Headlines

ವಾಹನ ಸವಾರರೇ `HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಒಂದೇ ವಾರ ಬಾಕಿ- 1,000 ರೂ.ವರೆಗೆ ದಂಡ

 ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಗಡುವು ವಿಸ್ತರಿಸಲಾಗಿದೆ. 2019ರ ಏಪ್ರಿಲ್‌ 1ಕ್ಕೂ ಮುನ್ನ…

Read More

ಶಿಕ್ಷಕನ ಮೊಬೈಲ್‌ ನಲ್ಲಿ 5000 ಮಕ್ಕಳ ಅಶ್ಲೀಲ ಫೋಟೊ..!

ಶಾಲಾ ಶಿಕ್ಷಕನೊಬ್ಬನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರ 5000ಕ್ಕೂ ಹೆಚ್ಚು ನಗ್ನ ದೃಶ್ಯ, ವಿಡಿಯೋ ಪತ್ತೆಯಾಗಿರುವ ಶಾಕಿಂಗ್‌ ಘಟನೆ ಬೆಳಕಿಗೆ ಬಂದಿದೆ. ಕೋಲಾರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಚಿತ್ರಕಲಾ ಶಿಕ್ಷಕ ಮುನಿಯಪ್ಪನ ಮೊಬೈಲ್‌ನಲ್ಲಿ ಈ ರೀತಿ ಮಕ್ಕಳ ಅಶ್ಲೀಲ ದೃಶ್ಯ ಪತ್ತೆಯಾಗಿದ್ದು,ಮಾಸ್ತಿ ಪೊಲೀಸರು ಕೇಸ್‌ ದಾಖಲಿಸಿದ್ದಾರೆ. ಆದರೆ, ಆರೋಪಿ ತನ್ನ ವಿರುದ್ಧದ FIR ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಮೊರೆ ಹೋಗಿದ್ದು, ಕೋರ್ಟ್‌ ಶಿಕ್ಷಕನ ಅರ್ಜಿ ವಜಾಗೊಳಿಸಿದೆ.ಈ ಕೃತ್ಯ ನಿಜಕ್ಕೂ ಅಸಭ್ಯ &ಭಯಾನಯಕ ಎಂದು ಕೋರ್ಟ್‌ ಕಳವಳ ವ್ಯಕ್ತಪಡಿಸಿದೆ.

Read More

ಪಾಕಿಸ್ತಾನ್ ‌ಗೆ ಗುಡ್ ಬೈ, ಇಂಡಿಯಾಗೆ ಜೈ ಎಂದ ಸೌದಿ ಅರೇಬಿಯಾ

ಸೌದಿ ಅರೇಬಿಯಾ ಪಾಕಿಸ್ತಾನದಲ್ಲಿ ಹೂಡಿಕೆ ಮಾಡಲು ಹಿಂದೇಟಾಗಿದ್ದು, ಬದಲಾಗಿ ಭಾರತದಲ್ಲಿ ಹೂಡಿಕೆ ಮಾಡಲು ಹೊರಟಿದೆ. ಕೊನೆ ಕ್ಷಣದಲ್ಲಿ ನಿರ್ಧಾರ ಬದಲಾಯಿಸಿ, ಭಾರತದಲ್ಲಿ 8 ಲಕ್ಷ ಕೋಟಿ ಹೂಡಿಕೆ ಮಾಡಲು ಸೌದಿ ಅರೇಬಿಯಾ ರೆಡಿ ಆಗಿದೆ. ಈ ಹಿಂದೆ ಸೌದಿ ಪಾಕಿಸ್ತಾನಕ್ಕೆ 2 ಲಕ್ಷ ಕೋಟಿ ಹೂಡಿಕೆಯ ಭರವಸೆ ನೀಡಿತ್ತು, ಆದರೆ ನಂತರ ಅದು 40 ಸಾವಿರ ಕೋಟಿ ಆಗಿತ್ತು. ಈಗ ಪಾಕಿಸ್ತಾನ ಹೂಡಿಕೆಯ ನಿರ್ಧಾರವನ್ನು ಹಿಂತೆಗೆದುಕೊಂಡಿದೆ. ಈ ಹಿಂದೆ ಜಗತ್ತಿನ ಅತಿ ದೊಡ್ಡ ತೈಲ ರಫ್ತು ಮಾಡುವ…

Read More

ರಾಜ್ಯಾದ್ಯಂತ ಇಂದಿನಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಟ

ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು ಮತ್ತೆ ಸಕ್ರಿಯಗೊಂಡಿದೆ. ಈ ದಿನ ಶನಿವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆಯನ್ನು ನೀಡಿದೆ. ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಒಳನಾಡಿನ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ…

Read More

BJP ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ದೇವದಾಸ್ ಕಾಪಿಕಾಡ್ ಮನೆಗೆ ಭೇಟಿ ನೀಡಿದ್ದು ನಿಜ- ಸತೀಶ್ ಕುಂಪಲ

ಮಂಗಳೂರು: ತುಳು ಚಿತ್ರನಟ ದೇವದಾಸ್ ಕಾಪಿಕಾಡರ ಬಿಜೆಪಿ ಪಕ್ಷ ಸೇರ್ಪಡೆ ವಿವಾದ ಕುರಿತು ಮಾದ್ಯಮಗಳಿಗೆ ಈ ಬಗ್ಗೆ ಹೇಳಿಕೆ ನೀಡಿದ  ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು BJP ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಡಿ ದೇವದಾಸ್ ಕಾಪಿಕಾಡ್ ಮನೆಗೆ ಭೇಟಿ ನೀಡಿದ್ದು ನಿಜ. ಪಕ್ಷದ ಸದಸ್ಯನಾಗಿ ಮಾಡುವ ಉದ್ಧೇಶದಿಂದ ಅವರ ಮನೆಗೆ ಹಿರಿಯರು ಭೇಟಿ ನೀಡಿದ್ದರು. ಸದಸ್ಯತ್ವ ಅಭಿಯಾನದ ವಿಚಾರದಲ್ಲಿ ಅವರು ಪೂರಕವಾಗಿ ಸ್ಪಂದಿಸಿದ್ದರು. ಪಕ್ಷಾತೀತವಾಗಿರುವ ಸೆಲೆಬ್ರೆಟಿಗಳ ಮನೆಗೆ ಪಕ್ಷದ ಮುಖಂಡರು ಭೇಟಿಯಾಗೋದು ಸಾಮಾನ್ಯವಾಗಿದ್ದು…

Read More

ಮಂಗಳೂರು: ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ – ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟನೆ

ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳ (ಇ-ಆಟೋ) ಪ್ರದೇಶ ನಿರ್ಬಂಧಗಳಿಲ್ಲದೆ ಸಂಚರಿಸಲು ಅನುಮತಿ ನೀಡಿ ಜುಲೈ 26ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಆಟೋ-ರಿಕ್ಷಾ ಮಾಲೀಕರು ಮತ್ತು ಚಾಲಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಮತ್ತು ಹೈಕೋರ್ಟ್ ನ ನಿರ್ದೇಶನದ ಮೇರೆಗೆ ಈ ಆದೇಶವನ್ನು ಕಾನೂನು ಚೌಕಟ್ಟಿನಲ್ಲಿ ಹೊರಡಿಸಲಾಗಿದೆ. ಸಂಬಂಧಪಟ್ಟವರು ಮೇಲ್ಮನವಿಯ ಮೂಲಕ ಹೆಚ್ಚಿನ ಸ್ಪಷ್ಟೀಕರಣವನ್ನು ಪಡೆಯಬಹುದು’ ಎಂದಿದ್ದಾರೆ. ‘ಯಾವುದೇ ನಗರ…

Read More

ನರ ಹಾಗೂ ಮಾನಸಿಕ ರೋಗಗಳ ಪತ್ತೆ ಹಚ್ಚುವಿಕೆ ಹಾಗೂ ನಿಬಾವಣೆಯಲ್ಲಿ ಕುಟುಂಬ(MBBS) ವೈದ್ಯರ ಪಾತ್ರ ದೊಡ್ಡದು- ಡಾ ರಾಹುಲ್ ಮಾಧವ ರಾವ್

ಮಂಗಳೂರು ನಗರದ ಕುಟುಂಬ ವೈದ್ಯರ ಸಂಘಟನೆ( ಎಂಬಿಬಿಎಸ್ ಜನರಲ್ ಪ್ರಾಕ್ಟೀಷನರ್ಸ್) ಯ ಆಶ್ರಯದಲ್ಲಿ ಜರುಗಿದ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜಿನ ನರಮಾನಸಿಕ ವಿಭಾಗದ ತಜ್ಞರಾದ ಡಾ ರಾಹುಲ್ ಮಾಧವ ರಾವ್ ಮಾತಾಡುತ್ತಾ, ನರ ಹಾಗೂ ಮಾನಸಿಕ ರೋಗಗಳ ಪತ್ತೆ ಹಚ್ಚುವಿಕೆ ಹಾಗೂ ನಿಬಾವಣೆಯಲ್ಲಿ ಕುಟುಂಬ(mbbs) ವೈದ್ಯರ ಪಾತ್ರ ದೊಡ್ಡದು ಎಂಬ ಅಭಿಪ್ರಾಯ ಪಟ್ಟರು. ಸಂಕಿರಣದ ಸಂಚಾಲಕರಾದ ಹಿರಿಯ ನರ ಮಾನಸಿಕ ರೋಗಗಳ ತಜ್ಞ ಡಾ ಮಾಧವ ರಾವ್ ಗೋಷ್ಠಿಯಲ್ಲಿ ತಜ್ಞ ಮಾಹಿತಿ ಹಂಚಿಕೊಂಡರು.ಇಪ್ಪತ್ತರ…

Read More

`SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : 39,481 ‘ಕಾನ್ಸ್ ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಕಾನ್‌ಸ್ಟೆಬಲ್ (GD) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ SSF, ರೈಫಲ್‌ಮ್ಯಾನ್ (GD) ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಯಲ್ಲಿ 39,481 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ನೇಮಕಾತಿಯನ್ನು ಪ್ರಕಟಿಸಿದೆ. ಈ ವರ್ಷ ಒಟ್ಟು 39481 ಹುದ್ದೆಗಳಿಗೆ ಎಸ್‌ಎಸ್‌ಸಿ ನೇಮಕಾತಿ ಮಾಡಿಕೊಳ್ಳಲಾಗಿದೆ. ಅಧಿಸೂಚನೆ ಹೊರಬಿದ್ದಿದ್ದು, ಸೆಪ್ಟೆಂಬರ್ 5ರಿಂದ ಈ ಹುದ್ದೆಗಳಿಗೆ ನೋಂದಣಿ ಕೂಡ ಆರಂಭವಾಗಿದೆ. ಆಸಕ್ತ…

Read More

ಉಡುಪಿ: ಕಿರಿಯ ಆರೋಗ್ಯ ವೀಕ್ಷಣಾಧಿಕಾರಿ ಲಾಡ್ಜಿನಲ್ಲಿ ಸಾವು!

ಉಡುಪಿ : ಕರ್ನಾಟಕ ಸರ್ಕಾರದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ವೀಕ್ಷಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಒಬ್ಬ ಖಾಸಗಿ ಲಾಡ್ಜ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಕುಂದಾಪುರದ ಜೆಕೆ ಟವರ್ಸ್ ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ಕುಂದಾಪುರ ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಮೊಗ್ಗ ಮೂಲದ ಪ್ರಶಾಂತ್ (37) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಮೂಲದ ಪ್ರಶಾಂತ್ ವಿವಾಹಿತನಾಗಿದ್ದು, ಒಂದು ಪುಟ್ಟ ಮಗುವಿದೆ. ಈತನಿಗೆ ಕುಡಿತದ ಚಟವಿತ್ತು ಎನ್ನಲಾಗಿದೆ. 2010ರಲ್ಲಿ…

Read More

ಕಡಬ: ಹಳ್ಳಕ್ಕೆ ಜಾರಿಬಿದ್ದು ಯುವಕ ಸಾವು

ಕಡಬ : ಯುವಕನೋರ್ವನು ಕಾಲು ಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟ ಘಟನೆ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ನಡೆದಿದೆ. ಮೀನಾಡಿ ಸಮೀಪದ ದೋಳ ನಿವಾಸಿ ಉಮೇಶ (35) ಮೃತಪಟ್ಟ ಯುವಕ. ಉಮೇಶ ಅವರು ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಹಳ್ಳದಲ್ಲಿ ರಭಸದಿಂದ ನೀರು ಹರಿಯುತ್ತಿದ್ದ ಹಿನ್ನೆಲೆಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಉಮೇಶರ ಮೃತದೇಹ ಪೇರಡ್ಕ ಸೇತುವೆ ಬಳಿ ಪತ್ತೆಯಾಗಿದೆ. ಈ ಬಗ್ಗೆ ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More