ಕೆಂಪುಕೋಟೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯ `ಧ್ವಜಾರೋಹಣ’ ನೆರವೇರಿಸಿದ ಪ್ರಧಾನಿ ಮೋದಿ
ನವದೆಹಲಿ : ದೇಶಾದ್ಯಂತ ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸತತ 11 ನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಗೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸತತ 11 ನೇ ಬಾರಿಗೆ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಜವಾಹರಲಾಲ್ ನೆಹರು…

