ಮಂಗಳೂರು: 30 ವರ್ಷಗಳ ಹಿಂದೆ ನಡೆದ ಕೊಲೆ, ಹಲ್ಲೆ ಪ್ರಕರಣ : ತಲೆಮರೆಸಿ ಕೊಂಡಿದ್ದ ಆರೋಪಿ ಸಿಸಿಬಿ ಬಲೆಗೆ…!!
ಮಂಗಳೂರು : ಸುಮಾರು 30 ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ ಪಿಎಲ್ ಬಳಿಯಲ್ಲಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸತತ ಕಾರ್ಯಾಚರಣೆ ಬಳಿಕ ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದ ಕೊಟ್ಟಾರಕ್ಕರ ಕೊಲ್ಲಂ, ಕೈತಕೋಡ್ ನ ಕುರುವ ಮೂಲ ಹೌಸ್ ನಿವಾಸಿ ಜೋಸ್ ಕುಟ್ಟಿ ಪಾಪಚ್ಚನ್(55) ಬಂಧಿತ ಆರೋಪಿ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದಲ್ಲಿ ಎಂಆರ್ ಪಿಎಲ್ ಟೌನ್ ಶಿಪ್…

