ಅಡಮಾನ ರಹಿತ ಕೃಷಿ ಸಾಲ ಮಿತಿ 2 ಲಕ್ಷ ರೂ.ಗೆ ಹೆಚ್ಚಳ
ಹೊಸದಿಲ್ಲಿ: ಹೊಸ ವರ್ಷ 2025ಕ್ಕೆ ರೈತರಿಗೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಗುಡ್ ನ್ಯೂಸ್ ಕೊಟ್ಟಿದ್ದು ಜನವರಿ 1ರಿಂದ ಅಡಮಾನರಹಿತ ಕೃಷಿ ಸಾಲ ಮಿತಿಯನ್ನು 2 ಲಕ್ಷ ರೂ.ಗೆ ಏರಿಕೆ ಮಾಡಿದೆ. ಈ ಹಿಂದೆ ಇದು 1.60 ಲಕ್ಷ ರೂ. ಇತ್ತು. ಇದರಿಂದ ಸಣ್ಣ ಮತ್ತು ಮಧ್ಯಮ ರೈತರಿಗೆ ಅನುಕೂಲವಾಗಲಿದೆ. ಉತ್ಪಾದನ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೃಷಿಕರಿಗೆ ಸುಲಭವಾಗಿ ಸಾಲ ಸೌಲಭ್ಯ ಸಿಗುವಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ದೇಶದ ಶೇ.86 ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ…

