ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೆಹಲಿ: ರಾಜ್ಯಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಮದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಕನ್ನಡದಲ್ಲೇ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದಾರೆ. ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ… — Narendra Modi (@narendramodi) November 1, 2024 ಶುಭಾಶಯ…

Read More

ಉಡುಪಿ: ತಕ್ಷಣ ಒಳಮೀಸಲಾತಿ ಜಾರಿಗೆ ತನ್ನಿ – ಸಂಸದ ಕೋಟ ಒತ್ತಾಯ

ಉಡುಪಿ: ಒಳ ಮೀಸಲಾತಿ ವಿಚಾರದಲ್ಲಿ ವಿನಾಕಾರಣ ಆಯೋಗ ರಚನೆ ಮಾಡಲಾಗಿದ್ದು, ಇದು ಸಿದ್ದರಾಮಯ್ಯ ಸರ್ಕಾರದ ಅನಗತ್ಯ ನಿರ್ಧಾರ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ,ನಮ್ಮ ಸರ್ಕಾರ ಇದ್ದಾಗ ಒಳ ಮೀಸಲಾತಿ ಜಾರಿಗೆ ತರಲು ನಿರ್ಧಾರ ಕೈಗೊಂಡಿದ್ದೆವು. ಆಗ ರಾಜ್ಯ ಸರ್ಕಾರಕ್ಕೆ ಅಧಿಕೃತವಾದ ಅಧಿಕಾರ ಇರಲಿಲ್ಲ. ಕೇಂದ್ರ ಸರಕಾರದಿಂದ ಅನುಮತಿ ಪಡೆಯಬೇಕೆಂಬ ನಿಯಮ ಇತ್ತು. ಈಗ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಒಳ ಮೀಸಲಾತಿ ಹಂಚಿಕೆ ವಿಚಾರದಲ್ಲಿ…

Read More

ಉಡುಪಿ ಜಿಲ್ಲೆಯಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಪ್ರತ್ಯಕ್ಷ..! ಸ್ಥಳೀಯರಲ್ಲಿ ಆತಂಕ

ಉಡುಪಿ ಜಿಲ್ಲೆಯಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಪ್ರತ್ಯಕ್ಷಗೊಂಡು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಬೈಂದೂರು ತಾಲೂಕಿನ ನಾಗೂರಿನ ಮನೆಯೊಂದರ ಅಂಗಳದಲ್ಲಿ ಚಡ್ಡಿಗ್ಯಾಂಗ್ ಸದಸ್ಯನೋರ್ವ ಓಡಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಂದೂರು ತಾಲೂಕಿನಲ್ಲಿ ಚಡ್ಡಿ ಗ್ಯಾಂಗ್ ಮತ್ತೆ ಸಕ್ರಿಯಗೊಂಡಿದೆ. ಖತರ್ನಾಕ್ ಚಡ್ಡಿ ಗ್ಯಾಂಗ್ ನ ಸದಸ್ಯ ಬನಿಯಾನ್, ಚಡ್ಡಿ ಹಾಕಿಕೊಂಡು ಕೈಯಲ್ಲಿ ಚಪ್ಪಲಿ ಹಿಡಿದು ರಾತ್ರಿ ಸಂಚಾರ ಮಾಡುತ್ತಿರುವ ದೃಶ್ಯ ಕಂಡುಬಂದಿದ್ದು, ಮನೆಯ ಸಿಸಿ ಕ್ಯಾಮೆರಾವನ್ನು ನೋಡುತಿದ್ದಂತೆ ಆತ ಅಲ್ಲಿಂದ ಕಾಲ್ಕ್ಕಿತ್ತಿದ್ದಾನೆ ಈ ಘಟನೆಯಿಂದ ಸ್ಥಳೀಯರಲ್ಲಿ ಚಡ್ಡಿ ಗ್ಯಾಂಗ್ ಆತಂಕ…

Read More

ಯೋಧರಿಗೆ ಸಿಹಿ ತಿನ್ನಿಸಿ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ದೇಶಾದ್ಯಮತ ಸಂಭ್ರಮ, ಸಡಗದಿಂದ ದೀಪಾವಳಿ ಹಬ್ಬ ಆಚರಿಸಲಾಗುತ್ತಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಕಚ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಪ್ರಧಾನಿ ಮೋದಿ ಅವರು ಪ್ರತಿ ವರ್ಷ ಯೋಧರೊಂದಿಗೆ ದೀಪಾವಳಿ ಆಚರಿಸುತ್ತಾರೆ. ಈ ವರ್ಷವೂ ಕೂಡ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಿಸಿದ್ದಾರೆ.

Read More

 ದೀಪಾವಳಿ ಹಬ್ಬದ ದಿನ ‘ಪಟಾಕಿ’ ಸಿಡಿಸುವಾಗ ಈ ತಪ್ಪುಗಳನ್ನು ಮಾಡಬೇಡಿ.!

ದೀಪಾವಳಿ ಬೆಳಕಿನ ಹಬ್ಬವಾಗಿದೆ. ದೀಪಾವಳಿ ಹಬ್ಬವು ಬೆಳಕಿನೊಂದಿಗೆ ಸಂತೋಷವನ್ನು ತರುತ್ತದೆ. ಈ ದಿನ ಎಲ್ಲರೂ ಸಂತಸ, ಸಂಭ್ರಮದಿಂದ ಆಚರಿಸುತ್ತೇವೆ. ಇದೇ ವೇಳೆ ಪಟಾಕಿಯನ್ನು ಹೊಡೆಯುವಾಗ ಕೆಲವು ಮುಂಜಾಗ್ರತಾ ಕ್ರಮಗಳನ್ನು ಅನುಸರಿಬೇಕು. ಈ ಬೆಳಕಿನ ಹಬ್ಬವನ್ನು ದೊಡ್ಡ ಮಟ್ಟದಲ್ಲಿ ಆಚರಿಸಲಾಗುತ್ತದೆ. ಆದರೆ ನಿರ್ಲಕ್ಷ್ಯವು ಈ ಹಬ್ಬದ ವಿನೋದವನ್ನು ಹಾಳು ಮಾಡುತ್ತದೆ. ಹಬ್ಬದಲ್ಲಿ ಆರೋಗ್ಯಕರ ಮತ್ತು ಸುರಕ್ಷಿತ ದೀಪಾವಳಿಯನ್ನು ಆಚರಿಸುವುದು ಉತ್ತಮ. ದೀಪಾವಳಿಯನ್ನು ಸುರಕ್ಷಿತವಾಗಿ ಆಚರಿಸುವುದು ಹೇಗೆ? ಪಟಾಕಿ ಹಚ್ಚುವಾಗ ಕಾಲಿಗೆ ಚಪ್ಪಲಿ ಅಥವಾ ಶೂ ಧರಿಸಬೇಕು. ಯಾವಾಗಲೂ ತೆರೆದ…

Read More

ಉಳ್ಳಾಲ: ಗಾಂಜಾ ಮಾರಾಟ- ದಂಪತಿ ಬಂಧನ..!

ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಪಿ ಧನ್ಯ ನೇತೃತ್ವದ ಉಳ್ಳಾಲ ಪೊಲೀಸರ ಹಾಗೂ ಉಳ್ಳಾಲ ತಹಶೀಲ್ದಾರ್ ನೇತೃತ್ವದ ತಂಡ ದಂಪತಿಯನ್ನು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯ ಗ್ರಾಮದ ರಹ್ಮತ್ ನಗರದ ಎಲ್ಡ್ ಪಡ್ಡು ಎಂಬಲ್ಲಿ ನಡೆದಿದೆ. ಬಂಧಿತ ದಂಪತಗಳನ್ನು ನಝೀರ್ ಹಾಗೂ ಆತನ ಪತ್ನಿ ಅಸ್ಮ ಎಂದು ಗುರುತಿಸಲಾಗಿದೆ. ಅವರು ಕಾರಿನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳಿಂದ 6.800…

Read More

ಶೀಘ್ರವೇ ‘ಒಂದು ದೇಶ, ಒಂದು ಚುನಾವಣೆ ಜಾರಿ’ : ಪ್ರಧಾನಿ ಮೋದಿ

ನವದೆಹಲಿ: ಭಾರತವು ಒಂದು ರಾಷ್ಟ್ರ ನಾಗರಿಕ ಸಂಹಿತೆಯತ್ತ ಸಾಗುತ್ತಿದೆ. ಭಾರತದಲ್ಲಿ ಶೀಘ್ರವೇ ಒಂದು ದೇಶ, ಒಂದು ಚುನಾವಣೆ ಜಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಗುಜರಾತ್ ನಲ್ಲಿ ನಡೆದ ‘ರಾಷ್ಟ್ರೀಯ ಏಕತಾ ದಿವಸ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಏಕತಾ ಪ್ರತಿಜ್ಞೆ ಬೋಧಿಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 149 ನೇ ಜನ್ಮ ದಿನಾಚರಣೆಯಂದು ಅವರು ಏಕತಾ ನಗರದ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. “ನಾವು ಒನ್ ನೇಷನ್ ಒನ್ ಪವರ್ ಗ್ರಿಡ್ ಮೂಲಕ ದೇಶದ ವಿದ್ಯುತ್ ವಲಯವನ್ನು…

Read More

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಅಕ್ಕಿಯ ಜೊತೆಗೆ ಉಚಿತವಾಗಿ ಸಿಗಲಿವೆ ಈ 9 ವಸ್ತುಗಳು..!

ನವದೆಹಲಿ : ಉಚಿತ ಪಡಿತರ ಯೋಜನೆಯಲ್ಲಿ ಬದಲಾವಣೆ ತರುತ್ತಿರುವ ಮೋದಿ ಸರ್ಕಾರ ಇದೀಗ ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ 9 ಹೊಸ ಅಗತ್ಯ ವಸ್ತುಗಳನ್ನು ನೀಡಲು ನಿರ್ಧರಿಸಿದೆ, ಇದರಿಂದ ಪೌಷ್ಟಿಕತೆ ಮತ್ತು ಆರೋಗ್ಯವನ್ನು ಸುಧಾರಿಸಬಹುದು.ಉಚಿತ ಪಡಿತರ ಯೋಜನೆಯಲ್ಲಿ ಮೋದಿ ಸರ್ಕಾರ ಮಹತ್ವದ ಬದಲಾವಣೆ ತಂದಿದ್ದು, ಇದು ಕೋಟ್ಯಂತರ ಫಲಾನುಭವಿಗಳಿಗೆ ನೇರ ಪ್ರಯೋಜನವಾಗಲಿದೆ. ಈ ಹಿಂದೆ ಪಡಿತರ ಚೀಟಿದಾರರಿಗೆ ಅಕ್ಕಿ, ಗೋಧಿ ಮಾತ್ರ ನೀಡಲಾಗುತ್ತಿದ್ದು, ಇದೀಗ ಹೊಸದಾಗಿ 9 ಅಗತ್ಯ ವಸ್ತುಗಳನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಈ…

Read More

ಸುರತ್ಕಲ್: ಹಿಂದೂ ಯುವತಿಗೆ ಬೆದರಿಕೆ ಹಾಕಿದ್ದ ಶಾರಿಕ್’ಗೆ ಜಾಮೀನು

ಸುರತ್ಕಲ್ : “ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳುಹಿಸಿ ಮುಸ್ಲಿಂ ಯುವಕನೊಬ್ಬನ ನಿರಂತರ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆ ಯತ್ನಿಸಿದ ಘಟನೆಗೆ ಸಂಬoಧಿಸಿದ0ತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಸದ್ಯ ಆರೋಪಿಗೆ ಜಾಮೀನು ದೊರಕಿದೆ. ಸುರತ್ಕಲ್ ಇಡ್ಯಾದ ಸದಾಶಿವನಗರದ ನಿವಾಸಿ ಶಾರಿಕ್ ಹಾಗೂ ಆತನ ತಾಯಿ ನೂರ್‌ಜಹಾನ್ ಎಂಬವರು ಹಿಂದೂ ಯುವತಿಗೆ ಕಿರುಕುಳ ನೀಡುತ್ತಿದ್ದರು. ನಿರಂತರ ಕಿರುಕುಳದಿಂದ ಬೇಸತ್ತಿದ್ದಳು ಮತ್ತು ಆತ್ಮಹತ್ಯೆ ಯತ್ನ ಮಾಡಿದ್ದು, “ಅನ್ಯಮತೀಯನ ಕೈಯಲ್ಲಿ ಸಾಯುವುದಕ್ಕಿಂತ, ಈಗಲೇ…

Read More

ವಿಧಾನಪರಿಷತ್ತಿನ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್‍ನ ನೂತನ ಸದಸ್ಯರಾಗಿ ಭಗವಂತ ಹಾಗೂ ತಾಯಿ ಭಾರತಾಂಬೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನಪರಿಷತ್ತಿನ ಮಾನ್ಯ ಸಭಾಪತಿಗಳಾದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ವಿಧಾನಪರಿಷತ್‍ನ ಕಾರ್ಯದರ್ಶಿಗಳಾದ ಕೆ.ಆರ್.ಮಹಾಲಕ್ಷ್ಮಿ ಸೇರಿದಂತೆ ಶಾಸಕರು, ವಿಧಾನಪರಿಷತ್‍ನ ಸದಸ್ಯರು ಉಪಸ್ಥಿತರಿದ್ದರು.

Read More