ಕಾರ್ಕಳ: ಗುಡ್ಡೆಯಲ್ಲಿ ಮತ್ತೆ ದನ ಕಳ್ಳತನ..!!

ಕಾರ್ಕಳ : ಮನೆಯ ಎದುರು ಮಲಗಿದ್ದ ಮೂರು ದನಗಳನ್ನು ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಕದ್ದೋಯ್ದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಪಡ್ಡಾಯಿ ಗುಡ್ಡೆಯಲ್ಲಿ ಮುಂಜಾನೆ 3.30ರ ಸಮಯದಲ್ಲಿ ನಡೆದಿದೆ. ಈ ಕುರಿತು ಮನೆಯವರು ನೀಡಿದ ಮಾಹಿತಿಯಂತೆ ಹಾಗೂ ಸಿಸಿ ಟಿವಿ ದೃಶ್ಯಗಳ ನ್ನು ಪೊಲೀಸ್ ಇಲಾಖೆಗೆ ನೀಡಿ ಸದ್ರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಕಾರ್ಕಳ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮನವಿ ಮಾಡುತ್ತದೆ. ಕಾರ್ಕಳ ಭಾಗದಲ್ಲಿ ದನ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಪ್ರಕರಣವನ್ನು ವಿಶ್ವ ಹಿಂದೂ…

Read More

ಗೋವಾದ ನೈಟ್ ಕ್ಲಬ್ ನಲ್ಲಿ ಅಗ್ನಿ ದುರಂತ: 23 ಮಂದಿ ಸಜೀವ ದಹನ

ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ‌ ನೈಟ್‌ ಕ್ಲಬ್‌ನಲ್ಲಿ ತಡರಾತ್ರಿ ಅಗ್ನಿ ದುರಂತ  ಸಂಭವಿಸಿ, 23 ಪ್ರವಾಸಿಗರು ದಾರುಣ ಮೃತಪಟ್ಟಿದ್ದಾರೆ.  ಫೇಮಸ್‌ ನೈಟ್‌ಕ್ಲಬ್‌ ಬಿರ್ಚ್‌ನಲ್ಲಿ  ಘಟನೆ ನಡೆದಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತಡರಾತ್ರಿ 1 ಗಂಟೆ ಸುಮಾರಿಗೆ ಕ್ಲಬ್‌ ಮುಚ್ಚಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಅಷ್ಟರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಡುಗೆ ಮನೆಯ ಬಳಿ ಗ್ಯಾಸ್‌ ಸಿಲಿಂಡರ್‌ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆಯಿದೆ. ಸ್ಫೋಟದ ತೀವ್ರತೆಗೆ…

Read More

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಪ್ರಕರಣ- ಐವರಿಗೆ 14 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: 2022ರಲ್ಲಿ ಪತ್ತೆಯಾದ ಗಂಭೀರ ಮಾದಕ ವಸ್ತು ವಹಿವಾಟು ಪ್ರಕರಣದಲ್ಲಿ ಐವರು ಆರೋಪಿಗಳನ್ನು ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಪ್ಪಿತಸ್ಥರಾಗಿ ಘೋಷಿಸಿ, ದೀರ್ಘಾವಧಿಯ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಭಾರೀ ದಂಡ ವಿಧಿಸಿದೆ. ಪ್ರಕರಣವು CEN ಪೊಲೀಸ್ ಠಾಣೆ Cr. No. 54/2022ನಲ್ಲಿ ದಾಖಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆ ಸೆಕ್ಷನ್ 21, 21(C), 27(b) ಅಡಿಯಲ್ಲಿ ವಿಚಾರಣೆ ನಡೆಯಿತು. ತನಿಖೆ ತಿಳಿಸಿದೆ, ಆರೋಪಿಗಳು ಕಾಲೇಜು ವಿದ್ಯಾರ್ಥಿಗಳಿಗೆ MDMA ಮಾರಾಟ ಮಾಡಲು ಸಂಚು ರೂಪಿಸಿದ್ದರು. ಘಟನೆ ಹಿನ್ನಲೆ: 2022ರ…

Read More

ಕರ್ನಾಟಕದಲ್ಲಿ SDPI ಹೆಸರಿನಲ್ಲಿ PFI ರಾಜಕೀಯ ಪ್ರವೇಶಕ್ಕೆ ಯತ್ನ: ಲೋಕಸಭೆಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು : ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ (ಇ.ಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ.ಚೌಟ, ಎಸ್‌ಡಿಪಿಐಯು ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ. ಅಷ್ಟೇಅಲ್ಲ, ಈ…

Read More

ಮನೆಯಲ್ಲಿ ನೇಣುಬಿಗಿದುಕೊಂಡು ತಾಯಿ-ಮಗ ಆತ್ಮಹತ್ಯೆ!!

ಶಿವಮೊಗ್ಗ: ಜಿಲ್ಲೆಯಲ್ಲಿ ತಾಯಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಮಗನೂ ಆತ್ಮಹತ್ಯೆಗೆ ಶರಣಾಗಿರುವಂತ ಧಾರುಣ ಘಟನೆಯೊಂದು ನಡೆದಿದೆ. ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ತಾಯಿ-ಮಗ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಜಯಶ್ರೀ(57) ಹಾಗೂ ಪುತ್ರ ಆಕಾಶ್(32) ಆತ್ಮಹತ್ಯೆಗೆ ಶರಣಾದಂತವರಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ಮೊದಲಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಆತ್ಮಹತ್ಯೆಗೆ ಶರಣಾಗಿದ್ದು ನೋಡಿ ಮಗನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂರು ವರ್ಷದ ಹಿಂದೆ ಮೊದಲ ಪತ್ನಿ ನವ್ಯಾ ಆತ್ಮಹತ್ಯೆಗೆ ಶರಣಾಗಿದ್ದರು. 6 ತಿಂಗಳ ಹಿಂದೆಯಷ್ಟೇ 2ನೇ…

Read More

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು…!

ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಪೂಜಾ ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗ

Read More

ದಶಮಾನೋತ್ಸವ ಸಂಭ್ರಮದಲ್ಲಿ ಅಖಿಲ ಕರ್ನಾಟಕ ಕುಂಭ ವೈದ್ಯರ ಒಕ್ಕೂಟ (ರಿ.): ಕಾರ್ಯಕಾರಿ ಸಮಿತಿಗೆ ಅಧ್ಯಕ್ಷರಾಗಿ ಡಾ. ಎಂ. ಅಣ್ಣಯ್ಯ ಕುಲಾಲ್ ಆಯ್ಕೆ

ಬೆಂಗಳೂರು: 2015ರಲ್ಲಿ ಅಖಿಲ ಕರ್ನಾಟಕ ವ್ಯಾಪ್ತಿಯ ಕುಂಬಾರ, ಕುಲಾಲ, ಗುನಗ ಹಾಂಡ, ಚಕ್ರಸಾಲಿ, ಕುಂಬಾರಸೆಟ್ಟಿ, ಪ್ರಜಾಪತಿ ಸಮುದಾಯದ ಎಂ.ಬಿ.ಬಿ.ಎಸ್., ಡೆಂಟಲ್, ಆಯುರ್ವೇದ, ಹೋಮಿಯೋಪತಿ, ಸಹಿತ ಎಲ್ಲಾ ಹಿರಿ-ಕಿರಿಯ ವೈದ್ಯರನ್ನು ಹಿರಿಯ ವೈದ್ಯರಾದ ತುಮಕೂರಿನ ಡಾ. ಅಂಪಣ್ಣ, ಕುಂದಾಪುರದ ಡಾ. ಎಂ.ವಿ. ಕುಲಾಲ್, ಬೆಂಗಳೂರಿನ ಡಾ. ಭಕ್ತ ವತ್ಸಲಂ, ಮೈಸೂರಿನ ಡಾ. ಬಿ.ಜಿ.ಸಾಗರ್ ಅವರ ಮಾರ್ಗದರ್ಶನದಲ್ಲಿ ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ಳೂರು, ಡಾ. ರಾಮಚಂದ್ರ ಬೆಂಗಳೂರು, ಡಾ. ಶ್ರೀನಿವಾಸನ್ ವೇಲು, ಬೆಂಗಳೂರು, ಡಾ. ಮಹೇಶ್ ಚಾಮರಾಜನಗರ, ಡಾ….

Read More

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ:  ಶ್ರೀಮತಿ ಸಾವಿತ್ರಿ ಮಹಾಬಲಹಾಂಡ ಅವರು “ಮಾತೃ ಸಿಂಧೂರ” ಪ್ರಶಸ್ತಿಗೆ ಆಯ್ಕೆ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ. ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು…

Read More

ಮುಜರಾಯಿ ದೇವಾಲಯಗಳಲ್ಲಿ ಈ ನಾಮಫಲಕ, `CCTV’ ಅಳವಡಿಕೆ ಕಡ್ಡಾಯ

ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ಧಾರ್ಮಿಕ ದತ್ತಿ ಇಲಾಖೆ ಮುಜರಾಯಿ ದೇವಾಲಯ ಕರ್ನಾಟಕ ಸರ್ಕಾರ ಎಂದು ನಾಮಫಲಕ ಅಳವಡಿಸಲು ಕ್ರಮ ವಹಿಸಬೇಕೆಂದು ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಹಶೀಲ್ದಾರ್‌ಗಳಿಗೆ ಸೂಚಿಸಿದರು.  ದಿನಾಂಕ:02.12.2025 ರಂದು ಜಿಲ್ಲಾ ವ್ಯಾಪ್ತಿಯ ಮುಜರಾಯಿ “ಸಿ” ವರ್ಗದ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆ, ಜೀರ್ಣೋದ್ದಾರ ಹಾಗೂ ಅರ್ಚಕರ ನೇಮಕಾತಿ ಹಾಗೂ ಇತರೆ ವಿಚಾರಗಳ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು….

Read More

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮನೆಯ ಬಿದ್ದ ಬೃಹತ್ ಗಾತ್ರದ ಕ್ರೇನ್!!

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಬೃಹತ್ ಗಾತ್ರದ ಕ್ರೇನ್ ವೊಂದು ಮನೆಯೊಂದರ ಮೇಲೆ ಬಿದ್ದ ಘಟನೆ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಶುಕ್ರವಾರ ನಡೆದಿದೆ. ಮುಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಕಲ್ಲಮುಂಡ್ಕೂರಿನ ಮೊರಂತಬೆಟ್ಡುವಿನ ತಿರುವಿನಲ್ಲಿ ಅತೀ ವೇಗದಲ್ಲಿ ಸಂಚರಿಸುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಫೆಲಿಕ್ಸ್ ರೊಡ್ರಿಗಸ್ ಎಂಬವರ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿ ಸಂಭವಿಸಿದೆ. ಘಟನೆ ವೇಳೆ ಮನೆಮಂದಿ ಮನೆಯ ಇನ್ನೊಂದು ಪಾರ್ಶ್ವದಲ್ಲಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಸಂದರ್ಭ…

Read More