ಮಣೂರಿನ ಉದ್ಯಮಿ ಮನೆಗೆ ಬಂದ ಆಗಂತುಕರು: ಸಮಯ ಪ್ರಜ್ಞೆ ಮೆರೆದ ಕುಂದಾಪುರದ ಸೈನ್ ಇನ್ ಸೆಕ್ಯುರಿಟಿ ಸಂಸ್ಥೆ ಸಿಬ್ಬಂಧಿ…!!
ಕುಂದಾಪುರ : ಅಧಿಕಾರಿಗಳ ಸೋಗಿನಲ್ಲಿ ಮಣೂರಿನ ಉದ್ಯಮಿಯೊಬ್ಬರ ಮನೆಗೆ ಬಂದಿರುವ ಅಪರಿಚಿತರ ತಂಡದಿಂದ ಅ ಪರಿಸರದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ತಂಡದ ವರ್ತನೆ ಬಗ್ಗೆ ಸಾಕಷ್ಟು ಸಂಶಯ, ಅನುಮಾನಗಳು ಮೂಡಿದ್ದು, ಈ ಕುರಿತು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣೂರು ಗ್ರಾಮದ ಕವಿತಾರವರ ಮನೆಗೆ ಜು.25ರಂದು ಬೆಳಗ್ಗಿನ ಸಮಯದಲ್ಲಿ ಮನೆಯ ಹೊರಗಿನಿಂದ ಯಾರೋ ಬಾಗಿಲು ಬಡಿದು ಇದನ್ನು ನಿರ್ಲಕ್ಷಿಸಿ ಸ್ವಲ್ಪ ಸಮಯದ ನಂತರ ಕವಿತಾ ಹೊರಗೆ ಬಂದು ನೋಡಿದಾಗ ಯಾರೂ ಇರಲಿಲ್ಲ. ಈ ನಡುವೆ ಮನೆಯ ಸಿಸಿಟಿವಿ…

