ಉಡುಪಿ: ಎನ್ ಕೌಂಟರ್ ಗೆ ನಕ್ಸಲ್ ನಾಯಕ `ವಿಕ್ರಂ ಗೌಡ’ ಬಲಿ..!
ಹೆಬ್ರಿ: ಪಶ್ಚಿಮ ಘಟ್ಟ ತಪ್ಪಲು ಪ್ರದೇಶವಾದ ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ನಕ್ಸಲ್ ಎನ್ಕೌಂಟರ್ ನಡೆದಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು. ಇದೇ ಹೊತ್ತಿಗೆ ಉಡುಪಿ ಜಿಲ್ಲೆಯಲ್ಲಿ ಗುಂಡಿನ ಸದ್ದು ಕೇಳಿದೆ. ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ…

