಿ ಕೊನೆಗೂ ಅರವಿಂದ ಕೇಂಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಾರ್ಟಿ (ಆಪ್‌) ನಾಗಾಲೋಟಕ್ಕೆ ಬ್ರೇಕ್‌ ಹಾಕುವಲ್ಲಿ ಬಿಜೆಪಿ ಯಶಸ್ವಿಯಾಗಲಿದೆಯೇ? ಚುನಾವಣೋತ್ತರ ಸಮೀಕ್ಷೆಗಳನ್ನು ನಂಬುವುದಾದರೆ ಮೂರು ದಶಕಗಳ ಬಳಿಕ ದಿಲ್ಲಿಯಲ್ಲಿ ಬಿಜೆಪಿ ಗೆದ್ದು ಅಧಿಕಾರ ಹಿಡಿಯಲಿದೆ. ಈ ಮೂಲಕ ಹ್ಯಾಟ್ರಿಕ್‌ ಗೆಲುವು ಸಾಧಿಸುವ ಆಪ್‌ ಕನಸು ಭಗ್ನಗೊಳ್ಳಲಿದೆ. ಆದರೆ ಕಳೆದ ಲೋಕಸಭಾ ಚುನಾವಣೆ ಮತ್ತು ನಂತರ ನಡೆದ ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಚುನಾವಣೋತ್ತರ ಸಮೀಕ್ಷೆಗಳೆಲ್ಲ ಬುಡಮೇಲಾಗಿರುವುದರಿಂದ ದಿಲ್ಲಿ ಸಮೀಕ್ಷೆಯನ್ನೂ ಪೂರ್ತಿಯಾಗಿ ನಂಬಿವಂತಿಲ್ಲ. ಯಾವ ಸಮೀಕ್ಷೆಯಲ್ಲೂ…

Read More

ಕಾಂಗ್ರೆಸ್‌ನ ನಲಪಾಡ್‌ಗೆ ಬಿಟ್‌ಕಾಯಿನ್ ಸಂಕಷ್ಟ: ಬಂಧನ ಭೀತಿ

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಕೇಸ್‌ನಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್​ಗೆ ಸಂಕಷ್ಟ ಎದುರಾಗಿದ್ದು, ಬಂಧನದ ಭೀತಿ ಎದುರಿಸುತ್ತಿದ್ದಾರೆ. ಬಹುಕೋಟಿ ಬಿಟ್‌ ಕಾಯಿನ್ ಹಗರಣ ಸಂಬಂಧ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ಎಸ್‌ಐಟಿ ನೋಟಿಸ್ ನೀಡಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇದರಿಂದಾಗಿ ನಲಪಾಡ್ ಅವರಿಗೆ ಬಂಧನ ಭೀತಿ ಶುರುವಾಗಿದೆ. ಅಂತರರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆಗೆ ನಲಪಾಡ್ ವ್ಯಾವಹಾರಿಕ ನಂಟು ಹೊಂದಿದ್ದಾರೆ ಎಂಬ ಆರೋಪ ಕೇಳಿ…

Read More

ಕಬ್ಬಿನ ಹಾಲಿನಲ್ಲಿದೆ ಆರೋಗ್ಯ ಗುಣ..!

ತಂಪು ಪಾನೀಯವನ್ನು ಸೇವಿಸುವ ಮುನ್ನ ಆರೋಗ್ಯಕ್ಕೆ ಯಾವುದು ಒಳ್ಳೆಯದು ಎನ್ನುವುದನ್ನು ತಿಳಿದುಕೊಳ್ಳಿ. ಸಕ್ಕರೆ ಮಿಶ್ರಿತ ಜ್ಯೂಸ್​ಗಳ ನಡುವೆ ಶುದ್ಧ ಹಾಗೂ ಆರೋಗ್ಯವನ್ನೂ ಹೆಚ್ಚಿಸುವ ಪಾನೀಯಗಳ ಸೇವನೆಯ ಬಗ್ಗೆ ಗಮನನೀಡಿ. ಅದರಲ್ಲಿ ಮೊದಲು ಸಿಗುವುದೇ ಕಬ್ಬಿನ ಹಾಲು. ಹಲವು ಆರೋಗ್ಯ ಗುಣಗಳನ್ನು ಹೊಂದಿರುವ ಕಬ್ಬಿನ ಹಾಲು ಕಡಿಮೆ ಕೊಬ್ಬಿನ ಅಂಶಗಳನ್ನು ಹೊಂದಿದೆ. ದೇಹಕ್ಕೆ ಅಗತ್ಯವಾದ ಕಬ್ಬಿಣಾಂಶ, ಮ್ಯಾಗ್ನಿಶಿಯಂ, ಕ್ಯಾಲ್ಸಿಯಂ ಹಾಗೂ ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿದೆ. ಯಾವೆಲ್ಲ ರೀತಿಯ ಆರೋಗ್ಯ ವೃದ್ಧಿಸುವ ಗುಣಗಳನ್ನು ಹೊಂದಿದೆ ಎನ್ನುವ ಮಾಹಿತಿ ಇಲ್ಲಿದೆ. ಶಕ್ತಿ…

Read More

ಸಿಐಎಸ್‌ಎಫ್ ನಲ್ಲಿ ಕಾನ್ಸ್ಟೇಬಲ್/ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಕಾನ್‌ಸ್ಟೆಬಲ್/ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 4, 2025. ವಿದ್ಯಾರ್ಹತೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ವಯೋಮಿತಿ ಅಭ್ಯರ್ಥಿಗಳ ವಯಸ್ಸು 21 ರಿಂದ 27 ವರ್ಷಗಳ ನಡುವೆ ಇರಬೇಕು. ಚಾಲನಾ ಪರವಾನಗಿ ಅಭ್ಯರ್ಥಿಗಳು ಭಾರೀ ಮೋಟಾರು ವಾಹನಗಳು, ಸಾರಿಗೆ ವಾಹನಗಳು, ಲಘು ಮೋಟಾರು ವಾಹನಗಳು ಮತ್ತು ಗೇರ್ ಹೊಂದಿರುವ ಮೋಟಾರ್‌ಸೈಕಲ್‌ಗಳಿಗೆ ಮಾನ್ಯವಾದ ಚಾಲನಾ ಪರವಾನಗಿಯನ್ನು ಹೊಂದಿರಬೇಕು….

Read More