ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಪ್ರದರ್ಶನ ಕಡ್ಡಾಯ..!
ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ. ಆದುದರಿಂದ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ…

