ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಪರೋಪಕಾರಿ, ಕಾರ್ಪೊರೇಟರ್ ಗಣೇಶ್ ಕುಲಾಲ್ ಆಯ್ಕೆ

ಮಂಗಳೂರು : ಮಂಗಳೂರು ಮಹಾ ನಗರ ಪಾಲಿಕೆಯ ಕಾರ್ಪೊರೇಟರ್ ಆಗಿ ಕಾರ್ಯನಿರ್ವಹಿಸುವುದರ ಜತೆಗೆ ಅನಾಥ ಶವಗಳ ಅಂತ್ಯ ಸಂಸ್ಕಾರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗಣೇಶ ಕುಲಾಲ್ ಅವರು 2024-25ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿವೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ನೇತೃತ್ವದ ಆಯ್ಕೆ ಸಮಿತಿಯು ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಜ. 26ರಂದು ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಗಣೇಶ…

Read More

ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ: ಸಂಸದ ಕ್ಯಾ. ಚೌಟ

ಮಂಗಳೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನೇ ಕೊಯ್ದು ಪೈಶಾಚಿಕ ಕೃತ್ಯ ಎಸಗಿದ ಹೇಯ ಕೃತ್ಯವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದು, ಹಸುವಿನ ಕೆಚ್ಚಲು ಕತ್ತರಿಸಿರುವುದು ಹೆತ್ತ ತಾಯಿಯ ಕತ್ತು ಕೊಯ್ಯುವುದು ಒಂದೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೃತ್ಯ ಎಸಗಿದ ಆರೋಪಿಗೆ ಮಾನಸಿಕವಾಗಿ ಅಸ್ವಸ್ಥ ಪಟ್ಟ ಕಟ್ಟಿ ಪ್ರಕರಣವನ್ನು ಸಿದ್ದರಾಮಯ್ಯ ನೇತೃತ್ವ ಕಾಂಗ್ರೆಸ್ ಸರ್ಕಾರ ಮುಚ್ಚಿ ಹಾಕಲು ಹೊರಟಿರುವ ಮೂಲಕ ಜಿಹಾದಿ ಮಾನಸಿಕತೆಯನ್ನು ಪೋಷಿಸಿ ಬೆಳೆಸುತ್ತಿರುವುದು ಮತ್ತಷ್ಟು ಖೇದಕರ ಸಂಗತಿ…

Read More

ಮೂಡುಬಿದಿರೆ: 25 ಕ್ಕೂ ಹೆಚ್ಚು ಅಂಗಡಿಯಲ್ಲಿ ಕಳ್ಳತನ ಗೈದಿರುವ ಖದೀಮರ ಬಂಧನ

ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಗೆ ಗ್ರಾಮದ ಮುಲ್ಕಿ ಅಂಗಡಿಯಲ್ಲಿ ನಗದು ಹಾಗೂ ಸೊತ್ತುಗಳನ್ನು ಕದ್ದೊಯ್ದು ತಿಂದು ತೇಗಿದ್ದ ಕಳ್ಳರನ್ನು ಬಂಧಿಸುವಲ್ಲಿ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರ ತಂಡವು ಯಶಸ್ವಿಯಾಗಿದೆ. ನೀರುಡೆಯ ರೋಹಿತ್ ಮಸ್ಕರೇನಸ್, ಕೊಂಪದವು ನೆಲ್ಲಿತೀರ್ಥದ ನಿಶಾಂಕ್ ಪೂಜಾರಿ ಹಾಗೂ ನೀರುಡೆಯ ರೋಶನ್ ವಿಲ್ಸನ್ ಕ್ವಾಡ್ರಸ್ ಬಂಧಿತ ಆರೋಪಿಗಳು.ಕಳೆದ 9 ನೇ ತಾರೀಕಿನಂದು ರಾತ್ರಿ ಪುತ್ತಿಗೆಯ ಜಯಶ್ರೀ ಸ್ಟೋರ್ ನಿಂದ ರೂ.20 ಸಾವಿರ ನಗದು ಹಾಗೂ ಸುಮಾರು 48 ಸಾವಿರ ರೂ.ಮೌಲ್ಯದ ಸಿಗರೇಟು, ತಿಂಡಿ….

Read More

ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ..!ದೂರು ದಾಖಲು

ಸುಳ್ಯ : ಆಲೆಟ್ಟಿ ಗ್ರಾಮದ ಮಹಿಳೆಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ನಾಪತ್ತೆಯಾಗಿದ್ದಾರೆ. ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (27 ವರ್ಷ) ಯವರು ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಿಂದ ಕಾಣೆಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಪತಿ ರಾಜೇಂದ್ರ (40) ಟೈಲ್ಸ್ ಕೆಲಸ ಮಾಡುವವರಾಗಿದ್ದು ಪರಿವಾರಕಾನದಲ್ಲಿ ಕುಟುಂಬ ಸಮೇತ ವಾಸವಾಗಿದ್ದರು. ಮಕ್ಕಳು ವೈಷ್ಣವಿ (8 ವರ್ಷ) ಸೆಂಟ್‌ ಜೋಸೆಪ್‌ ಶಾಲೆ 2ನೇ ತರಗತಿ ವಿದ್ಯಾರ್ಥಿನಿ. ಇನ್ನೊಬ್ಬಾಕೆ 2 ವರ್ಷ ಪ್ರಾಯದ ಅನುಷ್ಕಾ ಅಂಗನವಾಡಿಗೆ ಹೋಗುತ್ತಿದ್ದರು.ಕಳೆದ…

Read More

ಪ್ರೀತಿಸುವಂತೆ ಅನ್ಯಕೋಮಿನ ಯುವಕನಿಂದ ಕಿರುಕುಳ- ಅಪ್ರಾಪ್ತೆ ಆತ್ಮಹತ್ಯೆ, ಆರೋಪಿ ಬಂಧನ..!

ಕಲಬುರಗಿ: ಮುಸ್ಲಿಂ ಯುವಕನ ಕಿರುಕುಳ ತಾಳಲಾರದೇ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜೇವರ್ಗಿ ತಾಲೂಕಿನಲ್ಲಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 14 ವರ್ಷದ ಬಾಲಕಿಗೆ ಕಳೆದ ಹಲವು ದಿನಗಳಿಂದ ಆಟೋ ಚಾಲಕ ಮೆಹಬೂಬ್ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ, ಆತನ ಕಿರುಕುಳ ತಾಳಲಾರದೇ ನೇಣುಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ಬಾಲಕಿ ಸಾವಿಗೆ ನ್ಯಾಯ ಸಿಗಬೇಕು ಎಂದು ಘಟನೆಯನ್ನು ಖಂಡಿಸಿ ಜೇವರ್ಗಿ ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ…

Read More

ಮಂಗಳೂರು: ಲೈಟರ್‌ ನೀಡಿಲ್ಲ ಎಂಬ ವಿಷಯಕ್ಕೆ ಗಲಾಟೆ- ಬಿಯರ್‌ ಬಾಟಲಿಯಿಂದ ಹಲ್ಲೆ

ಬಿಯರ್‌ ಬಾಟಲಿಯಿಂದ ಇತ್ತಂಡಗಳ ನಡುವೆ ಹಲ್ಲೆ ನಡೆದಿರುವ ಘಟನೆಯೊಂದು ಪಣಂಬೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಲೈಟರ್‌ ವಿಚಾರಕ್ಕೆ ವಾಗ್ವಾದ ನಡೆದು, ಗಲಾಟೆ ಪ್ರಾರಂಭವಾಗಿ ಹೊಡೆದಾಟ, ಹಲ್ಲೆ ನಡೆದಿದೆ. ಭಾನುವಾರ (ಜ.12) 11.45 ರ ತಡರಾತ್ರಿ ಈ ಘಟನೆ ನಡೆದಿದೆ. ಪಣಂಬೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಗಣೇಶ ಕಟ್ಟೆ, ತಣ್ಣೀರುಬಾವಿ ಎಂಬಲ್ಲಿ ವೆಂಕಟೇಶ, ಕಾರ್ತಿಕ್‌, ಸಂತೋಷ್‌, ಸೈಫ್‌, ಧನುಷ್‌ ಇವರುಗಳು ಮದ್ಯಪಾನ ಮಾಡಿ ಸಿಗರೇಟು ಸೇದುತ್ತಿದ್ದಾಗ ಅವರಿದ್ದ ಸ್ಥಳಕ್ಕೆ ಬಂದ ಪ್ರೀತಂ ಮತ್ತು ಸನ್ವೀತ್‌ ಹಾಗೂ ಇತರರು…

Read More

ಜ.19ರಂದು ಮಂಗಳೂರಿನಲ್ಲಿ “ವಿಶಿಷ್ಟರಿಗಾಗಿ ವಿಶಿಷ್ಟ ಮೇಳ”

ಮಂಗಳೂರು: ಸೇವಾ ಭಾರತಿ(ರಿ) ಮಂಗಳೂರು ಕಳೆದ 33 ವರ್ಷಗಳಿಂದ ದಿವ್ಯಾಂಗರ ಜೀವನ ಸ್ತರ ಸುಧಾರಿಸಲುಶ್ರಮಿಸುತ್ತಿದೆ. ತನ್ನ ಅಂಗಸಂಸ್ಥೆಗಳ ಮೂಲಕ ಅವರಿಗೆ ಅವಶ್ಯವಿರುವ ಶಿಕ್ಷಣ, ತರಬೇತಿ, ಚಿಕಿತ್ಸೆ ಇತ್ಯಾದಿ ಈ ಪೈಕಿ 1998ರಲ್ಲಿ ಸೌಕರ್ಯಗಳನ್ನು ಒದಗಿಸಿಕೊಟ್ಟು ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಆರಂಭವಾದ “ಆಶಾಜ್ಯೋತಿ”ಯೂ ಒಂದು. ಆಶಾಜ್ಯೋತಿಯು ದಿವ್ಯಾಂಗರು ಮತ್ತು ಅವರ ಹೆತ್ತವರ ಒಂದು ವೇದಿಕೆ. ಅದು ಈ ಕೆಳಗಿನ ಚಟುವಟಿಕೆಗಳನ್ನು ನಡೆಸುವ ಉದ್ದೇಶ ಹೊಂದಿದೆ. ಇದರ ಮುಂದುವರಿದ ಭಾಗವಾಗಿ ಜ.19ರಂದು ಕೆನರಾ ಹೈಸ್ಕೂಲ್ ಮೈದಾನದಲ್ಲಿ ವಿಶಿಷ್ಟರಿಗಾಗಿ ವಿಶಿಷ್ಟ…

Read More

ಉಡುಪಿ: ಸಾಸ್ತಾನ ಟೋಲ್ ಗೇಟ್ ಗೆ ಟಿಪ್ಪರ್ ಡಿಕ್ಕಿ; ಟೋಲ್ ಗೇಟ್ ಜಖಂ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ಸಾಸ್ತಾನ ಟೋಲ್ ಗೇಟ್ ಗೆ ಡಿಕ್ಕಿ ಹೊಡೆದು ಟೋಲ್ ಬೂತ್ ಗೆ ಹಾನಿಯಾದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಬ್ರಹ್ಮಾವರ ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸಾಸ್ತಾನ ಟೋಲ್ ಗೇಟ್ ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟೋಲ್ ಗೇಟ್ ಜಖಂಗೊಂಡಿದೆ. ಚಾಲಕ ಕುಡಿದ ಅಮಲಿನಲ್ಲಿ ಟಿಪ್ಪರ್ ಚಲಾಯಿಸುತ್ತಿದ್ದ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಮಂಗಳೂರು: ನರಿಂಗಾನ “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಮಂಗಳೂರು: ನರಿಂಗಾನ “ಲವ – ಕುಶ” ಜೋಡುಕರೆ ಕಂಬಳ ಸಮಾರೋಪ ಗೊಂಡಿದ್ದು ಕಂಬಳ ಕೂಟದ ಫಲಿತಾಂಶ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 10 ಜೊತೆ ಅಡ್ಡಹಲಗೆ: 10 ಜೊತೆ ಹಗ್ಗ ಹಿರಿಯ: 28 ಜೊತೆ ನೇಗಿಲು ಹಿರಿಯ: 28 ಜೊತೆ ಹಗ್ಗ ಕಿರಿಯ: 25 ಜೊತೆ ನೇಗಿಲು ಕಿರಿಯ: 60 ಜೊತೆ ಸಬ್ ಜೂನಿಯರ್ ನೇಗಿಲು: 104 ಜೊತೆ ಒಟ್ಟು ಕೋಣಗಳ ಸಂಖ್ಯೆ: 265 ಜೊತೆ •••••••••••••••••••••••••••••••••••••••••••••• ಕನೆ ಹಲಗೆ: ( 6.5 ಕೋಲು…

Read More

ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ ಮಗು ಸಾವು

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕುಂಬಳೆಯಲ್ಲಿ ನಡೆದಿದೆ. ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತ ಮಗು. ಅನಾಸ್ ಮನೆಯಲ್ಲಿ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದೆ. ಬಳಿಕ ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದು, ಬಳಿಕ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು. ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ…

Read More