ದ.ಕ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ: ನಳಿನ್ ಕುಮಾರ್ ಕಟೀಲ್ ಹೆಸರು ಮುಂಚೂಣಿಯಲ್ಲಿ
ರಾಜ್ಯ ವಿಧಾನ ಪರಿಷತ್ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ಅಕ್ಟೋಬರ್ 21ರಂದು ನಡೆಯಲಿದೆ. ಕೋಟಾ ಶ್ರೀನಿವಾಸ ಪೂಜಾರಿ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ನಳಿನ್ ಕುಮಾರ್ ಕಟೀಲ್ ಹೆಸರು ಮುಂಚುಣಿಯಲ್ಲಿ ಕೇಳಿ ಬರುತ್ತಿದೆ. ಸಂಸದ ಸ್ಥಾನ ವಂಚಿತರಾದ ಹಿನ್ನಲೆಯಲ್ಲಿ ನಳಿನ್ ಕುಮಾರ್ ಕಟೀಲ್‌ರವರಿಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೂಲಗಳಿಂದ…

