Headlines

2 ದಿನದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ..!

ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಎಂಬಂತೆ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ. ಜುಲೈ ತಿಂಗಳ ಹಣ ಇನ್ನೆರಡು ದಿನದಲ್ಲಿ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‘ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿದೆ. 2 ದಿನದಲ್ಲಿ ಜುಲೈ ತಿಂಗಳ ಹಣ ಜಮಾ ಆಗಲಿದೆ. ಆಗಸ್ಟ್ ತಿಂಗಳಿನ ಹಣ ಹಾಕುವ ಪ್ರಕ್ರಿಯೆ ಕೂಡ ನಡೆಯುತ್ತಿದೆ. ಪ್ರತಿನಿತ್ಯ ಸಮಸ್ಯೆ ಹೇಳಿಕೊಂಡು…

Read More

ಭೂಕುಸಿತದಿಂದ ತತ್ತರಿಸಿರುವ ವಯನಾಡಿಗೆ ಭೇಟಿ ನೀಡಲು ಕೇರಳಕ್ಕೆ ಆಗಮಿಸಿದ ಮೋದಿ

ಕಣ್ಣೂರು(ಕೇರಳ): ಭೂಕುಸಿತದಿಂದ ತತ್ತರಿಸಿರುವ ವಯನಾಡಿಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಇಂದು(ಶನಿವಾರ) ಕೇರಳಕ್ಕೆ ಆಗಮಿಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಮೋದಿ ಅವರ ವಿಮಾನ ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ವಾಗತಿಸಿದರು. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ವಯನಾಡ್‌ಗೆ ತೆರಳಿ ಭೂಕುಸಿತಕ್ಕೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ‘ಭೇಟಿ ಸಂದರ್ಭ ರಕ್ಷಣಾ ಕಾರ್ಯಾಚರಣೆ ಮತ್ತು ಪುನರ್ವಸತಿ ಕಾರ್ಯಗಳ…

Read More

ಉಳ್ಳಾಲ ನಿವಾಸಿ ವಿಸ್ಮಯಾಳನ್ನು ಮತಾಂತರಗೊಳಿಸಿ ವಿವಾಹವಾದ ಕೇರಳದ ನಟೋರಿಯಸ್ ಕ್ರಿಮಿನಲ್

ಮಂಗಳೂರು : ಕೇರಳದ ನಟೋರಿಯಸ್ ಕ್ರಿಮಿನಲ್ ವಿರುದ್ಧ ಲವ್‌ಜಿಹಾದ್ ಆರೋಪ ಪ್ರಕರಣ ತಿರುವು ಪಡೆದಿದ್ದು, ಇದೀಗ ಆತ ಹಿಂದೂ ವಿದ್ಯಾರ್ಥಿನಿಯನ್ನು ಮತಾಂತರಗೊಳಿಸಿ ವಿವಾಹವಾಗಿದ್ದಾನೆ. ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿ ವಿಸ್ಮಯಾಳನ್ನು ಅಶ್ಫಕ್ ಎಂಬ ನಟೋರಿಯಸ್ ಕ್ರಿಮಿನಲ್ ಪ್ರೀತಿಯ ಬಲೆಗೆ ಬೀಳಿಸಿದ್ದ. ಕೇವಲ ಎರಡೇ ತಿಂಗಳಲ್ಲಿ ಆತ ಪ್ರೀತಿಯ ಖೆಡ್ಡಾಕ್ಕೆ ಬೀಳಿಸಿದ್ದ ಎಂದು ಆರೋಪಿಸಲಾಗಿದೆ. ಮಂಗಳೂರಿನ ಉಳ್ಳಾಲದ ಅತ್ತೆ ಮನೆಯಲ್ಲಿದ್ದುಕೊಂಡು ಬಿಸಿಎ ಶಿಕ್ಷಣ ಪಡೆಯುತ್ತಿದ್ದ ವಿಸ್ಮಯಾಳನ್ನು ಜೂ.6ರಂದು ಅಲ್ಲಿಂದಲೇ ಕರೆದುಕೊಂಡು ಹೋಗಿದ್ದ ಅಶ್ಫಾಕ್.‌ ಬಳಿಕ ವಿದ್ಯಾನಗರ ಠಾಣೆ ಪೊಲೀಸರು…

Read More

ಬ್ರೆಜಿಲ್‌ನಲ್ಲಿ ವಿಮಾನ ದುರಂತ – 62 ಮಂದಿ ಸಾವು

ಸಾವೊ ಪೌಲೋ: ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಶುಕ್ರವಾರ ಬ್ರೆಜಿಲ್‌ನ ಸಾವೊ ಪಾಲೊ ಬಳಿ ಪತನಗೊಂಡಿದ್ದು ಅದರಲ್ಲಿದ್ದ ಸಿಬ್ಬಂದಿ ಪ್ರಯಾಣಿಕರು ಸೇರಿ ಎಲ್ಲಾ 62 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ ಸಾವೊ ಪೌಲೋ (Sao Paulo) ಮುಖ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್‌ಲೈನ್‌ Voepass ವಿಮಾನವು ಸಾವೊ ಪಾಲೊದಿಂದ ವಾಯುವ್ಯಕ್ಕೆ 80 ಕಿಮೀ (50 ಮೈಲುಗಳು) ದೂರದಲ್ಲಿರುವ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ. ವಿಮಾನ ವಸತಿ ಪ್ರದೇಶದಲ್ಲಿ ಬಿದ್ದರೂ ನಾಗರಿಕರ ಸಾವು ನೋವಾಗಿಲ್ಲ ಎಂದು ವರದಿಯಾಗಿದೆ. ಪೈಲಟ್‌ ವಿಮಾನ…

Read More

ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ- ಸಂಚಾರ ಸ್ಥಗಿತ

ಮಂಗಳೂರು: ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ್ದು ಪರಿಣಾಮ ಕೆಲ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಶುಕ್ರವಾರ(ಆಗಸ್ಟ್ 9) ದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ. ಬಾಳ್ಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.

Read More

ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ..!

ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ. ಚಂಪಾಕಪುರ ನಿವಾಸಿ ವಾಣಿ (32) ಮತ್ತು ಮಕ್ಕಳಾದ ಸಮರ್ಥ (12), ಸಂಪದ (6) ಮೃತರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ನಗರ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ರವಾನೆ ಮಾಡಲಾಗಿದ್ದು, ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಇನ್ನು ಈ…

Read More

ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ: ಸತ್ಯ ಒಪ್ಪಿಕೊಂಡ ಸಿಎಂ ಸಿದ್ಧರಾಮಯ್ಯ

ಮೈಸೂರು : ಮುಡಾ ಪ್ರಕರಣದ ವಿರುದ್ಧ ವಿಪಕ್ಷಗಳು ಪಾದಯಾತ್ರೆ ಮಾಡುತ್ತಿವೆ. ಇದಕ್ಕೆ ಕೌಂಟರ್ ನೀಡುವಂತೆ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದ್ದು,ಮೈಸೂರಿನ ಅರಮನೆ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ. ಆದರೆ ಹಗರಣದಲ್ಲಿ ನಾನು ಭಾಗಿಯಾಗಿಲ್ಲ. ವಿರೋಧ ಪಕ್ಷಗಳು ದಾಖಲೆ ಸಹಿತ ಯಾವುದೇ ಚರ್ಚೆ ನಡೆಸಿಲ್ಲ. ವಾಲ್ಮೀಕಿ ನಿಗಮದಲ್ಲಿ 84 ಕೋಟಿ 63, ಅವ್ಯವಹಾರ ನಡೆದಿದೆ ಎಂದು ಜನಾಂದೋಲನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು….

Read More

ಮದುವೆಗೆ ಒಪ್ಪಿಲ್ಲವೆಂದು, ಒಂದೇ ಮರಕ್ಕೆ ನೇಣಿಗೆ ಶರಣಾದ ಪ್ರೇಮಿಗಳು

ಬಹಳ ದಿನಗಳಿಂದ ಪ್ರೀತಿಸುತ್ತಿದ್ದ ಇಬ್ಬರು ಪ್ರೇಮಿಗಳಿಗೆ ಜಾತಿ ಅಡ್ಡ ಬಂದಿದೆ. ಹೀಗಾಗಿ ತಮ್ಮ ಮದುವೆಗೆ ಮನೆಯವರು ಒಪ್ಪಿಲ್ಲವೆಂದು ಮನನೊಂದು ಪ್ರೇಮಿಗಳೆಬ್ಬರೂ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಂದಗಾವ ಗ್ರಾಮದಲ್ಲಿ ನಡೆದಿದೆ. ಹೌದು ಗ್ರಾಮದ ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು ಎಂದು ತಿಳಿದುಬಂದಿದೆ.ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಹುಡುಗನ ಮನೆಯವರು ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆಯೆ ಪರಿಹಾರ ಎಂದು…

Read More

ಪಿಎಸ್ ಐ ಪರಶುರಾಮ ಮನೆಯಲ್ಲಿ ಕಾಂಗ್ರೆಸ್ ಶಾಸಕನ ಲೆಟರ್ ಹೆಡ್ ಪತ್ತೆ..!

ಯಾದಗಿರಿ ಪಿಎಸ್‌ಐ ಪರಶುರಾಮ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಅಧಿಕಾರಿಗಳು ಗುರುವಾರ ಪೊಲೀಸ್​ ವಸತಿ ಗೃಹದ ಪರಶುರಾಮ ಮನೆಗೆ ತೆರಳಿ ಸ್ಥಳ ಮಹಜರು ನಡೆಸಿದ್ದಾರೆ. ಮನೆಯಲ್ಲಿ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹೆಸರಿನ ಲೆಟರ್​ ಹೆಡ್​ ಪತ್ತೆಯಾಗಿದೆ. ಕಾನೂನು ಸುವ್ಯವಸ್ಥೆ ಪೋಸ್ಟಿಂಗ್ ಬೇರೆಯವರಿಗೆ ಕೊಟ್ಟ ಹಿನ್ನೆಲೆಯಲ್ಲಿ ಅಪರಾಧ ವಿಭಾಗದ ಪೋಸ್ಟಿಂಗ್ ಕೊಡಿ ಎಂದು ಪರಶುರಾಮ ಕೇಳಿದ್ದರು. ಇದೇ ಕಾರಣಕ್ಕೆ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಯಾದಗಿರಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್​ಐ ಪೋಸ್ಟಿಂಗ್​ಗಾಗಿ ಲೆಟರ್ ಹೆಡ್…

Read More

ಪರಶುರಾಮ ಥೀಂ ಪಾರ್ಕ್ ವಿವಾದ : ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ..!

ಉಡುಪಿ : ಜಿಲ್ಲೆಯಾದ್ಯಂತ ಭಾರೀ ಸದ್ದು ಮಾಡಿರುವ ಪರಶುರಾಮ ಥೀಂ ಪಾರ್ಕ್ ವಿವಾದದ ವಿಚಾರವಾಗಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಮುಂದುವರೆದಿದೆ.  ಈ ಸಂಬಂಧ ನಡೆದ ಜಗಳದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದು ಈ ಕುರಿತು ದೂರು ದಾಖಲಾಗಿದೆ. ಕಾಂಗ್ರೆಸ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಕಾರ್ಯಕರ್ತರು ಪೋಸ್ಟ್ ಮಾಡಿದ್ದರು. ಈ ವಿಚಾರವಾಗಿ ದೊಂಡೇರಂಗಡಿ ಬಿಜೆಪಿ ಕಾರ್ಯಕರ್ತರಾದ ಉದಯ್‌ ನಾಯ್ಕ್‌, ನಿತ್ಯಾನಂದ ಕುಲಾಲ್‌, ರೂಪೇಶ್‌ ಕುಮಾರ್‌ ಎಂಬವರ ಮೇಲೆ ಹಲ್ಲೆ ನಡೆದಿದೆ. ಕಾಂಗ್ರೆಸ್ ನಾಯಕ ಉದಯಕುಮಾರ್…

Read More