ಮಂಗಳೂರು: ವಿದ್ಯಾರ್ಥಿಗಳ ಅಪಹರಿಸಿ, ಅರೆನಗ್ನಗೊಳಿಸಿ ಹಲ್ಲೆ – ಮೂವರು ಅರೆಸ್ಟ್
ಮಂಗಳೂರು: ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಅಪಹರಿಸಿ, ಅರೆನಗ್ನಗೊಳಿಸಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ಬುಧವಾರ ಬಂಧಿಸಿದ್ದಾರೆ. ದಿಯಾನ್, ಅಫ್ಘಾನ್, ಸಲ್ಮಾನ್ ಬಂಧಿತ ಆರೋಪಿಗಳು. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ.14ರಂದು ನೆಹರೂ ಮೈದಾನದಲ್ಲಿ ನಡೆದ ಫುಟ್ಬಾಲ್ ಪಂದ್ಯಾಟದ ಸಂದರ್ಭ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದೇ ಕೋಪದಲ್ಲಿ ಆ.19ರಂದು ಸಂಜೆ ಪಾಂಡೇಶ್ವರದಲ್ಲಿ ನಿಂತಿದ್ದ ಅಪ್ರಾಪ್ತ ವಯಸ್ಸಿನ…

