ಬ್ರೇಕಪ್ ಗೆ ಒಪ್ಪದ ಪ್ರಿಯಕರನನ್ನು ಕೊಲೆಗೈದ ಪ್ರಕರಣ: 24 ವರ್ಷದ ಗ್ರೀಷ್ಮಾಗೆ ಗಲ್ಲು ಶಿಕ್ಷೆಗೆ..!
ತಿರುವನಂತಪುರಂ: ತನ್ನ ಪ್ರಿಯಕರನಿಗೆ ಜ್ಯೂಸ್ ನಲ್ಲಿ ವಿಷ ಬೆರೆಸಿ ಆತನನ್ನು ಅತೀ ಕ್ರೂರವಾಗಿ ಕೊಲೆ ಮಾಡಿದ ಕೊಲೆಗಾತಿ ಗ್ರೀಷ್ಮಾಗೆ ನೆಯ್ಯಟ್ಟಿಂಕರಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. 2022 ರಲ್ಲಿ ತನ್ನ ಬಾಯ್ ಫ್ರೆಂಡ್ ಶರೋನ್ ರಾಜ್‌ಗೆ ಮಾರಕ ಕಳೆನಾಶಕ ಬೆರೆಸಿದ ಆಯುರ್ವೇದ ಮಿಶ್ರಣವನ್ನು ಕುಡಿಸಿ ಕೊಲೆ ಮಾಡಿದ್ದಳು. ನ್ಯಾಯಮೂರ್ತಿ ಎ ಎಂ ಬಶೀರ್ ಅವರು ವಾದ ವಿವಾದ ಆಲಿಸಿದ ನಂತರ ತೀರ್ಪು ನೀಡಿ, ಇದು ಅಪರೂಪದ ಪ್ರಕರಣ, ಸರಿಯಾಗಿ ಪೂರ್ವನಿಯೋಜಿತವಾಗಿ ನಡೆಸಿದ ಅಪರಾಧ ಕೃತ್ಯವಾಗಿದೆ…

