ಜ್ಞಾನಪೀಠ ಪ್ರಶಸ್ತಿ ವಿಜೇತ ಖ್ಯಾತ ಸಾಹಿತಿ ಎಂ.ಟಿ.ವಾಸುದೇವನ್ ನಾಯರ್ ನಿಧನ

ಹೃದಯ ವೈಫಲ್ಯದಿಂದ ಕೊಝಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಲಯಾಳಂನ ಶ್ರೇಷ್ಠ ಸಾಹಿತಿ ಮತ್ತು ಜ್ಞಾನಪೀಠ ಪ್ರಶಸ್ತಿ ವಿಜೇತ ಎಂ.ಟಿ.ವಾಸುದೇವನ್ ನಾಯರ್ ಅವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಅವರು ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ತೊಂದರೆಯಿಂದಾಗಿ ಲೇಖಕರನ್ನು ಡಿಸೆಂಬರ್ 16 ರ ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಬುಧವಾರ ರಾತ್ರಿ ೧೦ ಗಂಟೆಗೆ ಕೋಝಿಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಗಂಭೀರ ಸ್ಥಿತಿಯಲ್ಲಿದ್ದಾಗ ಅವರ ದೇಹವು ಔಷಧಿಗಳಿಗೆ ಸ್ಪಂದಿಸುತ್ತಿದೆ ಎಂದು ವೈದ್ಯರು ಮಾಹಿತಿ…

Read More

ಹಾಲು, ಮೊಸರಿನಂತೆ ಮಾರುಕಟ್ಟೆಗೆ ನಂದಿನಿ ಇಡ್ಲಿ, ದೋಸೆ ಹಿಟ್ಟು ಲಗ್ಗೆ

ಬೆಂಗಳೂರು: ನಾಗರಿಕರ ಬಹುದಿನಗಳ ಅಪೇಕ್ಷೆಯಂತೆ ಕೊನೆಗೂ ನಂದಿನಿ ಉತ್ಪನ್ನಗಳಿಗೆ ದೋಸೆ ಹಾಗೂ ಇಡ್ಲಿ ಹಿಟ್ಟು ಹೊಸ ಸೇರ್ಪಡೆಯಾಗಿದ್ದು, ರೆಡಿಮೇಡ್ ದೋಸೆ ಹಾಗೂ ಇಡ್ಲಿ ಹಿಟ್ಟು ಇಂದಿನಿಂದ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಕರ್ನಾಟಕ ಹಾಲು ಒಕ್ಕೂಟವು ನಂದಿನಿ ಬ್ರ್ಯಾಂಡ್‌ ಅಡಿಯಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬಿಡುಗಡೆ ಮಾಡಿದ್ದು, ಹಾಲು, ಮೊಸರಿನಂತೆ ಇನ್ಮುಂದೆ ಗಾಹಕರಿಗೆ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟು ದೊರೆಯಲಿದೆ. ನಂದಿನಿ…

Read More

ಕಾರು ರಿವರ್ಸ್ ತೆಗೆಯುವಾಗ ಚಕ್ರಕ್ಕೆ ಸಿಲುಕಿ 2 ವರ್ಷದ ಮಗು ಸಾವು.!

ಬೆಳಗಾವಿ : ಕಾರು ರಿವರ್ಸ್ ತೆಗೆದುಕೊಳ್ಳುವಾಗ ಕಾರಿನ ಚಕ್ರಕ್ಕೆ ಸಿಲುಕಿ 2 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿಇ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಜಗೌಡನಟ್ಟಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಕಾರು ರಿವರ್ಸ್ ತೆಗೆದುಕೊಳ್ಳುವಾಗ ಕಾರಿನ ಗಾಲಿಗೆ ಸಿಲುಕಿ 2 ವರ್ಷದ ಮಗು ಸಾವನ್ನಪ್ಪಿದೆ. ಖಜಗೌಡನಟ್ಟಿ ಗ್ರಾಮದ ಮಂಜುನಾಥ್ ಖೋತ ಎಂಬುವರು ಕಾರು ರಿವರ್ಸ್ ತೆಗೆದುಕೊಳ್ಳುವಾಗ ಮಗು ಆಕಸ್ಮಿಕವಾಗಿ ಕಾರಿನ ಹಿಂದಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದೆ. ಅನುಶ್ರೀ ರಾಮಕೃಷ್ಣ ಖೋತ(2) ಮೃತಪಟ್ಟ ಮಗು. ಘಟನೆ ಸಂಬಂಧ…

Read More

ಮಂಗಳೂರು: ನ್ಯೂ ಇಯರ್ ಪಾರ್ಟಿ- ಮೋಜು, ಮಸ್ತಿ, ಪಾರ್ಟಿ ನಿಲ್ಲಿಸುವ ಎಚ್ಚರಿಕೆ ನೀಡಿದ ಬಜರಂಗದಳ

ಮಂಗಳೂರು: 2024ಕ್ಕೆ ಗುಡ್‌ಬೈ ಹೇಳಿ 2025 ಅನ್ನು ಸ್ವಾಗತಿಸಲು ಕೆಲವೇ ದಿನಗಳಷ್ಟೇ ಬಾಕಿ ಉಳಿದಿದೆ. ಆದ್ದರಿಂದ ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದೆ. ಹೋಟೆಲ್, ಪಬ್, ರೆಸಾರ್ಟ್‌ಗಳಲ್ಲಿ ಪಾರ್ಟಿಗಳ ಆಯೋಜನೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ ಮಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಹಿಂದೂ ಸಂಘಟನೆ ವಿರೋಧ ವ್ಯಕ್ತಪಡಿಸಿದೆ. ಪಾರ್ಟಿ ನಡೆಸಿದರೆ ದಾಳಿ ಮಾಡುವ ಎಚ್ಚರಿಕೆ ನೀಡಿದೆ. ಹೌದು.. ನ್ಯೂ ಇಯರ್ ಪಾರ್ಟಿ ನಡೆಸದಂತೆ ಬಜರಂಗದಳ ಎಚ್ಚರಿಕೆ ನೀಡಿದೆ. ಈಗಾಗಲೇ ಪಾರ್ಟಿಗೆ ಅನುಮತಿ ನೀಡದಂತೆ ಪೊಲೀಸರಿಗೆ ಮನವಿ ಮಾಡಿದೆ. ನಮ್ಮ ಮನವಿಯನ್ನು…

Read More

ಉಡುಪಿ: ಸೇನಾ ವಾಹನ ಅಪಘಾತದಲ್ಲಿ ಯೋಧ ಅನೂಪ್ ಮೃತ್ಯು..!!

ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು ಈ ಟ್ರಕ್​ನಲ್ಲಿ ಚಲಿಸುತ್ತಿದ್ದ ದೇಶ ಕಾಯುವ ಯೋಧರು ಪ್ರಯಾಣಿಸುತ್ತಿದ್ದು, ಇದರಲ್ಲಿ ಕರ್ನಾಟಕದ ಮೂವರು ಯೋಧ ಸೇರಿ ಐವರು ಮೃತ ಪಟ್ಟಿದ್ದಾರೆ. ಈ ಪೈಕಿ ಓರ್ವ ಯೋಧ ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಹುತಾತ್ಮ ಯೋಧ. ಬೀಜಾಡಿ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ ಸೇನೆಗೆ ಸೇರಿ 13…

Read More

ಸ್ಕೂಟಿಗೆ ಲಾರಿ ಡಿಕ್ಕಿ – ದಂಪತಿ ದಾರುಣ ಸಾವು!!

ಮಡಿಕೇರಿ: ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿರುವ ದುರ್ಘಟನೆ ಕೊಯನಾಡು ಸಮೀಪದ ಚಡಾವು ಎಂಬಲ್ಲಿ ನಡೆದಿದೆ. ನೆಲ್ಲಿಹುದಿಕೇರಿ ಗ್ರಾಮದಲ್ಲಿ ಚಿನ್ನಾಭರಣಗಳ ಕೆಲಸ ಮಾಡುತ್ತಿದ್ದ ಚಿದಾನಂದ ಆಚಾರ್ಯ ಮತ್ತು ನಳಿನಿ ದಂಪತಿ ಸಾವನ್ನಪ್ಪಿರುವ ದುರ್ದೈವಿಗಳು. ಚಿದಾನಂದ ಆಚಾರ್ಯ (47) ಎಂಬವರು ತನ್ನ ಸ್ಕೂಟಿ ಸಂಖ್ಯೆ (ಕೆಎ 12-ಡಬ್ಲು 7708)ಯಲ್ಲಿ ತನ್ನ ಪತ್ನಿ ನಳಿನಿ (40) ಅವರೊಂದಿಗೆ ಮಂಗಳೂರಿನಲ್ಲಿ ನಡೆಯ ಬೇಕಾಗಿದ್ದ ಉಪನಯನ ಕಾರ್ಯಕ್ಕೆಂದು ತೆರಳುತ್ತಿರುವ ಸಂದರ್ಭ ಕಂಟೈನರ್ ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಲಾರಿಯು ಡಿಕ್ಕಿ…

Read More

ಮಂಗಳೂರು: ಸಹಕಾರಿ ಸಂಘದಲ್ಲಿ 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ವಂಚನೆ..!

ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಅಬೂಬಕ್ಕರ್ ಸಿದ್ದಿಕ್ 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಅಬೂಬಕ್ಕರ್​ ಸಿದ್ದಿಕ್​, ಬ್ಯಾಂಕ್ ಆಡಳಿತ ಮಂಡಳಿ ಮತ್ತು ನೌಕರರ ವಿರುದ್ಧ ಮಂಗಳೂರಿನ ಸೆನ್…

Read More

ಡಿಸೆಂಬರ್ 28 – 29 : ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ – ಒಂದು ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ – ಅರುಣ್ ಪುತ್ತಿಲ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಾರಥ್ಯದಲ್ಲಿ ಡಿ.28 ಹಾಗೂ 29 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ ಎಂದು ಸಮಿತಿ ಸಂಚಾಲಕ ಅರುಣ್ ಕುಮಾರ್‍ ಪುತ್ತಿಲ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀನಿವಾಸ ಕಲ್ಯಾಣೋತ್ಸವ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಈಗಾಗಲೇ 53 ಚದರ ಅಡಿಯ ಪೆಂಡಾಲ್‍ ಹಾಗೂ ಅನ್ನ ಸಂತರ್ಪಣೆಗಾಗಿ 20 ಸಾವಿರ ಚದರ ಅಡಿಯ ಬೃಹತ್…

Read More

ಬಂಟ್ವಾಳ: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ..!! ಪ್ರಕರಣ ದಾಖಲು

ಬಂಟ್ವಾಳ: ತಾಲೂಕಿನ ಸಜೀಪಮುನ್ನೂರಿನ‌ ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ಒಂದು ಸ್ಕೂಟರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು, ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಜೀಪಮುನ್ನೂರು ದಾಸರಗುಡ್ಡೆ ನಿವಾಸಿ ಸ್ಕೂಟರ್ ಸವಾರೆ ಅನುರಾಧ ಕೆ. ಅವರು ಡಿ.24ರ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಗಾಂಧಿನಗರ ಕ್ರಾಸ್ ಬಳಿ ಸಜೀಪ ಕಡೆಯಿಂದ ಸವಾರ ಸ್ಕೂಟರನ್ನು ಅತಿ ವೇಗ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಅನುರಾಧ ಅವರು ಚಲಾಯಿಸುತ್ತಿದ್ದ ಸ್ಕೂಟರಿಗೆ…

Read More

ನಿಜವಾಗೇ ಬಿಡ್ತು ‘ದೈವದ ಕಾರಣಿಕ’: 28 ವರ್ಷಗಳ ಬಳಿಕ ಮನೆಗೆ ‘ಮರಳಿ ಬಂದ ಮಗ’

ಉಡುಪಿ: ಮನೆ ಬಿಟ್ಟು ಹೋಗಿದ್ದಂತ ಆ ಮಗ, ಇನ್ನೂ ವಾಪಾಸು ಬರೋದೇ ಇಲ್ಲ ಎಂಬುದಾಗೇ ಕುಟುಂಬಸ್ಥರು ತಿಳಿದುಕೊಂಡಿದ್ದರು. ಇಷ್ಟು ವರ್ಷ ಸತ್ತಿದ್ದಾನೋ, ಬದುಕಿದ್ದಾನೋ ಗೊತ್ತೇ ಇಲ್ಲದ ಸ್ಥಿತಿಯಲ್ಲೂ ಮರಳಿ ಬರಲಿ ಅಂತ ಗ್ರಾಮದಲ್ಲಿನ ದೇವರಿಗೆ ಹರಕೆಯನ್ನು ಕುಟುಂಬಸ್ಥರು ಹೊತ್ತಿದ್ದರು. ಇದರ ಫಲವಾಗಿ 28 ವರ್ಷಗಳ ಬಳಿಕ ಮನೆ ಬಿಟ್ಟು ಹೋಗಿದ್ದಂತ ಮಗ ಮರಳಿ ಬಂದಿದ್ದಾನೆ. ಅದೆಲ್ಲಿ ಈ ಘಟನೆ ನಡೆದಿರೋದು ಅಂತ ಮುಂದೆ ಓದಿ. ಮೂರು ದಶಕಗಳ ಹಿಂದೆ ಮನೆ ಬಿಟ್ಟು ಹೋಗಿದ್ದಂತ ಮಗ, ಮನೆಗೆ ಮರಳಿ…

Read More