Headlines

ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ- ಸಂಚಾರ ಸ್ಥಗಿತ

ಮಂಗಳೂರು: ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ್ದು ಪರಿಣಾಮ ಕೆಲ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಶುಕ್ರವಾರ(ಆಗಸ್ಟ್ 9) ದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ. ಬಾಳ್ಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.    

Read More

ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ..!

ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ. ಚಂಪಾಕಪುರ ನಿವಾಸಿ ವಾಣಿ (32) ಮತ್ತು ಮಕ್ಕಳಾದ ಸಮರ್ಥ (12), ಸಂಪದ (6) ಮೃತರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ನಗರ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ರವಾನೆ ಮಾಡಲಾಗಿದ್ದು, ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಇನ್ನು ಈ…

Read More

ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ: ಸತ್ಯ ಒಪ್ಪಿಕೊಂಡ ಸಿಎಂ ಸಿದ್ಧರಾಮಯ್ಯ

ಮೈಸೂರು : ಮುಡಾ ಪ್ರಕರಣದ ವಿರುದ್ಧ ವಿಪಕ್ಷಗಳು ಪಾದಯಾತ್ರೆ ಮಾಡುತ್ತಿವೆ. ಇದಕ್ಕೆ ಕೌಂಟರ್ ನೀಡುವಂತೆ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದ್ದು,ಮೈಸೂರಿನ ಅರಮನೆ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ. ಆದರೆ ಹಗರಣದಲ್ಲಿ ನಾನು ಭಾಗಿಯಾಗಿಲ್ಲ. ವಿರೋಧ ಪಕ್ಷಗಳು ದಾಖಲೆ ಸಹಿತ ಯಾವುದೇ ಚರ್ಚೆ ನಡೆಸಿಲ್ಲ. ವಾಲ್ಮೀಕಿ ನಿಗಮದಲ್ಲಿ 84 ಕೋಟಿ 63, ಅವ್ಯವಹಾರ ನಡೆದಿದೆ ಎಂದು ಜನಾಂದೋಲನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು….

Read More

ಮದುವೆಗೆ ಒಪ್ಪಿಲ್ಲವೆಂದು, ಒಂದೇ ಮರಕ್ಕೆ ನೇಣಿಗೆ ಶರಣಾದ ಪ್ರೇಮಿಗಳು

ಬಹಳ ದಿನಗಳಿಂದ ಪ್ರೀತಿಸುತ್ತಿದ್ದ ಇಬ್ಬರು ಪ್ರೇಮಿಗಳಿಗೆ ಜಾತಿ ಅಡ್ಡ ಬಂದಿದೆ. ಹೀಗಾಗಿ ತಮ್ಮ ಮದುವೆಗೆ ಮನೆಯವರು ಒಪ್ಪಿಲ್ಲವೆಂದು ಮನನೊಂದು ಪ್ರೇಮಿಗಳೆಬ್ಬರೂ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಂದಗಾವ ಗ್ರಾಮದಲ್ಲಿ ನಡೆದಿದೆ. ಹೌದು ಗ್ರಾಮದ ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು ಎಂದು ತಿಳಿದುಬಂದಿದೆ.ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಹುಡುಗನ ಮನೆಯವರು ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆಯೆ ಪರಿಹಾರ ಎಂದು…

Read More

ಪಿಎಸ್ ಐ ಪರಶುರಾಮ ಮನೆಯಲ್ಲಿ ಕಾಂಗ್ರೆಸ್ ಶಾಸಕನ ಲೆಟರ್ ಹೆಡ್ ಪತ್ತೆ..!

ಯಾದಗಿರಿ ಪಿಎಸ್‌ಐ ಪರಶುರಾಮ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಅಧಿಕಾರಿಗಳು ಗುರುವಾರ ಪೊಲೀಸ್​ ವಸತಿ ಗೃಹದ ಪರಶುರಾಮ ಮನೆಗೆ ತೆರಳಿ ಸ್ಥಳ ಮಹಜರು ನಡೆಸಿದ್ದಾರೆ. ಮನೆಯಲ್ಲಿ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹೆಸರಿನ ಲೆಟರ್​ ಹೆಡ್​ ಪತ್ತೆಯಾಗಿದೆ. ಕಾನೂನು ಸುವ್ಯವಸ್ಥೆ ಪೋಸ್ಟಿಂಗ್ ಬೇರೆಯವರಿಗೆ ಕೊಟ್ಟ ಹಿನ್ನೆಲೆಯಲ್ಲಿ ಅಪರಾಧ ವಿಭಾಗದ ಪೋಸ್ಟಿಂಗ್ ಕೊಡಿ ಎಂದು ಪರಶುರಾಮ ಕೇಳಿದ್ದರು. ಇದೇ ಕಾರಣಕ್ಕೆ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಯಾದಗಿರಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್​ಐ ಪೋಸ್ಟಿಂಗ್​ಗಾಗಿ ಲೆಟರ್ ಹೆಡ್…

Read More

ಪರಶುರಾಮ ಥೀಂ ಪಾರ್ಕ್ ವಿವಾದ : ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ..!

ಉಡುಪಿ : ಜಿಲ್ಲೆಯಾದ್ಯಂತ ಭಾರೀ ಸದ್ದು ಮಾಡಿರುವ ಪರಶುರಾಮ ಥೀಂ ಪಾರ್ಕ್ ವಿವಾದದ ವಿಚಾರವಾಗಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಮುಂದುವರೆದಿದೆ.  ಈ ಸಂಬಂಧ ನಡೆದ ಜಗಳದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದು ಈ ಕುರಿತು ದೂರು ದಾಖಲಾಗಿದೆ. ಕಾಂಗ್ರೆಸ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಕಾರ್ಯಕರ್ತರು ಪೋಸ್ಟ್ ಮಾಡಿದ್ದರು. ಈ ವಿಚಾರವಾಗಿ ದೊಂಡೇರಂಗಡಿ ಬಿಜೆಪಿ ಕಾರ್ಯಕರ್ತರಾದ ಉದಯ್‌ ನಾಯ್ಕ್‌, ನಿತ್ಯಾನಂದ ಕುಲಾಲ್‌, ರೂಪೇಶ್‌ ಕುಮಾರ್‌ ಎಂಬವರ ಮೇಲೆ ಹಲ್ಲೆ ನಡೆದಿದೆ. ಕಾಂಗ್ರೆಸ್ ನಾಯಕ ಉದಯಕುಮಾರ್…

Read More

ನಾಗರ ಪಂಚಮಿಯ ಹಬ್ಬಕ್ಕೆ ವಿಶೇಷವಾಗಿ ಈ ತಿನಿಸು: “ಅರಿಶಿಣ ಎಲೆ ಕಡುಬು” ಮಾಡುವ ವಿಧಾನ

ನಾಗರ ಪಂಚಮಿಯ ಹಬ್ಬಕ್ಕೆ ವಿಶೇಷವಾಗಿ ಈ ತಿನಿಸು ಮಾಡುತ್ತಾರೆ, ಕರಾವಳಿ ಭಾಗದಲ್ಲಿ ಅರಿಶಿಣದ ಎಲೆಯಿಂದ ಸಿಹಿ ಕಡುಬು ತಯಾರಿಸುತ್ತಾರೆ. ಅರಿಶಿಣ ಎಲೆ ಕಡುಬು ಅಥವಾ ಗಟ್ಟಿ ಎಂದು ಕರೆಯಲ್ಪಡುವ ಈ ತಿನಿಸನ್ನು ಒಮ್ಮೆ ಸವಿದರೆ ಸಾಕು, ಅದರ ರುಚಿ ಹಾಗೂ ಪರಿಮಳವನ್ನು ಮರೆಯಲು ಸಾಧ್ಯವೇ ಇಲ್ಲ.ಇದು ಬಾಯಿಗೆ ರುಚಿಕಾರಿ,ಆರೋಗ್ಯಕ್ಕೂ ಹಿತಕಾರಿ. ಬೇಕಾಗುವ ಸಾಮಗ್ರಿಗಳು:ಅರಿಶಿಣ ಎಲೆಗಳುಕುಚ್ಚಲಕ್ಕಿತಿಂಡಿ ಅಕ್ಕಿತೆಂಗಿನ ತುರಿಬೆಲ್ಲದ ಪುಡಿಉಪ್ಪುನೀರು ಮಾಡುವ ವಿಧಾನ:-ಅರಿಶಿಣ ಎಲೆ ಕಡುಬಿಗೆ ಕುಚ್ಚಲಕ್ಕಿ ಮತ್ತು ತಿಂಡಿ ಅಕ್ಕಿಯನ್ನು 2:1 ಅನುಪಾತದಲ್ಲಿ ಬಳಸಬೇಕು. ಕುಚ್ಚಲಕ್ಕಿ ಹಾಗೂ…

Read More

ವಕ್ಫ್‌ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ನವದೆಹಲಿ: ವಕ್ಫ್ ಬೋರ್ಡ್‌ ಅಧಿಕಾರವನ್ನು ಕಡಿಮೆ ಮಾಡುವ ವಕ್ಫ್ (ತಿದ್ದುಪಡಿ) ಮಸೂದೆ 2024 ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ. ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ಖಾತೆಯ ಸಚಿವ ಕಿರಣ್‌ ರಿಜುಜು ಅವರು ಮಸೂದೆಯನ್ನು ಮಂಡಿಸಿದರು. ಈ ಮಸೂದೆ ಈಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.ಪ್ರಸ್ತುತ ವಕ್ಫ್ ಬೋರ್ಡ್ ಹೊಂದಿರುವ ಏಕಪಕ್ಷೀಯ ಅಧಿಕಾರಗಳನ್ನು ಕಡಿಮೆ ಮಾಡಲು ಕೇಂದ್ರ ಉದ್ದೇಶಿಸಿದೆ. ಹಿಂದಿನ ಕಾಯ್ದೆಯಲ್ಲಿ ವಕ್ಫ್‌ ಬೋರ್ಡ್‌ಗೆ ಹೆಚ್ಚಿನ ಅಧಿಕಾರ ನೀಡಿತ್ತು. ಇದರ ಪ್ರಕಾರ ಭೂಮಿಯನ್ನು ವಕ್ಫ್ ಬೋರ್ಡ್‌ನಿಂದ ಹಿಂಪಡೆಯುವುದು ಅಸಾಧ್ಯವಾಗಿತ್ತು. ಇದಾದ…

Read More

BREAKING : ಪಶ್ಚಿಮ ಬಂಗಾಳದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ

ಪಶ್ಚಿಮ ಬಂಗಾಳದಲ್ಲಿ ಬಾಗಲಕೋಟೆ ಮೂಲದ ಯೋಧ ಒಬ್ಬರು ಹುತಾತ್ಮರಾಗಿದ್ದಾರೆ. ಬಿಎಸ್‌ಎಫ್ ಯೋಧ ಉಮೇಶ ದಬಗಲ್ (33) ಎನ್ನುವವರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಗುಂಡು ತಗುಲಿ ಉಮೇಶ್ ದಬಗಲ್ ಹುತಾತ್ಮ ರಾಗಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ.ಉಮೇಶ್ ದಬಗಲ್ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದೆ.ಕಳೆದ 13 ವರ್ಷದಿಂದ ಬಿಎಸ್‌ಎಫ್ ನಲ್ಲಿ ಉಮೇಶ್ ಸೇವೆ ಸಲ್ಲಿಸುತ್ತಿದ್ದರು. ನಾಳೆ ಉಮೇಶ್ ಅವರ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ತಲುಪಲಿದೆ.

Read More

ಬಂಟ್ವಾಳ: ಎಸ್ಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ!

ಬಂಟ್ವಾಳ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಜನಪದವುನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಎಂದು ಗುರುತಿಸಲಾಗಿದೆ. ಬಡಕಬೈಲಿನ ಖಾಸಗಿ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿದ್ದ ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ‌ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ಶಂಕಿಸಿದ್ದಾರೆ. ಅಗಸ್ಟ್ 7 ರಂದು ಬುಧವಾರ ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ…

Read More