ಶಬರಿಮಲೆ ಯಾತ್ರಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ : ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ವಿಶೇಷ ಪೋರ್ಟಲ್ ಆರಂಭ.!

ಶಬರಿಮಲೆ ಯಾತ್ರಾರ್ಥಿಗಳಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರುವ ಭಕ್ತರಿಗೆ ಸುಲಭ ದರ್ಶನಕ್ಕೆ ಅನುಕೂಲವಾಗುವಂತೆ ವಿಶೇಷ ಪೋರ್ಟಲ್ ಪರಿಚಯಿಸಲಾಗಿದೆ. ಹೌದು, ಕೇರಳ ಸರ್ಕಾರ ಶಬರಿಮಲೆ – ಪೊಲೀಸ್ ಮಾರ್ಗದರ್ಶಿ ಎಂಬ ಈ ಪೋರ್ಟಲ್ ಪರಿಚಯಿಸಿದ್ದು, ಇದು ಇಂಗ್ಲಿಷ್ ಭಾಷೆಯಲ್ಲಿ ಲಭ್ಯವಿರುತ್ತದೆ. ಇದರಲ್ಲಿ ಭಕ್ತರಿಗೆ ಉಪಯುಕ್ತವಾದ ಎಲ್ಲಾ ಪ್ರಮುಖ ಮಾಹಿತಿ ನೀಡಲಾಗಿದ್ದು, ಇನ್ಮುಂದೆ ಭಕ್ತರು ಸುಲಭವಾಗಿ ಅಯ್ಯಪ್ಪಸ್ವಾಮಿಯ ದರ್ಶನ ಪಡೆದುಕೊಳ್ಳಬಹುದು. ಪೊಲೀಸ್ ಸಹಾಯವಾಣಿ ಸಂಖ್ಯೆಗಳು, ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆಗಳು, ಆರೋಗ್ಯ ಸೇವೆಗಳು, ಕೆಎಸ್ಆರ್ಟಿಸಿ,…

Read More

ಬಂಟ್ವಾಳ: ರಿಕ್ಷಾ- ಕಾರು ಭೀಕರ ಅಪಘಾತ, ಮಹಿಳೆ ಸಾವು- ಮಕ್ಕಳು ಸಹಿತ 8 ಮಂದಿಗೆ ಗಾಯ

ಬಂಟ್ವಾಳ: ಇಲ್ಲಿಗೆ ಸಮೀಪದ ವಗ್ಗ ಬಳಿಯ ಬಾಂಬಿಲ ಎಂಬಲ್ಲಿ ಕಾರು ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನುಳಿದಂತೆ ರಿಕ್ಷಾದಲ್ಲಿ ಮಕ್ಕಳು ಸಹಿತ 8 ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಪಂಜಿಕಲ್ಲು ಬಾಂದೊಟ್ಟು ರೆಚ್ಚಾಡಿ ಹರೀಶ್ ಎಂಬವರ ಪತ್ನಿ ತಿಲಕ (40) ಅವರು ಮೃತಪಟ್ಟಿದ್ದಾರೆ.ರಿಕ್ಷಾದಲ್ಲಿದ್ದ ಯಶಸ್ವಿನಿ, ಗೀತಾ , ರೇವತಿ, ಸರಸ್ವತಿ, ವೇದಾವತಿ, ರಾಜೀವಿ ಮತ್ತು ಮಕ್ಕಳಾದ ದಿಗಂತ್ ಹಾಗೂ ದಿಶಾನಿ ಅವರು ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಪುಂಜಾಲಕಟ್ಟೆ ಕಡೆಗೆ…

Read More

ಪುತ್ತೂರು: ವಿದ್ಯಾರ್ಥಿನಿಗೆ ಕಿರುಕುಳ, ಜಾತಿ ನಿಂದನೆ – ಆರೋಪಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಶಾಂತಿಗೋಡು ಗ್ರಾಮದ ಯುವಕೋರ್ವ ವಿದ್ಯಾರ್ಥಿನಿಯೊರ್ವಳಿಗೆ ಕಿರುಕುಳ ನೀಡಿ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಶಾಂತಿಗೋಡು ಗ್ರಾಮದ ರೋಶನ್ ಎಂಬಾತ ಕಿರುಕುಳ ನೀಡಿದ ಆರೋಪಿ. ವಿದ್ಯಾರ್ಥಿನಿ ನೀಡಿದ ದೂರಿನಂತೆ ಆತನ ವಿರುದ್ಧ ಪೋಕ್ಸೋ ಪ್ರಕರಣ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Read More

ಪುತ್ತೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ-  ಆರೋಪಿಗಳಿಗೆ ಸಹಕರಿಸಿದ ಸಿದ್ದಿಕ್ ಮನೆ ಮೇಲೆ ದಾಳಿ..!

ಪುತ್ತೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಸಹಕರಿಸಿದ್ದಾರೆ ಎನ್ನಲಾದ ಅಬೂಬಕ್ಕರ್ ಸಿದ್ದಿಕ್ ಅವರ ಪತ್ನಿ ವಾಸವಾಗಿರುವ ಮನೆ ಮೇಲೆ ಇಂದು ಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ ತನೆಖೆ ನಡೆಸಿದ್ದಾರೆ. ಕೆಯ್ಯೂರು ಶಾಲಾ ಬಳಿಯ ಬಾಡಿಗೆ ಮನೆಯೊಂದರಲ್ಲಿ ಅಬೂಬಕ್ಕರ್ ಸಿದ್ದಿಕ್ ಅವರ ಪತ್ನಿ ವಾಸವಾಗಿದ್ದಾರೆ. ಅವರ ಮನೆಗೆ ಎನ್‌ಐಎ ಅಧಿಕಾರಿಗಳು ಆಗಮಿಸಿ ತನಿಖೆ ನಡೆಸಿದ್ದಾರೆ. ಜೊತೆಗೆ ಸಿದ್ದಿಕ್ ಅವರ ಸಹೋದರರೋರ್ವರು ಕೆಯ್ಯೂರಿನ ಅರಿಕ್ಕಿಲದಲ್ಲಿ ವಾಸವಾಗಿದ್ದು, ಅಲ್ಲಿಗೂ ತೆರಳಿದ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದ…

Read More

ಪುತ್ತೂರು: ಖಾಸಗಿ ಬಸ್‍ ನಿಲ್ದಾಣದ ಬಳಿ ಇರುವ ನಾಗನಕಟ್ಟೆಗೆ ಹಾನಿ : ಆರೋಪಿ ಬಂಧನ..!!

ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಸಮೀಪದ ನಾಗನ ಕಟ್ಟೆಯ ಬೀಗ ಗೇಟ್ ಗಳನ್ನು ಮುರಿದು ಹಾನಿ ಮಾಡಿದ ಘಟನೆ ನಡೆದಿದೆ. ಹಾನಿ ಮಾಡುವ ಸಂದರ್ಭ ಸ್ಥಳದಲ್ಲಿದ್ದ ಸ್ಥಳೀಯರು ಹಾನಿ ಮಾಡಿದಾತ ಜಿಡೆಕಲ್ಲು ನಿವಾಸಿ ಸಲಾಂ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳೀಯ ನಗರಸಭಾ ಸದಸ್ಯ ಹಾಗೂ ನಾಗನ ಕಟ್ಟೆ ಸಮಿತಿಯ ಪದಾಧಿಕಾರಿಗಳು ಭಕ್ತರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

Read More

ಇನ್ಮುಂದೆ ‘ಹೋಟೆಲ್, ರೆಸ್ಟೋರೆಂಟ್, ಕಾರ್ಯಕ್ರಮ’ಗಳಲ್ಲಿ ‘ಗೋಮಾಂಸ’ ನಿಷೇಧ ; ಸರ್ಕಾರ ಮಹತ್ವದ ಆದೇಶ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ರಾಜ್ಯದಲ್ಲಿ ಗೋಮಾಂಸ ನಿಷೇಧವನ್ನ ರೆಸ್ಟೋರೆಂಟ್ಗಳು, ಹೋಟೆಲ್ಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಿಗೆ ವಿಸ್ತರಿಸಿದ್ದಾರೆ. ಹೊಸ ನಿಬಂಧನೆಗಳನ್ನ ಸೇರಿಸಲು ಗೋಮಾಂಸ ಸೇವನೆಯ ಬಗ್ಗೆ ಅಸ್ತಿತ್ವದಲ್ಲಿರುವ ಕಾನೂನನ್ನು ತಿದ್ದುಪಡಿ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಿಮಂತ ಬಿಸ್ವಾ ಶರ್ಮಾ, “ಅಸ್ಸಾಂನಲ್ಲಿ, ಯಾವುದೇ ರೆಸ್ಟೋರೆಂಟ್ ಅಥವಾ ಹೋಟೆಲ್’ನಲ್ಲಿ ಗೋಮಾಂಸವನ್ನ ನೀಡಲಾಗುವುದಿಲ್ಲ ಮತ್ತು ಅದನ್ನು ಯಾವುದೇ ಸಾರ್ವಜನಿಕ ಸಮಾರಂಭ ಅಥವಾ ಸಾರ್ವಜನಿಕ ಸ್ಥಳದಲ್ಲಿ ನೀಡಲಾಗುವುದಿಲ್ಲ ಎಂದು ನಾವು ನಿರ್ಧರಿಸಿದ್ದೇವೆ, ಆದ್ದರಿಂದ…

Read More

ಡಿಸೆಂಬರ್ 28 ಮತ್ತು 29 ರಂದು ಪುತ್ತಿಲ ಪರಿವಾರದಿಂದ 2ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಎರಡನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ ಕಾರ್ಯಕ್ರಮ ಡಿಸೆಂಬರ್ 28 ಮತ್ತು 29 ರಂದು ನಡೆಯಲಿದೆ ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹೇಳಿದರು. ಭಕ್ತರ ಬೇಡಿಕೆಯ ಹಿನ್ನಲೆಯಲ್ಲಿ ಈ ಸಲ ಎರಡನೇ ಬಾರಿಗೆ ಶ್ರೀನಿವಾಸ ಕಲ್ಯಾಣೋತ್ಸವವನ್ನು ಏರ್ಪಡಿಸಲು ಟ್ರಸ್ಟ್ ತೀರ್ಮಾನಿಸಿದೆ. ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಈ ಬಾರಿಯೂ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಲ್ಯಾಣೋತ್ಸವದ ಜೊತೆಗೆ ಧರ್ಮಸಂಗಮ…

Read More

ಉಪ್ಪಿನಂಗಡಿ: ನಿರ್ಮಾಣ ಹಂತದ ಗ್ರಂಥಾಲಯ ಕಟ್ಟಡದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!!

ಉಪ್ಪಿನಂಗಡಿ: ಇಲ್ಲಿನ ಬಸ್‌ ನಿಲ್ದಾಣದ ಬಳಿ ನಿರ್ಮಾಣವಾಗುತ್ತಿರುವ ಗ್ರಾಮ ಪಂಚಾಯತ್‌ ಅಧೀನದ ಗ್ರಂಥಾಲಯ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಮೃತಪಟ್ಟ ವ್ಯಕ್ತಿಯು ಸುಮಾರು 40-45 ವರ್ಷ ಪ್ರಾಯದವರಾಗಿದ್ದು, ಕಾರ್ಮಿಕನಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ನಿರ್ಮಾಣ ಹಂತದ ಕಟ್ಟಡಕ್ಕೆ ವ್ಯಕ್ತಿಯೋರ್ವರು ನೀರು ಬಿಡಲೆಂದು ಆಗಮಿಸಿದ್ದು, ಈ ಸಂದರ್ಭ ಕಟ್ಟಡದ ಒಳಭಾಗದಲ್ಲಿ ಮೃತದೇಹ ಇರುವುದು ಪತ್ತೆಯಾಗಿದೆ. ಕಪ್ಪು ಟೀಶರ್ಟ್‌ ತೊಟ್ಟಿರುವ ಗಂಡಸಿನ ಮೃತದೇಹ ಇದಾಗಿದ್ದು, ಸ್ಥಳದಲ್ಲಿ ಆತನಿಗೆ…

Read More

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ..!!

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಬಂದಿತ್ತು. ಈಗ ಬಂದಿರುವ ಇ-ಮೇಲ್ ಮೂಲಕ ಕಳುಹಿಸಲಾದ ಸಂದೇಶದಲ್ಲಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಲಾಗಿದೆ. ಈಗ ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿ ಬಂಧಿಯಾಗಿರುವ ಟಿಎನ್‌ಎಲ್‌ಎ ಭಯೋತ್ಪಾದಕ ಗುಂಪಿನ ಮುಖ್ಯಸ್ಥ ಎಸ್.ಮಾರನ್ ಅವರನ್ನು ಬಿಡುಗಡೆ ಮಾಡುವಂತೆಯೂ ಇ-ಮೇಲ್ ಒತ್ತಾಯಿಸಿದೆ. ಬೆದರಿಕೆಯ…

Read More

ಮಹಾರಾಷ್ಟ್ರದ ನೂತನ ಸಿಎಂ ಆಗಿ ‘ದೇವೇಂದ್ರ ಫಡ್ನವಿಸ್ ‘ ಆಯ್ಕೆ –

ಮಹಾರಾಷ್ಟ್ರ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ನಡೆದ ಬಿಜೆಪಿ ಕೋರ್ ಕಮಟಿ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಹೆಸರು ಅಂತಿಮವಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ಹೇಳಲಾಗುತ್ತಿದೆ. ನಾಳೆ ಡಿಸೆಂಬರ್ 5ರಂದು ಫಡ್ನವಿಸ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸದ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ನಂತರ ಮಹಾಯುತಿಯ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

Read More