ಸಿಐಎಸ್‌ಎಫ್ ನಲ್ಲಿ ಕಾನ್ಸ್ಟೇಬಲ್/ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಕಾನ್‌ಸ್ಟೆಬಲ್/ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 4, 2025. ವಿದ್ಯಾರ್ಹತೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ವಯೋಮಿತಿ ಅಭ್ಯರ್ಥಿಗಳ ವಯಸ್ಸು 21 ರಿಂದ 27 ವರ್ಷಗಳ ನಡುವೆ ಇರಬೇಕು. ಚಾಲನಾ ಪರವಾನಗಿ ಅಭ್ಯರ್ಥಿಗಳು ಭಾರೀ ಮೋಟಾರು ವಾಹನಗಳು, ಸಾರಿಗೆ ವಾಹನಗಳು, ಲಘು ಮೋಟಾರು ವಾಹನಗಳು ಮತ್ತು ಗೇರ್ ಹೊಂದಿರುವ ಮೋಟಾರ್‌ಸೈಕಲ್‌ಗಳಿಗೆ ಮಾನ್ಯವಾದ ಚಾಲನಾ ಪರವಾನಗಿಯನ್ನು ಹೊಂದಿರಬೇಕು….

