ಕಾಫಿ ಡೇ ಮಾಲೀಕ ಆತ್ಮಹತ್ಯೆ ಹಿಂದೆ ಡಿಕೆ ಶಿವಕುಮಾರ್ ಕೈವಾಡ..! ಸಿದ್ಧಾರ್ಥ್ ಆತ್ಮಹತ್ಯೆ ರಹಸ್ಯ ಬಿಚ್ಚಿಟ್ಟ ಕುಮಾರಸ್ವಾಮಿ
ಮೈಸೂರು: ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಆತ್ಮಹತ್ಯೆ ಹಿಂದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಶನಿವಾರ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಎಚ್‌ಡಿ ಕುಮಾರಸ್ವಾಮಿ ಅವರು, ‘ನನ್ನ ಮಗನ ರಾಜಕೀಯ ಜೀವನಕ್ಕಾಗಿ ಅಣ್ಣನ ಮಗನನನ್ನ ಜೈಲಿಗೆ ಕಳಿಸಿದ್ದೇನೆ ಎಂದು ನೀವು ನನ್ನ ಮೇಲೆ ಆರೋಪ ಮಾಡಿದ್ದೀರಿ. ಆದರೆ, ಯಾವ ಎಸ್‌ಎಂ ಕೃಷ್ಣ, ಕೊತ್ವಾಲನ ಜೊತೆ ಜೀವನ ಮಾಡಿಕೊಂಡಿದ್ದ ನಿಮಗೆ ರಾಜಕೀಯ ಜೀವನ ಕೊಟ್ಟಿದ್ದರೋ,…

