ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ..!
ಮೈಸೂರು: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಮೇಲೆ ಮತ್ತೊಂದು ಭೂ ಅಕ್ರಮ ಆರೋಪ ಕೇಳಿ ಬಂದಿದೆ. ಆರ್‌ಟಿಐ ಕಾರ್ಯಕರ್ತ ಗಂಗರಾಜು ಈ ಕುರಿತು ದಾಖಲೆ ಬಿಡುಗಡೆ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ 20 ಗುಂಟೆ ಜಾಗವನ್ನು 2023ರ ಸೆಪ್ಟೆಂಬರ್ 29 ರಂದು ಸಿಎಂ ಪತ್ನಿ ಪಾರ್ವತಮ್ಮ ರಿಜಿಸ್ಟರ್ ಮಾಡಿಸಿಕೊಂಡಿದ್ದಾರೆ. ನಗರದ ಕೆಆರ್‌ಎಸ್ ರಸ್ತೆಯಲ್ಲಿರುವ ಸ.ನಂ 454ರ ಗಣೇಶ್ ದೀಕ್ಷಿತ್ ಎಂಬವರಿಗೆ ಸೇರಿದ 4 ಎಕರೆ 11 ಗುಂಟೆ ಜಾಗ ಅದು. ಅದರಲ್ಲಿ 20 ಗುಂಟೆ…

