ಮಂಗಳೂರು: ಬಸ್ ಸಂಚಾರದಲ್ಲಿದ್ದಾಗಲೇ ಕುಸಿದುಬಿದ್ದ ಚಾಲಕ..! ಬಸ್ ಡಿಕ್ಕಿ ಆಟೋ ಅಪ್ಪಚ್ಚಿ
ಮಂಗಳೂರು: ಸಂಚರಿಸುತ್ತಿದ್ದಾಗಲೇ ಸಿಟಿ ಬಸ್ ಚಾಲಕ ಶುಗರ್ ಲೋ ಆಗಿ ಕುಸಿದು ಬಿದ್ದ ಪರಿಣಾಮ ಬಸ್ ಮುಂಭಾಗದಲ್ಲಿ ಬರುತ್ತಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾದರೂ ಸ್ವಲ್ಪದರಲ್ಲಿ ಭಾರೀ ಅನಾಹುತ ತಪ್ಪಿದ ಘಟನೆ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ. ಮೋರ್ಗನ್ಸ್ ಗೇಟ್ – ಸ್ಟೇಟ್‌ಬ್ಯಾಂಕ್ ನಡುವೆ ಸಂಚರಿಸುವ ಪಿಟಿಸಿ ಎಂಬ ಖಾಸಗಿ ಬಸ್ ಗುರುವಾರ ಮಧ್ಯಾಹ್ನ ಕೊನೆಯ ಸ್ಟಾಪ್ ಸ್ಟೇಟ್‌ಬ್ಯಾಂಕ್ ಕಡೆಗೆ ಸಂಚರಿಸುತ್ತಿತ್ತು. ಬಸ್ ಮಿಲಾಗ್ರಿಸ್ ಸ್ಟಾಪ್‌ನಲ್ಲಿ ನಿಂತು ಹೊರಡಿತ್ತು. ಇನ್ನೇನು ಸಿಗ್ನಲ್ ತಲುಪುವ ಮೊದಲೇ ಬಸ್ ಚಾಲಕ…

