ಮಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ‘ಫಿಶ್ ಮಿಲ್’ : ಲಕ್ಷಾಂತರ ವಸ್ತುಗಳು ಬೆಂಕಿಗಾಹುತಿ
ಸುರತ್ಕಲ್: ಇಲ್ಲಿನ ಕೈಗಾರಿಕಾ ವಲಯ(ಎಂಎಸ್‌ಇಝಡ್)ದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಅಥೆಂಟಿಕ್ ಓಷನ್ ಟ್ರಶರ್‌ನಲ್ಲಿ ರವಿವಾರ ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ನೌಕರರು ಯಾರು ಇರಲಿಲ್ಲ. ಪರಿಣಾಮ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಥೆಂಟಿಕ್ ಓಷನ್ ಟ್ರೆಶರ್ ಕಂಪೆನಿ ಮೀನನ್ನು ಸ್ವಚ್ಚಗೊಳಿಸಿ ಮಾಂಸದ ರೂಪಕ್ಕೆ ಪರಿವರ್ತಿಸಿ 10 ಕೆ.ಜಿ. ಯ ಪ್ಯಾಕೆಟ್‌ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿ. ಈ ಸಂಸ್ಥೆಯ ಕೋಲ್ಡ್ ಸ್ಟೋರ್ ಸೆಕ್ಷನ್ ಹಾಗೂ ಕಟ್ಟಿಂಗ್ ಸೆಕ್ಷನ್‌ಗಳಲ್ಲಿ ದುರಸ್ತಿ…

