ಸುಬ್ರಹ್ಮಣ್ಯ: ಅರ್ಚಕರ ಮನೆಯಿಂದ ನಗ-ನಗದು ಕಳ್ಳತನ
ಸುಬ್ರಹ್ಮಣ್ಯ: ಅರ್ಚಕರ ಮನೆಯಿಂದ ಹಣ ಹಾಗೂ ಚಿನ್ನ ಕಳ್ಳತನ ಆಗಿರುವ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರು ಬೆಳಗಿನ ಜಾವ ಎಂದಿನಂತೆ ಅರ್ಚಕ ವೃತ್ತಿ ನಿರ್ವಹಿಸಲು ಮಠಕ್ಕೆ ತೆರಳಿ ಕೆಲಸ ಮುಗಿಸಿಕೊಂಡು ಬೆಳಗ್ಗೆ ಮನೆಗೆ ಬಂದಾಗ ಮನೆಯ ಮುಂಬಾಗಲಿನ ಬೀಗವನ್ನು ತೆಗೆದಿದ್ದು ಕಂಡುಬಂದಿತ್ತು. ಮನೆಯ ಒಳಪ್ರವೇಶಿಸಿ ನೋಡಿದಾಗ ಗೋದ್ರೇಜ್ ತೆರೆದಿದ್ದು, ಪರಿಶೀಲಿಸಿದಾಗ ಗೋದ್ರೇಜ್ ಒಳಗಡೆ ಪರ್ಸ್‌ನಲ್ಲಿಟ್ಟಿದ್ದ ಸುಮಾರು 25 ಸಾವಿರ ರೂ. ಹಣ ಮತ್ತು 1.15 ಲಕ್ಷ ರೂ. ಮೌಲ್ಯದ ಸುಮಾರು…

