ರಿಕ್ಷಾ ಪಲ್ಟಿಯಾಗಿ ಗಂಭೀರ ಗಾಯಗೊಂಡ ಕಟೀಲು ಯಕ್ಷಗಾನ ಮೇಳದ ಕಲಾವಿದ ಸಾವು
ಕಿನ್ನಿಗೋಳಿಯಲ್ಲಿ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದಾಗ ಪಲ್ಟಿಯಾಗಿ ಚಾಲನೆ ಮಾಡುತ್ತಿದ್ದ ಕಟೀಲು ಯಕ್ಷಗಾನ ಮೇಳದಲ್ಲಿ ಕಲಾವಿದರಾಗಿದ್ದ ಆನಂದ ಕಟೀಲು (47) ತೀವ್ರ ಗಾಯಗೊಂಡಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಜಿ.25 ರಂದು ಶನಿವಾರ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕುತ್ತಿಗೆ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣ ಶಸ್ತ್ರ ಚಿಕಿತ್ಸೆ ನಡೆಸಲು 8 ಲಕ್ಷ ರೂ.ಖರ್ಚಾಗಬಹುದು ಎಂದು ವೈದ್ಯರು ತಿಳಿಸಿದ್ದರಿಂದ ಅವರನ್ನು ಅಲ್ಲಿಂದ ವೆನ್ಹಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎದ್ದು ಕುಳಿತುಕೊಳ್ಳುವುದಕ್ಕೆ ಆಗದೇ ಬಳಲುತ್ತಿದ್ದರು.25 ದಿನಗಳ ಬಳಿಕ ವೆನ್ಹಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಶಸ್ತ್ರ ಚಿಕಿತ್ಸೆ ನಡೆಸಲು…

