BREAKING : `CM ಸಿದ್ದರಾಮಯ್ಯ’ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು..!

ಬೆಂಗಳೂರು: ಮುಡಾ ಹಗರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಅರ್ಕಾವತಿ ಬಡಾವಣೆಯ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಅರ್ಕಾವತಿ ಲೇಔಟ್ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನಿವೇಶನಗಳ ಮಾಲೀಕರಾದ ಎಂ.ಎಸ್‌.ಶಿವಲಿಂಗಪ್ಪ, ಎಂ.ಚಂದ್ರಶೇಖರನ್‌, ಕೆ.ರಾಮಚಂದ್ರಯ್ಯ ಮತ್ತು ಡಾ.ವೆಂಕಟಕೃಷ್ಣಪ್ಪ ಎಂಬುವರು ಸಿಎಂ ಸಿದ್ದರಾಮಯ್ಯ, ಈ ಹಿಂದೆ ಬಿಡಿಎ ಆಯುಕ್ತರಾಗಿದ್ದ ಶ್ಯಾಂಭಟ್‌ ಮತ್ತು ಭೂಸ್ವಾಧೀನಾಧಿಕಾರಿ ಬೋರಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅರ್ಕಾವತಿ ಲೇಔಟ್‌ನ ನಿವೇಶನಗಳ…

Read More

ಪುತ್ತೂರಿನಲ್ಲಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ : ಬಜರಂಗದಳ ಕಾರ್ಯಕರ್ತರಿಂದ ತಡೆ- ಮಹಿಳೆಯರು, ಆಟೋರಿಕ್ಷಾ ಸಹಿತ ಜಾನುವಾರು ವಶಕ್ಕೆ..!

ಪುತ್ತೂರು: ಅಕ್ರಮವಾಗಿ ಆಟೋರಿಕ್ಷಾದಲ್ಲಿ ಗೋ ಸಾಗಾಟ ನಡೆಸುತ್ತಿದ್ದುದ್ದನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ರಿಕ್ಷಾದಲ್ಲಿ ವ್ಯಕ್ತಿಯೋರ್ವ ಗೋ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದು, ಜಾನುವಾರು ಸಹಿತ ಆಟೋ ರಿಕ್ಷಾವನ್ನು ಪೊಲೀಸ್‌ ಠಾಣೆಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಆಟೋ ರಿಕ್ಷಾದಲ್ಲಿ ಮಹಿಳೆಯರು ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Read More

‘ಮುಡಾ’ ಅಧ್ಯಕ್ಷ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರಿಗೌಡ ರಾಜೀನಾಮೆ ಸಲ್ಲಿಕೆ 

ಬೆಂಗಳೂರು : ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮುಡಾ ಹಗರಣದಲ್ಲಿ ಅಕ್ರಮ ಆರೋಪದ ಬಳಿಕ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಯೆಸ್, ರಾಜ್ಯ ಸರ್ಕಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ(ಮುಡಾ) ಹೊಸ ಆಡಳಿತಾಧಿಕಾರಿ ನೇಮಕ ಮಾಡಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಕೆ. ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ.ಮುಡಾ ನಿವೇಶನ ಹಂಚಿಕೆ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ…

Read More

ಮಂಗಳೂರು: ಬಸ್ ನಿಲ್ದಾಣದಲ್ಲಿ ಕಂಡೆಕ್ಟರ್ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ – ಪ್ರಕರಣ ದಾಖಲು

ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಕಂಡೆಕ್ಟರ್ ಒಬ್ಬರು ತಲೆಗೆ ಗಂಭೀರವಾಗಿ ಯಾರೋ ಹೊಡೆದು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜ್ಪೆ ನಿವಾಸಿ ರಾಜೇಶ್ (31) ಮೃತಪಟ್ಟವರು. ರಾಜೇಶ್ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್‌ ತೊಳೆಯುವುದು, ಕೆಲವೊಮ್ಮೆ ಕಂಡೆಕ್ಟರ್ ಆಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಬಸ್ ನಿಲ್ದಾಣದಲ್ಲಿಯೇ ಉಳಿದುಕೊಳ್ಳುತ್ತಿದ್ದರು ಎನ್ನಲಾಗಿದೆ. ಸೋಮವಾರ ರಾತ್ರಿ 8.30ರ ಸುಮಾರಿಗೆ ಬಸ್‌ ನಿಲ್ದಾಣದ ಬಳಿ ರಸ್ತೆ ಬದಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ….

Read More

ಉಡುಪಿ : ಸಿದ್ದರಾಮಯ್ಯನವರು ರಾಜೀನಾಮೆ ಕೊಡುವುದು ನಿಶ್ಚಿತ : ಬಿ.ವೈ ವಿಜಯೇಂದ್ರ..!!

ಉಡುಪಿ: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಗಳ ರೇಸ್ ನಲ್ಲಿರುವ ಪಟ್ಟಿ ಬಹಳ ದೊಡ್ಡದಾಗಿದೆ. ಯಾರ ಯಾರ ಹೆಸರಿದೆ ಎಂಬುವುದು ಸದ್ಯದಲ್ಲೇ ಬಹಿರಂಗ ಆಗಲಿದೆ. ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿಹಾಕಿಕೊಂಡಿರುವ ಸಿದ್ದರಾಮಯ್ಯನವರು ರಾಜೀನಾಮೆ ಕೊಡಲೇಬೇಕಾದ ಸಂದರ್ಭ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಉಡುಪಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಅನೇಕ ಹಿರಿಯರು ಮುಖ್ಯಮಂತ್ರಿ ಆಗಲು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಯಾವಾಗ ರಾಜೀನಾಮೆ ಕೊಡ್ತಾರೆ ಎಂಬುವುದನ್ನೇ ಕಾದು ಕುಳಿತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವುದಂತೂ ನಿಶ್ಚಿತ ಎಂದರು.

Read More

ಮಂಗಳೂರು: ವಾಯುಭಾರ ಕುಸಿತ ಮೀನುಗಾರಿಕೆಗೆ ತೆರಳದಂತೆ ಸೂಚನೆ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕಡಲ ಅಬ್ಬರ ಹೆಚ್ಚಾಗಿದ್ದು, ಮೀನುಗಾರರು ಮೀನುಗಾರಿಕೆಗೆ ಕಡಲಿಗೆ ಇಳಿಯದಂತೆ ಆದೇಶಿಸಿದ್ದಾರೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಅಕ್ಟೋಬರ್ 16ರಿಂದ 19ರವರೆಗೆ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆ ನೀಡಿದೆ. ಆದ್ದರಿಂದ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ತಕೆ ದಡ ಸೇರುವಂತೆ ತಿಳಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ,…

Read More

ಮಂಗಳೂರು: ತಲೆಮರೆಸಿಕೊಂಡ ಕಳವು ಆರೋಪಿ ಅರೆಸ್ಟ್

ಮಂಗಳೂರು: ಕಳವು ಪ್ರಕರಣದಲ್ಲಿ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿರುವ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟ, ಬದ್ರಿಯನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಬಂಧಿತ ಆರೋಪಿ. ಕೊಣಾಜೆ ಠಾಣಾ ವಾರೆಂಟ್ ಅಸಾಮಿ ಮೊಹಮ್ಮದ್ ಅಬ್ದುಲ್ ಫಯಾನ್ ವಿರುದ್ಧ ಕೊಣಾಜೆ, ಉಳ್ಳಾಲ, ಕಡಬ, ಬರ್ಕೆ, ಉಪ್ಪಿನಂಗಡಿ, ಪುತ್ತೂರು ನಗರ ಹಾಗೂ ಬಂಟ್ವಾಳ ನಗರ ಠಾಣೆಗಳಲ್ಲಿ ಒಟ್ಟು 24 ಪ್ರಕರಣಗಳು ದಾಖಲಾಗಿತ್ತು. ಪ್ರಕರಣದಲ್ಲಿ ಜಾಮೀನು ಪಡೆದ ಅಸಾಮಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯ…

Read More

BREAKING : ಕೊಡಗಿನಲ್ಲಿ ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಸಾವು!

ಕೊಡಗು : ಕಳೆದ ಕೆಲವು ತಿಂಗಳುಗಳ ಹಿಂದೆ ಕಾಡಾನೆಗಳ ದಾಳಿಯಿಂದ ಅನೇಕರು ಸಾವನ್ನಪ್ಪಿದ್ದರು. ಇದೀಗ ಮಲೆನಾಡು ಪ್ರದೇಶದಲ್ಲಿ ಮತ್ತೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಒಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿದ್ದಾರೆ. ಮಡಿಕೇರಿ ತಾಲೂಕಿನ ಚೆರಾಂಗಾಲ ಗ್ರಾಮದಲ್ಲಿ ಈ ಒಂದು ಅವಘಡ ಸಂಭವಿಸಿದೆ.ಕಾಡಾನೆ ದಾಳಿಯಿಂದ ಕರುಣಾಕರ (34) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಾಡಿಗೆ ತೆರಳಿದ್ದಾಗ ಕರುಣಾಕರ ಮೇಲೆ ಕಾಡಾನೆ ದಾಳಿ ಮಾಡಿದೆ. ಘಟನೆ ಕುರಿತಂತೆ…

Read More

ಅ.20 ರಂದು ಕುಟುಂಬ ವೈದ್ಯರ (MBBS) ರಾಜ್ಯ ಸಮ್ಮೇಳನ -2024

ಮಂಗಳೂರು: ಭಾರತೀಯ ವೈದ್ಯಕೀಯ ಸಂಘ (ರಿ.) ಕರ್ನಾಟಕ ರಾಜ್ಯ ಶಾಖೆ ಹಾಗೂ ಮಂಗಳೂರು ಶಾಖೆ, ಭಾರತೀಯ ವೈದ್ಯಕೀಯ ಸಂಘದ ರಾಜ್ಯ ವೈದ್ಯರ ವಿಭಾಗ ( IMACGP)ಇವರ ಮಾರ್ಗದರ್ಶನದಲ್ಲಿ ಕುಟುಂಬ ವೈದ್ಯರ ಸಂಘ (ರಿ.) ಮಂಗಳೂರು ಇದರ ವಿಂಶತಿ ವರ್ಷದ ಆಚರಣೆಯ ಅಂಗವಾಗಿ ಕುಟುಂಬ ವೈದ್ಯರ (MBBS) ರಾಜ್ಯ ಸಮ್ಮೇಳನ -2024 ಕಾರ್ಯಕ್ರಮವು ದಿನಾಂಕ ಅಕ್ಟೋಬರ್ 20 ಭಾನುವಾರದಂದು ಡಾ| ಎ.ವಿ ರಾವ್ ಕಾನ್ಫರೆನ್ಸ್ ಹಾಲ್ ಐಎಂಎ ಹೌಸ್ ಮಂಗಳೂರಿನಲ್ಲಿ ನಡೆಯಲಿದೆ.

Read More

 ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ : ಈ ಕಾರಣಕ್ಕೆ ಸೂಸೈಡ್

 ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಯಡಿಯೂರಪ್ಪ ನಗರದಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ನೆಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಅವಿನಾಶ್, ಪತ್ನಿ ಮಮತಾ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಲಬುರಗಿ ಮೂಲದ ಅವಿನಾಶ್ ಕುಟುಂಬ ಬೆಂಗಳೂರಿನಲ್ಲಿ ವಾಸವಾಗಿತ್ತು. ಅವಿನಾಶ್ ಹಾಗೂ ಪತ್ನಿ, ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ನೆಲೆಸಿತ್ತು. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅವಿನಾಶ್ ಮನೆಯಲ್ಲಿ ಹಣದ ಸಮಸ್ಯೆಯಿತ್ತು. ಸಾಲ ಸೂಲ ಮಾಡಿಕೊಂಡ…

Read More