ಉದ್ಯೋಗ ಮೀಸಲಾತಿ: ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್
ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ನೀಡಲಾಗಿದ್ದ ಸರ್ಕಾರದ ಉದ್ಯೋಗ ಮೀಸಲಾತಿ ಕರುಡು ವಿರುದ್ಧ ಮಾತನಾಡಿದ್ದ ಫೋನ್‌ಪೇ ಸಿಇಒ ಸಮೀರ್ ನಿಗಮ್ ಬೇಷರತ್ ಕ್ಷಮೆಯಾಚಿಸಿದ್ದಾರೆ. ಕರ್ನಾಟಕ ಮತ್ತು ಜನರನ್ನು ಅವಮಾನಿಸುವ ಉದ್ದೇಶ ನನ್ನದಲ್ಲ ಎಂದು ಫೋನ್‌ಪೇ ಸಿಇಒ ಮತ್ತು ಸಂಸ್ಥಾಪಕ ಸಮೀರ್ ನಿಗಮ್ ತಿಳಿಸಿದ್ದಾರೆ. ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ಸರ್ಕಾರವು ಮಸೂದೆ ಮಂಡಿಸಲು ನಿರ್ಧರಿಸಿತ್ತು. ಆದರೆ, ಖಾಸಗಿ ವಲಯದಿಂದ ವ್ಯಾಪಕ ವಿರೋಧ ವ್ಯಕ್ತವಾದ್ದರಿಂದ ತಾತ್ಕಾಲಿಕವಾಗಿ ತಡೆ ಹಿಡಿದಿದೆ.ಕಂಪನಿಗಳ ‘ಸಿ’ ಮತ್ತು ‘ಡಿ’ ದರ್ಜೆಯ…

