ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಭಾರಿ ಬೆಂಕಿ ಅವಘಡ..!

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾಗಿವೆ. ಇಂದು ಬುಧವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಇಲ್ಲಿನ ಟಿಕೆಟ್ ಕೌಂಟರ್ ಬಳಿಯ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸಾರ್ಟ್ ಸರ್ಕಿಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು ಇದರಿಂದ ಹೊತ್ತಿದ್ದ ಬೆಂಕಿ ವ್ಯಾಪಿಸಿ ಪಕ್ಕದಲ್ಲಿದ್ದ ಮತ್ತೊಂದು ವಾಹನವನ್ನೂ ಸುಟ್ಟು ಹಾಕಿದೆ.  ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ …

Read More

ನಟ ದರ್ಶನ್‌ಗೆ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಮಂಜೂರು..!- ಷರತ್ತು ಅನ್ವಯ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿ ಸುಮಾರು ಐದು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ಕೊನೆಗೂ ಸೆರೆಮನೆ ವಾಸದಿಂದ ಮುಕ್ತಿ ಸಿಕ್ಕಿದೆ. ಹೈಕೋರ್ಟ್ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವೈದ್ಯಕೀಯ ಚಿಕಿತ್ಸೆಯ ಆಧಾರದಲ್ಲಿ ಹೈಕೋರ್ಟ್ ನ್ಯಾಯಾಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಬಳ್ಳಾರಿ ಸೆಂಟ್ರಲ್ ಜೈಲ್‌ನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಣೆ ಪಡೆಯಲು…

Read More

ಕಾಸರಗೋಡು ಅಗ್ನಿ ದುರಂತ, ಬೆಂಕಿಯ ಕೆನ್ನಾಲಿಯಲ್ಲಿ ಸಿಲುಕಿದ್ದ ‘ಮಗು’ ವನ್ನು ರಕ್ಷಿಸಿದ ʼದೈವʼ…!!!

ಕಾಸರಗೋಡು: ಕೇರಳ ಕಾಸರಗೋಡಿನ ನೀಲೇಶ್ವರದ ಅಂಜೂತಾಂಬಲಂ ವೀರರ್ಕಾವು ದೈವಸ್ಥಾನದಲ್ಲಿ ಸೋಮವಾರ ತಡರಾತ್ರಿ ನಡೆದ ವಾರ್ಷಿಕ ಕಳಿಯಾಟ್ಟಂ ಸಂದರ್ಭದಲ್ಲಿ ಪಟಾಕಿ ಸ್ಪೋಟದಿಂದ ಸಂಭವಿಸಿದ ಭೀಕರ  ದುರಂತದಲ್ಲಿ 150 ಮಂದಿ ಗಂಭೀರ ಗಾಯಗೊಂಡಿದ್ದರೆ ಅದರಲ್ಲಿ 8 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಈ ಮಧ್ಯೆ ದುರಂತದಲ್ಲಿ ಸಿಲುಕಿಕೊಂಡವರನ್ನು ರಕ್ಷಿಸಲು ಅನೇಕರು ತಮ್ಮ ಪ್ರಾಣದ ಹಂಗು ತೊರೆದು ಶ್ರಮಿಸಿದ್ದಾರೆ. ಎಲ್ಲಕ್ಕೂ ಮಿಗಿಲಾಗಿ  ‘ದೈವ ನರ್ತಕ’ನೇ ತನ್ನ ಪ್ರಾಣವನ್ನು ಒತ್ತೆ ಇಟ್ಟು ಪುಟ್ಟ ಮಗುವನ್ನು ರಕ್ಷಿಸಿದ್ದ ಘಟನೆ ನಡೆದಿದೆ. ತನನ್ನ ಜೀವಕ್ಕೆ  ಅಪಾಯವಿದ್ದರೂ ಲೆಕ್ಕಿಸದೆ…

Read More

ಮಂಗಳೂರು: ಪೊಳಲಿ, ಉಳಾಯಿ ಬೆಟ್ಟು ಹೊಸ ಸೇತುವೆ ನಿರ್ಮಾಣ – ದ.ಕ. ಜಿಲ್ಲಾಧಿಕಾರಿ ಜೊತೆ ಶಾಸಕರ ಮಾತುಕತೆ

ಮಂಗಳೂರು : ನಗರದ ಹೊರವಲಯದ ಅಡ್ಡೂರು-ಪೊಳಲಿ ಸೇತುವೆ ಮತ್ತು ಉಳಾಯಿಬೆಟ್ಟು ಕಿರು ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ ಹಾಗೂ ಎರಡೂ ಕಡೆ ಹೊಸ ಸೇತುವೆ ನಿರ್ಮಿಸುವ ಕುರಿತು ಅ. ೨೯ರಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿಯೊಂದಿಗೆ ಮಾತುಕತೆ ನಡೆಸಿದರು. ಎರಡೂ ಕಡೆ ಸೇತುವೆಯಲ್ಲಿ ಘನ ವಾಹನ ಸಂಚಾರ ಸ್ಥಗಿತದಿಂದ ಸಾರ್ವಜನಿಕ ಬಸ್ ಸಂಚಾರ ಮತ್ತು ಕಾರ್ಮಿಕರಿಗೆ ತೀವ್ರ ತೊಂದರೆ ಉಂಟಾಗಿದೆ. ಇತ್ತೀಚೆಗೆ ಪೊಳಲಿ ಮತ್ತು…

Read More

ಪುತ್ತೂರು: ಲವ್ ಜಿಹಾದ್ ಕಾಟ – ಸಮೀರ್ ಗೆ ಶಿಕ್ಷೆ ನೀಡುವಂತೆ, ದೇವರ ಮೊರೆ ಹೋದ ಪೋಷಕರು..!!!

ಪುತ್ತೂರು : ಹಿಂದೂತ್ವದ ಭದ್ರಕೋಟೆ ದಕ್ಷಿಣ ಕನ್ನಡದಲ್ಲಿ ಲವ್ ಜಿಹಾದ್ ಇನ್ನೂ ಜೀವಂತವಿದೆ ಎನ್ನಲಾಗಿದೆ. ಇಂತಹುದೇ ಪ್ರಕರಣ ಪುತ್ತೂರಿನಲ್ಲಿ ಬೆಳಕಿಗೆ ಬಂದಿದ್ದು ಹಿಂದೂ ಹುಡುಗಿಯ ಪೋಷಕರು ಈಗ ನ್ಯಾಯಕ್ಕಾಗಿ ದೇವರ ಮೊರೆ ಹೋಗಿದ್ದಾರೆ. ಹತ್ತೂರ ಓಡೆಯ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರ ಹುಂಡಿಗೆ ದೂರಿನ ಚೀಟಿ ಬರೆದು ಹಾಕಿರುವ ಯುವತಿಯ ಪೋಷಕರು ನ್ಯಾಯಕ್ಕಾಗಿ ಪ್ರಾರ್ಥನೆ ಮಾಡಿದ್ದಾರೆ. ‘ಸಮೀರ್ ನಿಂದಾಗಿ ನನ್ನ ಮಗಳ ಜೀವನ ಹಾಳಾಗಿದೆ’ ‘ಇವತ್ತು ನಾನು ನನ್ನ ಮಗಳು ಬೀದಿಯಲ್ಲಿ ಇದ್ದೇವೆ’ ‘ನಮ್ಮ ಜೀವನ‌ ಹಾಳು…

Read More

ಮಂಗಳೂರು: ಮೊಬೈಲ್ ಟವರ್‌ ಕಳ್ಳತನ- ದೂರು ದಾಖಲು..!

ಮಂಗಳೂರು: ಮೊಬೈಲ್ ಟವರ್‌ ಕಳ್ಳತನವಾದ ಘಟನೆ ಮಂಗಳೂರಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ ತಿರುವೈಲ್‌ನ ಮೂಡುಬಿದಿರೆ ರಸ್ತೆ ಬದಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಮುಂಬೈಯ ಜಿ.ಟಿ.ಎಲ್ ಇನ್ಪ್ರಾಸ್ಟ್ರಕ್ಚರ್ ಕಂಪನಿ ಲಿಮಿಟೆಡ್ ಬೆಂಗಳೂರು ಶಾಖೆಯ ಮೊಬೈಲ್ ಟವರನ್ನು ಕಳ್ಳರು ಕದ್ದೊಯ್ದಿದ್ದಾರೆ. ಮೊಬೈಲ್ ಟವರ್ ನಿರ್ವಹಣೆಯ ಉಸ್ತುವಾರಿ ವಹಿಸಿದ್ದ ಟೆಕ್ನಿಷಿಯನ್ ರವರು ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಮೊಬೈಲ್ ಟವರ್ ಮತ್ತು ಮೊಬೈಲ್ ಟವರ್ ನ ಇತರ ಉಪಕರಣಗಳನ್ನು ಯಾರೋ ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಕಳವಾಗಿರುವ ಸೊತ್ತುಗಳ…

Read More

ಮಂಗಳೂರು: ನಿಂತ ರೈಲಿನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ,ಆರೋಪಿ ಅಬುತಾಹಿರ್ ಗೆ 20 ವರ್ಷ ಕಠಿಣ ಸಜೆ..!!

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲು ಬೋಗಿಯಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳದ ಇರ್ವತ್ತೂರು ಗ್ರಾಮದ ಅಬುತಾಹಿರ್ ಅಲಿಯಾಸ್ ಶಾಝಿಲ್‌ ಎಂಬಾತನಿಗೆ ಮಂಗಳೂರಿನ  ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮತ್ತು ತ್ವರಿತಗತಿ ವಿಶೇಷ ನ್ಯಾಯಾಲಯ ಮತ್ತು ಪೋಕ್ಸೊ ವಿಶೇಷ ನ್ಯಾಯಾಲಯ (ಎಎಫ್.ಟಿ.ಎಸ್.ಸಿ-2) 20 ವರ್ಷ ಕಠಿಣ ಸಜೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ‘ಫೋನ್‌ನಲ್ಲಿ ಪರಿಚಯವಾಗಿದ್ದ ಅಬುತಾಹಿರ್ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿದ್ದ. 2023ರ ಜೂನ್…

Read More

ಮಂಗಳೂರು: ಕಾರು ಚಾಲಕನಿಗೆ ಬೈಕ್ ಸವಾರ ನಿಂದ ಹಲ್ಲೆ..!

ಮಂಗಳೂರು: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಬಳಿಕ ಬೈಕ್ ಸವಾರ ಕಾರು ಚಾಲಕನಿಗೆ ಲೋಹದ ಪಂಚ್‌ನಿಂದ ಹಲ್ಲೆಗೈದು ಮೆಣಸಿನ ಪುಡಿ ಎರಚಿದ ಘಟನೆ ನಗರದ ಕದ್ರಿ ಶಿವಬಾಗ್‌ನಲ್ಲಿ ನಡೆದಿದೆ. ಬೆಳಗ್ಗೆ ಸುಮಾರು 10.30ರಿಂದ 10.45ರ ಅವಧಿಯಲ್ಲಿ ಕದ್ರಿ ಶಿವಬಾಗ್‌ನ ಪೆಟ್ರೋಲ್ ಬಂಕ್ ಬಳಿ ಆಮ್ನಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಆಗ ರೊಚ್ಚಿಗೆದ್ದ ಬೈಕ್ ಸವಾರ ತನ್ನ ಬಳಿ ಇದ್ದ ಲೋಹದ ಪಂಚ್‌ನಿಂದ ಕಾರು ಚಾಲಕನ ಮುಖಕ್ಕೆ ಗುದ್ದಿ ಕಣ್ಣಿಗೆ ಪೆಪ್ಪರ್…

Read More

ಕಾಸರಗೋಡು: ದೇವಸ್ಥಾನದ ಉತ್ಸವದ ವೇಳೆ ಪಟಾಕಿ ದುರಂತ; 154 ಮಂದಿಗೆ ಗಾಯ..!

ಕಾಸರಗೋಡು: ಕಳಿಯಾಟ ಮಹೋತ್ಸವ ಸಂದರ್ಭದಲ್ಲಿ ಪಟಾಕಿ ದುರಂತ ಸಂಭವಿಸಿ 154 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ನೀಲೇಶ್ವರಂನ ವೀರರ್ಕಾವು ದೇವಸ್ಥಾನದ ಉತ್ಸವದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಾಂಪ್ರದಾಯಿಕ ತೆಯ್ಯಂ ಉತ್ಸವಕ್ಕಾಗಿ ಮಧ್ಯರಾತ್ರಿಯ ನಂತರ ಸುಮಾರು 1,500 ಮಂದಿ ದೇವಸ್ಥಾನದಲ್ಲಿ ಜಮಾಯಿಸಿದ್ದರು. ತೆಯ್ಯಂ ಪ್ರದರ್ಶನವನ್ನು ವೀಕ್ಷಿಸಲು ಬಂದಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಮಂದಿ ಗಾಯಗೊಂಡಿದ್ದಾರೆ. ವೀರರ್ಕಾವು ದೇವಸ್ಥಾನದ ಬಳಿಯ ತಾತ್ಕಾಲಿಕ ಶೆಡ್‌ನಲ್ಲಿ ಪಟಾಕಿ ಸಂಗ್ರಹಿಸಿಡಲಾಗಿತ್ತು. ಈ ಶೆಡ್‌ಗೆ ಮೂವಳಂಕುಜಿ ಚಾಮುಂಡಿ…

Read More

ಮಂಗಳೂರು: ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟ ಆರೋಪ- 6 ಮಂದಿ ಅರೆಸ್ಟ್..!

ಮಂಗಳೂರು: ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದೇಶಿ ಪ್ರಜೆ ಸಹಿತ 6 ಆರೋಪಿಗಳನ್ನು ಪೊಲೀಸರು ಬಂಧಿದ್ದಾರೆ. ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸ್ಕೂಟರ್‌ನ್ನು ವಶಕ್ಕೆ ಪಡೆದಿದ್ದಾರೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಐಓಸಿಎಲ್ ಹಿಂಬಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತುವನ್ನು…

Read More