Headlines

ಮಂಗಳೂರು: ಎಂಡಿಎಂಎ ಮಾದಕದ್ರವ್ಯ ಮಾರುತ್ತಿದ್ದ ಐವರು ಸಿಸಿಬಿ ಬಲೆಗೆ..!

ಮಂಗಳೂರು: ನಿಷೇದಿತ ಮಾದಕದ್ರವ್ಯ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 70ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಮಂಜೇಶ್ವರ ಬೆಂಗ್ರೆ ನಿವಾಸಿ ಅಬ್ದುಲ್ ಶಾಕೀರ್(24), ಕಾಸರಗೋಡು ಮಂಜೇಶ್ವರ, ಕುಂಜತ್ತೂರು, ಉದ್ಯಾವರ ನಿವಾಸಿ ಹಸನ್ ಆಶೀರ್(34), ಕೇರಳದ ಕಣ್ಣೂರು ಜಿಲ್ಲೆಯ ಕೊರಂಗಾಡ್, ಪಯ್ಯನೂರು, ಪೆರಿಂಗಾಂವ್‌ ನಿವಾಸಿ ರಿಯಾಜ್ ಎ.ಕೆ(31), ಕಾಸರಗೋಡು ವರ್ಕಾಡಿಯ ಪಾವೂರು ನಿವಾಸಿ ಮೊಹಮ್ಮದ್ ನೌಷಾದ್(22), ಕಾಸರಗೋಡು ಮಂಜೇಶ್ವರ, ಕುಂಜತ್ತೂರು ನಿವಾಸಿ ಯಾಸೀನ್ ಇಮ್ರಾಜ್(35) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಮಂಗಳೂರಿನಲ್ಲಿ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು…

Read More

ಮಹಾರಾಷ್ಟ್ರದಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವು!

ಪುಣೆ : ಮಹಾರಾಷ್ಟ್ರದಲ್ಲಿ ಬೆಳ್ಳಂಬೆಳಗ್ಗೆ ದುರಂತವೊಂದು ಸಂಭವಿಸಿದ್ದು, ಹೆಲಿಕಾಪ್ಟರ್ ವೊಂದು ಪತನಗೊಂಡು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಪುಣೆ ಜಿಲ್ಲೆಯ ಬವ್ದಾನ್ ಬಳಿಯ ಅರಣ್ಯ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಹೆಲಿಕಾಪ್ಟರ್ ಪತನಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಸರ್ಕಾರಿ ಹೆಲಿಕಾಪ್ಟರ್ ಅಥವಾ ಖಾಸಗಿ ಹೆಲಿಕಾಪ್ಟರ್ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಪುಣೆಯ ಬವ್ಧಾನ್ ಬುದ್ರುಕ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ…

Read More

ಬೆಳ್ತಂಗಡಿ : ಮನೆ ಅಂಗಳದಲ್ಲಿ ಕಾರು ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ ಸಾವು..!

ಬೆಳ್ತಂಗಡಿ : ಮನೆ ಅಂಗಳದಿಂದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಬಾಲಕನೊಬ್ಬ ಆಕಸ್ಮಿಕವಾಗಿ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಹಮೀದ್ ಎಂಬವರ ಮಗ ನವಾಫ್ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ನವಾಫ್ ಇಸ್ಮಾಯಿಲ್ ಆತೂರಿನ ಆಯಿಷಾ ಸ್ಕೂಲ್ ನ 4ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಮನೆಯಂಗಳದಲ್ಲಿದ್ದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಕಾರಿನ ಹಿಂಬದಿ ನಿಂತಿದ್ದ ನವಾಫ್ ಮೇಲೆ ಕಾರು ಹರಿದಿದೆ. ಈ…

Read More

ದ.ಕ ಜಿಲ್ಲಾ ವಿಧಾನ ಪರಿಷತ್‌ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ

ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಪಕ್ಷದ ವರಿಷ್ಟರು ವಿಧಾನಪರಿಷತ್‌‌ನ ಅವಿಭಜಿತ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಕಿಶೋರ್ ಕುಮಾರ್ ಪುತ್ತೂರು ಅವರ ಹೆಸರನ್ನು ಅಂತಿಮಗೊಳಿಸಿದೆ. ಕಿಶೋರ್ ಕುಮಾರ್ ಬೊಟ್ಯಾಡಿ ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯಾಗಿದ್ದು,…

Read More

ಮೂಡಬಿದಿರೆ: ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್

ಮೂಡಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.10ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2024, 30ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ‌ಉತ್ಸವ ನಡೆಯಲಿದೆ ಎಂದು ಆಳ್ವಾಸ್ ಅಧ್ಯಕ್ಷ‌ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತು‌ ಸಹಿತ‌ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು, ಕೊನೆಯ ದಿನ ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ. ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

Read More

ಉಡುಪಿ: ನಿಷೇಧಿತ ಚೀನಿ ಬೆಳ್ಳುಳ್ಳಿ ಹಾವಳಿ- ಅಧಿಕಾರಿಗಳಿಂದ 5 ಕ್ವಿಂಟಾಲ್ ವಶ

ಉಡುಪಿ: ಕೆಲವು ದಿನಗಳಿಂದ ನಿಷೇಧಿತ ಚೀನೀ ಬೆಳ್ಳುಳ್ಳಿ ಹಾವಳಿ ಹೆಚ್ಚುತ್ತಿದೆ. ಉಡುಪಿ ಎಪಿಎಂಸಿಯಲ್ಲಿಯೂ ಚೀನೀ ಬೆಳ್ಳುಳ್ಳಿ ಪತ್ತೆಯಾಗಿದೆ. ಇಲ್ಲಿನ ಆದಿಉಡುಪಿ ಎಪಿಎಂಸಿ ಗೋದಾಮಿನಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಸಂಗ್ರಹಿಸಿಡಲಾಗಿತ್ತು. ಖಚಿತ ಮಾಹಿತಿ ಪಡೆದ ಉಡುಪಿ ನಗರಸಭೆ ಮುಖ್ಯ ಆಯುಕ್ತ ರಾಯಪ್ಪ ದಿಢೀರ್ ದಾಳಿ ನಡೆಸಿ 5 ಕ್ವಿಂಟಾಲ್ ಬೆಳ್ಳುಳ್ಳಿಯನ್ನು ಪತ್ತೆ ಮಾಡಿದ್ದಾರೆ. ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಈ ದಾಳಿ ನಡೆಯಿತು. ಚೀನಿ ಬೆಳ್ಳುಳ್ಳಿ ಮಾರಾಟದ ವಿರುದ್ಧಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಮಾರಕ ರೋಗಗಳಿಗೆ ಕಾರಣವಾಗುವ ಚೀನಿ ಬೆಳ್ಳುಳ್ಳಿ ಮಾರಾಟಗಾರರ…

Read More

ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆ 20 ರೂ. ಇಳಿಕೆ

ನವದೆಹಲಿ : ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೆಲವೇ ತಿಂಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 20 ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ. ಏಕೆಂದರೆ ಬಹುಬೇಗ ಜನರು ಪೆಟ್ರೋಲ್ ಅವಲಂಬಿತರಾಗುವಂತೆ ಮಾಡಲು ಸರ್ಕಾರ ಮುಂದಾಗಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಕೂಡ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ದೇಶದ ಬಹುತೇಕ ಪೆಟ್ರೋಲ್ ಪಂಪ್‌ಗಳಲ್ಲಿ ಶೀಘ್ರದಲ್ಲೇ ಎಥೆನಾಲ್ ಮಿಶ್ರಿತ ಪೆಟ್ರೋಲ್ ಲಭ್ಯವಾಗಲಿದೆ ಎಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇದರ ಬೆಲೆ ಸಾಮಾನ್ಯ…

Read More

ಮಂಗಳೂರು: ‘ಮಹಿಷ ದಸರಾ ಮಾಡುವವರು ರಾಕ್ಷಸರು ಮನುಷ್ಯರಲ್ಲ’ – ಕಲ್ಲಡ್ಕ ಪ್ರಭಾಕರ್ ಭಟ್

ಮಂಗಳೂರು: ಮೈಸೂರಿನಲ್ಲಿ ಮಹಿಷ ದಸರಾ ಆಚರಣೆಯ ಬಗ್ಗೆ ಪ್ರೊ.ಭಗವಾನ್ ವಿರುದ್ಧ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮಂಗಳೂರಿನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರೊ.ಭಗವಾನ್ ಅವರಂತರ ಹುಚ್ಚರು ಮೊದಲಿನಿಂದಲೂ ಇದ್ದಾರೆ. ಆಗಲೂ ಇದ್ದರು ಈಗಲೂ ಇದ್ದಾರೆ. ಅದೊಂದು ರಾಕ್ಷಸಿ ವಂಶ ಅದಕ್ಕೋಸ್ಕರ ರಾಕ್ಷಸರನ್ನು ಆರಾಧನೆ ಮಾಡುತ್ತಾರೆ. ಯಾರೂ ಮನುಷ್ಯರಾಗಿದ್ದರೋ ಅವರು ರಾಕ್ಷಸರನ್ನು ಪೂಜಿಸೋದಿಲ್ಲ. ರಾಕ್ಷಸರು ರಾಕ್ಷಸರನ್ನೇ ಪೂಜಿಸುತ್ತಾರೆ. ರಾಕ್ಷಸರು ಒಂದು ದಿನ ನಾಶವಾಗುತ್ತಾರೆ. ಭಗವಾನ್ ಈ ಹಿಂದಿನಿಂದಲೂ ಹುಚ್ಚುಹುಚ್ಚು ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಅವನು…

Read More

ಕಾರ್ಕಳ: ಲಾರಿ-ಬೈಕ್ ಮಧ್ಯ ಭೀಕರ ಅಪಘಾತ- ತಂದೆ ಸೇರಿ 3 ಮಕ್ಕಳು ಸಾವು..!

ಉಡುಪಿ: ಮಿನಿ‌ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಸುರೇಶ್‌ ಆಚಾರ್ಯ (36 ವ), ಮಕ್ಕಳಾದ ಸುಮೀಕ್ಷಾ (7 ವ) ಸುಶ್ಮಿತಾ (5 ವ), ಸುಶಾಂತ್‌ (2 ವ) ಎಂದು…

Read More

 ಹಸುವಿಗೆ ಹೊಸ ಸ್ಥಾನಮಾನ ನೀಡಿದ ‘ಮಹಾ ಸರ್ಕಾರ’ : ‘ರಾಜ್ಯ ಮಾತೆ’ ಎಂದು ಘೋಷಣೆ

ನವದೆಹಲಿ : ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಭಾರತೀಯ ಸಂಪ್ರದಾಯದಲ್ಲಿ ಗೋವಿನ ಸಾಂಸ್ಕೃತಿಕ ಮಹತ್ವವನ್ನ ಗುರುತಿಸಿ ಅಧಿಕೃತವಾಗಿ ‘ರಾಜ್ಯ ಮಾತಾ’ (ರಾಜ್ಯ ತಾಯಿ) ಎಂದು ಘೋಷಿಸಿದೆ. ಸೋಮವಾರ ಹೊರಡಿಸಿದ ಆದೇಶದ ಪ್ರಕಾರ, ಭಾರತದ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಮಿಲಿಟರಿ ಇತಿಹಾಸದಲ್ಲಿ ಹಸುಗಳ ಪಾತ್ರವನ್ನ ಸರ್ಕಾರ ಒತ್ತಿಹೇಳಿದೆ, ಪ್ರಾಚೀನ ಕಾಲದಿಂದಲೂ ಅವುಗಳ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತದೆ. ಈ ಆದೇಶವು ದೇಶೀಯ ಹಸು ತಳಿಗಳ ಸಂಖ್ಯೆ ಕುಸಿಯುತ್ತಿರುವ ಬಗ್ಗೆ ಕಳವಳಗಳನ್ನು ಎತ್ತಿ ತೋರಿಸಿದೆ ಮತ್ತು ಕೃಷಿಯಲ್ಲಿ ಹಸುವಿನ ಸಗಣಿಯ…

Read More