ರದ್ದಾಗುತ್ತಾ ಕಾರ್ಮಿಕರ ಕಾರ್ಡ್? ಕಾರ್ಮಿಕರೇ ಇಲ್ನೋಡಿ : 2.46 ಲಕ್ಷ ಕಾರ್ಡ್ ಅಮಾನತು

ಬೆಂಗಳೂರು : ರಾಜ್ಯದಲ್ಲಿ 2.46 ಲಕ್ಷ ಕಾರ್ಮಿಕರ ಕಾರ್ಡ್ ಅಮಾನತು ಮಾಡಲಾಗುತ್ತೆ.2,46,951 ಕಾರ್ಡನ್ನ ನಕಲಿ ಎಂದು ಕಾರ್ಮಿಕ ಇಲಾಖೆ ಲಿಸ್ಟ್ ಮಾಡಿದೆ. ಕಟ್ಟಡ& ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಬರೋಬ್ಬರಿ 38 ಲಕ್ಷದ 42 ಸಾವಿರ ಕಾರ್ಮಿಕರು ನೋಂದಣಿ ಮಾಡಿ ಕೊಂಡಿದ್ದಾರೆ. 38.42 ಲಕ್ಷದ ಪೈಕಿ 2.46 ಸಾವಿರ ಕಾರ್ಡ್ ಅಮಾನತು ಮಾಡಲಾಗಿದ್ದು ಹಾವೇರಿಯಲ್ಲಿ ಅತೀ ಹೆಚ್ಚು 1,69,180 ಕಾರ್ಡ್ ಗಳು ಅಮಾನತು ಮಾಡಲಾಗಿದೆ. ಮದುವೆ, ಮರಣ, ಹೆರಿಗೆ, ಅಪಘಾತ ಸಂದರ್ಭದಲ್ಲಿ ದೊಡ್ಡ ಮೊತ್ತದ ಆರ್ಥಿಕ…

Read More

ಬಂಟ್ವಾಳ: ಶಾಂತಿಭಂಗ, ಕೋಮು ಪ್ರಚೋದನೆ ನೆಪದಲ್ಲಿ ಹಿಂಜಾವೇ ಪ್ರಮುಖನಿಗೆ ನೋಟೀಸ್ : ವಿಟ್ಲ ಪೋಲೀಸರ ವಿರುದ್ಧ ಹಿಂಜಾವೇ ಸುದ್ದಿಗೋಷ್ಠಿ

ಬಂಟ್ವಾಳ : ಹಿಂದೂ ಜಾಗರಣ ವೇದಿಕೆಯ ಪ್ರಮುಖ ರಾದ ಅಕ್ಷಯ್ ರಜಪೂತ್ ಕಲ್ಲಡ್ಕ ರವರು ಬಂಟ್ವಾಳ ಮತ್ತು ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ದೊಂಬಿ, ಕೋಮು ಗಲಭೆ, ಗೂಂಡಾಗಿರಿ, ಬೆದರಿಕೆ ಇತ್ಯಾದಿ ನಿರಂತರವಾಗಿ ಮಾಡುತ್ತಾರೆ ಎಂದು ಆರೋಪ ಹೊರಿಸಿ ಕಂದಾಯ ಇಲಾಖೆಗೆ ಶಿಫಾರಸ್ಸು ಮಾಡಿ ಬಿ ಎನ್ ಎಸ್ ಎಸ್ 130 ಕಲಂ ಅಡಿಯಲ್ಲಿ ನೋಟೀಸ್ ಜಾರಿಗೊಳಿಸಿದ ವಿಟ್ಲ ಪೋಲೀಸರ ವಿರುದ್ಧ ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನೋಟೀಸ್…

Read More

ಉಡುಪಿ: ವಿವಾಹ ನಿಶ್ಚಿತಾರ್ಥ ನಡೆದಿದ್ದ ಯುವತಿ ನೇಣಿಗೆ ಶರಣು

ಉಡುಪಿ: ಒಂದೂವರೆ ತಿಂಗಳ ಹಿಂದೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನ.17ರಂದು ಮೃತಪಟ್ಟಿದ್ದಾರೆ. ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮನೆಯ ರೂಮ್ ನಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನ. 17ರಂದು ಕೊನೆಯುಸಿರೆಳೆದಿದ್ದಾರೆ. ಕೀರ್ತನಾ…

Read More

ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

ತಿರುಪತಿ: ನೂತನವಾಗಿ ರಚನೆಯಾಗಿರುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಬೋರ್ಡ್ ಈಗ ಸಂಪೂರ್ಣ “ಹಿಂದೂಮಯ’ ಆಗುವತ್ತ ಹೆಜ್ಜೆಯಿಟ್ಟಿದೆ. ಟಿಟಿಡಿ ನೂತನ ಮುಖ್ಯಸ್ಥ ಬಿ.ಆರ್‌. ನಾಯ್ಡು ನೇತೃತ್ವದಲ್ಲಿ ನಡೆದ ಟ್ರಸ್ಟ್‌ನ ಮೊದಲ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅದರಂತೆ ಟಿಟಿಡಿಯ ಹಿಂದೂಯೇತರ ಉದ್ಯೋಗಿಗಳು ಸ್ವಯಂ ನಿವೃತ್ತಿ (ವಿಆರ್‌ಎಸ್‌) ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಆಂಧ್ರಪ್ರದೇಶ ಸರಕಾರದ ಇತರ ಇಲಾಖೆಗಳಿಗೆ ವರ್ಗಾವಣೆ ಆಗಬೇಕು ಎಂದು ಸೂಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಷ್ಟೇ ಅಲ್ಲದೆ ದೇಗುಲದ ಆವರಣದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅಂಗಡಿಗಳನ್ನು ಇಡಲು…

Read More

ಕೃಷಿ ಭೂಮಿ ಮಾರಾಟದ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ : ಹಿಂದೂ ವಾರಸುದಾರರು ತಮ್ಮ ಪೂರ್ವಿಕರ ಕೃಷಿ ಭೂಮಿಯನ್ನು ಮಾರಾಟ ಮಾಡಲು ಬಯಸಿದರೆ, ಅವರು ಮೊದಲು ತಮ್ಮ ಕುಟುಂಬದ ಸದಸ್ಯರಿಗೆ ಆದ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.ಈ ಆಸ್ತಿಯನ್ನು ಹೊರಗಿನವರಿಗೆ ಮಾರುವಂತಿಲ್ಲ. ಹಿಮಾಚಲ ಪ್ರದೇಶದ ಪ್ರಕರಣವೊಂದರಲ್ಲಿ ನ್ಯಾಯಮೂರ್ತಿಗಳಾದ ಯುಯು ಲಲಿತ್ ಮತ್ತು ಎಂಆರ್ ಶಾ ಅವರ ಪೀಠವು ಈ ನಿರ್ಧಾರವನ್ನು ನೀಡಿದೆ.ಪ್ರಕರಣದಲ್ಲಿ ಪ್ರಶ್ನೆಯೆಂದರೆ ಕೃಷಿ ಭೂಮಿ ಸೆಕ್ಷನ್ 22 ರ ನಿಬಂಧನೆಗಳ ಅಡಿಯಲ್ಲಿ ಬರುತ್ತದೆ, ಅದನ್ನು ಸ್ಪಷ್ಟವಾಗಿ ಒಪ್ಪಿಕೊಳ್ಳಲಾಗಿದೆ. ಸೆಕ್ಷನ್ 22…

Read More

ಕಲ್ಲಾಪು ಬುರ್ದುಗೋಳಿ ಶ್ರೀ ಕೊರಜ್ಜನ ಉದ್ಭವ ಶಿಲೆಯ ಆದಿಸ್ಥಳದಲ್ಲಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ ಬಿಗ್ ಬಾಸ್ ಶೈನ್ ಶೆಟ್ಟಿ

ಉಳ್ಳಾಲ : ಈ ತಿಂಗಳು ತೆರೆಕಾಣಲಿರುವ ಶೈನ್ ಶೆಟ್ಟಿ, ಪ್ರಭು ಮುಂಡ್ಕೂರು ಅಭಿನಯದ ಮರ್ಯಾದೆ ಪ್ರಶ್ನೆ ಯಶಸ್ಸಿಗಾಗಿ ಕಲ್ಲಾಪು ಬುರ್ದುಗೋಳಿ ಕೊರಗಜ್ಜ ಉದ್ಬವ ಶಿಲೆಯ ಆದಿಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿ, ನಾವು ದಿನನಿತ್ಯ ನಮ್ಮ ಕಾರ್ಯ ಪ್ರಾರಂಭಿಸುವಾಗ ಅಜ್ಜನನ್ನು ನೆನಪಿಸಿಕೊಂಡು ಸಾಕಷ್ಟು ಯಶಸ್ವಿಯಾಗಿದ್ದೇವೆ, ಈ ಚಿತ್ರವೂ ಜನರ ಮನಗೆಳ್ಳುವಲ್ಲಿ ಕೊರಗಜ್ಜ ಹರಸಲಿ ಎಂದು ಪ್ರಾರ್ಥಿಸಲು ಈಕ್ಷೇತ್ರಕ್ಕೆ ಬಂದಿದ್ದೇವೆ ಖಂಡಿತ ದೈವ ಬಲ ಇರುತ್ತದೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು. ಬುರ್ದುಗೋಳಿ ಕ್ಷೇತ್ರದ ಅಧ್ಯಕ್ಷರಾದ ವಿಶ್ವನಾಥ್ ನಾಯಕ್ ಕ್ಷೇತ್ರದ ಇತಿಹಾಸವನ್ನು ನಟರಿಗೆ…

Read More

‘NIA’ ಯಿಂದ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೇಶದ ಪ್ರತಿಷ್ಠಿತ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಖಾಲಿ ಇರುವ ಇನ್ಸ್ಪೆಕ್ಟರ್ ಮತ್ತು ಹೆಡ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು ಪೋಸ್ಟ್ ವಿವರಗಳು, ವೇತನ ಶ್ರೇಣಿ, ವಯಸ್ಸಿನ ಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬೇಕು. ಹುದ್ದೆಗಳ ವಿವರ…

Read More

ಮಂಗಳೂರು: ಇಸ್ರೇಲ್‌ನಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ವಂಚನೆ..!

ಮಂಗಳೂರು : ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಇವೆಲ್ಲದರ ನಡುವೆಯು ಇಸ್ರೇಲ್‌ನಲ್ಲಿ ಉದ್ಯೋಗ ನೀಡುವುದಾಗಿ ಆಮೀಷವೊಡ್ಡಿ ಕೇರಳ ಮೂಲದ ಏಜೆನ್ಸಿಯೊಂದು ಉದ್ಯೋಗಾಕಾಂಕ್ಷಿಗಳಿಗೆ ವಂಚಿಸಿರುವ ಆರೋಪ ಕೇಳಿಬಂದಿದೆ. ಇಸ್ರೇಲ್‌ನ ಕಂಪೆನಿಯೊಂದರಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಪಾಸ್‌ಪೋರ್ಟ್‌ ಮತ್ತು ಹಣ ಪಡೆದ ಕೇರಳ ಮೂಲದ ಏಜೆನ್ಸಿಯೊಂದು ಮಂಗಳೂರು ಮತ್ತು ಉಡುಪಿ ಜಿಲ್ಲೆಯ 130 ಮಂದಿ ಸೇರಿದಂತೆ ದೇಶದ ಸಾವಿರಾರು ಮಂದಿ ಉದ್ಯೋಗಾಕಾಂಕ್ಷಿಗಳಿಗೆ ವಂಚಿಸಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನಲ್ಲಿನ ಕನ್ಸಲ್ಟೆನ್ಸಿ ಯೊಂದರ ರೋಹಿತ್‌ ಎಂಬವರು, ತಮ್ಮ ಬಳಿ…

Read More

ಮಂಗಳೂರು : ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕ ಬೆಂಕಿ

ಸುರತ್ಕಲ್: ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಕಟ್ಲಾ ಆಶ್ರಯ ಕಾಲೋನಿಯಲ್ಲಿ ಮಂಗಳವಾರ(ನ.19) ರಂದು ನಡೆದಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಕಾರು ಬೆಂಕಿಗಾಹುತಿಯಾಗುತ್ತಿದ್ದಂತೆ ಸ್ಥಳೀಯರು, ಕದ್ರಿ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

Read More

ಉಪ್ಪಿನಂಗಡಿ : ಮನೆಗೆ ನುಗ್ಗಿ ಚಿನ್ನಾಭರಣ ದೋಚಿ, ದಾಖಲೆಗಳನ್ನು ಬೆಂಕಿ ಹಚ್ಚಿ ಸುಟ್ಟ ಕಿಡಿಗೇಡಿಗಳು…!!

ಉಪ್ಪಿನಂಗಡಿ : ಮನೆಗೆ ನುಗ್ಗಿದ ಕಳ್ಳರು ಚಿನಾಭರಣ ವನ್ನು ದೋಚಿ, ಪ್ರಮುಖ ದಾಖಲೆಗಳನ್ನು ಬೆಂಕಿ ಹಚ್ಚಿ ಸುಟ್ಟು ಹಾಕಿದ ಘಟನೆ ಇಚ್ಲಂಪಾಡಿ ಗ್ರಾಮದ ಮಾನಡ್ಕ ಎಂಬಲ್ಲಿನ ಸತೀಶ್ ಎಂಬವರ ಮನೆಯಲ್ಲಿ ನಡೆದಿದೆ. ಸತೀಶ್ ರವರು ಮದುವೆ ಕಾರ್ಯದ ನಿಮಿತ್ತ ಸಂಬಂಧಿಕರ ಮನೆಗೆ ಹೋಗಿದ್ದು, ನಸುಕಿನ ವೇಳೆ ಮನೆಯೊಳಗೆ ಬೆಂಕಿ ಉರಿಯುತ್ತಿರುವುದನ್ನು ಕಂಡು ಸತೀಶ್‌ರ ಅಣ್ಣನ ಮಗಳು ಫೋನ್ ಕರೆ ಮಾಡಿ ತಿಳಿಸಿದ್ದು, ಮನೆ ಮಂದಿ ಆಗಮಿಸಿ ನೋಡಿದಾಗ ಆ ವೇಳೆ ಮನೆಯ ಕೋಣೆಯಲ್ಲಿ ಬೆಂಕಿ ಉರಿಯುತ್ತಿದ್ದು ಬಳಿಕ…

Read More